ಕೆಲ ಅಧಿಕಾರಿಗಳಿಂದ ಹಿಂದೂ ವಿರೋಧಿ ನೀತಿ : ಈಶ್ವರಪ್ಪ ಆಕ್ರೋಶ
ಶಿವಮೊಗ್ಗ: ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಯಶಸ್ವಿಯಾಗಿದೆ. ಆದರೆ ಕೆಲ ಅಧಿಕಾರಿಗಳು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಅಧಿಕಾರಿ ಗಳು ಹಿಂದುತ್ವ ಮರೆಯುತ್ತಿದ್ದಾರೆ. ಇದು ಸರಿಯಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕೆಲವು ಮುಸ್ಲಿಂ ಗೂಂಡಾಗಳು ಕಾಂಗ್ರೆಸ್ ಸರ್ಕಾರ ತಮ್ಮ ಪರವಾಗಿದೆ ಎಂದು ಭಾವಿಸಿ ದರೆ ತಪ್ಪು. ಹರ್ಷನ ಹತ್ಯೆ ಘಟನೆ ಯನ್ನು ನೆನಪಿಟ್ಟುಕೊಳ್ಳಬೇಕು ಎಂದರು.
ಬಿಜೆಪಿ ರಾಜಧ್ಯಕ್ಷ ನೇಮಕ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ರಾಜ್ಯದ ಬಿಜೆಪಿಯ ವಿರೋಧ ಪಕ್ಷದ ನಾಯಕ ಹಾಗೂ ರಾಜ ಧ್ಯಕ್ಷರ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿದೆ. ನಮ್ಮ ಕಾರ್ಯ ಕರ್ತರು ಕೂಡ ಇದನ್ನೇ ಕೇಳುತ್ತಿ ದ್ದಾರೆ. ಕಾಂಗ್ರೆಸ್ನವರು ಇದೇ ವಿಚಾರದಲ್ಲಿ ನಮ್ಮನ್ನು ಟೀಕಿಸುತ್ತಿ ದ್ದಾರೆ. ಸದನದಲ್ಲಿ ಲೇವಡಿ ಮಾಡು ತ್ತಿದ್ದಾರೆ. ಕೇಂದ್ರದ ಬಿಜೆಪಿ ನಾಯ ಕರೂ ರಾಜ್ಯದ ಬೆಳವಣಿಗೆಯನ್ನು ಗಮನಿಸು ತ್ತಿದ್ದಾರೆ. ಆದಷ್ಟು ಬೇಗ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳ ಬೇಕು ಎಂದು ಮನವಿ ಮಾಡಿದರು.
ಈ ವಿಚಾರದಲ್ಲಿ ನಮ್ಮ ತಪ್ಪೇ ನಾದರೂ ಇದ್ದರೆ ಕರೆದು ಬುದ್ದಿ ಹೇಳಲಿ. ನಮಗೆ ಗೊತ್ತಾಗದೆ ಯಾವುದಾದರೂ ತಪ್ಪಾಗಿರಬ ಹುದು. ನರೇಂದ್ರ ಮೋದಿಯ ವರು ಮತ್ತೆ ಪ್ರಧಾನಿಯಾಗಬೇ ಕೆಂಬುದು ನಮ್ಮ ಆಸೆ. ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಒಂದಾಗಿ ೨೮ ಸ್ಥಾನ ಗೆಲ್ಲಬೇಕಿದೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ವಿಪಕ್ಷ ನಾಯಕ ಹಾಗೂ ರಾಜ ಧ್ಯಕ್ಷ ಸ್ಥಾನ ಘೋಷಿಸಲಿ ಎಂದರು.
ಸಂಸತ್ ಚುನಾವಣೆ ಹತ್ತಿರ ಬರುತ್ತಿದೆ. ನಳೀನ್ ಕುಮಾರ್ ಕಟೀಲರನ್ನೇ ಮುಂದುವರೆಸುವು ದಾದರೆ ಮುಂದುವರಿಸಲಿ. ಯಾ ವುದಾದರೂ ತೀರ್ಮಾನ ವನ್ನು ಆದಷ್ಟು ಬೇಗನೇ ತೆಗೆದುಕೊಳ್ಳಲಿ. ಈ ಬಗ್ಗೆ ಕೇಂದ್ರದ ನಾಯಕರಿಗೆ ನಾನು ಮನವಿ ಮಾಡುತ್ತೇನೆ ಎಂದರು.