ಗೀತಾ ಶಿವರಾಜ್ ನಾಮಪತ್ರ ಸಲ್ಲಿಕೆ; ಹರಿದುಬಂದ ಜನಸಾಗರ…

1

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದು ಅಪಾರ ಬೆಂಬಲಿಗರೊಂದಿಗೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಬೃಹತ್ ಮೆರವಣಿಗೆ ಯಲ್ಲಿ ಆಗಮಿಸಿ ಜಿ ಚುನಾವಣಾಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನಟ ಶಿವರಾಜ್ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಸಿದ್ಧಲಿಂಗಯ್ಯ ಇನ್ನಿತರರಿದ್ದರು.
ಬಳಿಕ ಗೀತಾ ಶಿವರಾಜ್ ಕುಮಾರ್ ಅವರು ಗಾಂಧಿ ಬಜರ್ ನಿಂದ ಮತ್ತೆ ಮೆರವಣಿಗೆಯಲ್ಲಿ ಪಾಲ್ಗೊಂಡು ಶಿವಪ್ಪನಾಯಕ ವೃತ್ತ, ಅಮೀರ್ ಅಹಮ್ಮದ್ ವೃತ್ತ, ಗೋಪಿ ವೃತ್ತದ ಮೂಲಕ ಜಿಧಿಕಾರಿಗಳಿಗೆ ಕಚೇರಿಗೆ ಬಂದು ಅಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಬಳಿಕ ಎರಡನೇ ಸೆಟ್ ನಾಮಪತ್ರ ಸಲ್ಲಿಸಿದರು.
ಮೆರವಣಿಗೆಯುದ್ಧಕ್ಕೂ ಹಲವು ಕಡೆ ಬೃಹತ್ ಪ್ರಮಾಣದ ಸೇಬು, ಹೂವಿನ ಹಾರಗಳನ್ನು ಗೀತಾ ಶಿವರಾಜ್ ಕುಮಾರ್ ಅವರಿಗೆ ಹಾಕಿ ಶುಭ ಕೋರಲಾಯಿತು. ಮೆರವಣಿಗೆಯಲ್ಲಿ ವಿವಿಧ ಜನಪದ ಕಲಾತಂಡಗಳು ಭಾಗವಹಿಸಿದ್ದವು.
ಜಿಯ ವಿವಿಧ ತಾಲೂಕುಗಳಿಂದ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ಅಲ್ಲಲ್ಲಿ ಮಜ್ಜಿಗೆ ನೀರು ಮತ್ತು ಪಾನಕದ ವ್ಯವಸ್ಥೆ ಮಾಡಲಾಗಿತ್ತು. ಬೃಹತ್ ಎರಡು ಎಲ್‌ಇಡಿ ಪರದೆಯ ಮೇಲೆ ಗೀತಾ ಶಿವರಾಜ್ ಕುಮಾರ್ ಅವರ ಪ್ರಚಾರದ ದೃಶ್ಯಾವಳಿಗಳನ್ನು ಮತ್ತು ಕಾಂಗ್ರೆಸ್ ಪಕ್ಷದ ೫ ಗ್ಯಾರಂಟಿಗಳ ಪ್ರಾತ್ಯಕ್ಷಿಕೆ ತೋರಿಸಲಾಯಿತು.
ಗಾಂಧಿ ಬಜರ್‌ನಲ್ಲಿ ಒಂದು ಎಲ್‌ಇಡಿ ಮುರಿದು ಬಿದ್ದು ಇಬ್ಬರಿಗೆ ಗಾಯವಾದ ಘಟನೆಯೂ ನಡೆಯಿತು. ಕಾಂಗ್ರೆಸ್ ಕಾರ್ಯಕರ್ತರು, ಶಿವರಾಜ್ ಕುಮಾರ್ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಆಗಮಿಸಿ ಬಂಗಾರಪ್ಪ, ಕಾಂಗ್ರೆಸ್ ಪಕ್ಷ, ಶಿವಣ್ಣ, ಗೀತಾ ಅವರ ಪರವಾಗಿ ಘೋಷಣೆ ಕೂಗಿದರು.
ಜನಸಾಗರದ ನಡುವೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡಿದರು.
ಈ ಸಂದರ್ಭದಲ್ಲಿ ಮಾತ ನಾಡಿದ ಗೀತಾ ಶಿವರಾಜ್ ಕುಮಾರ್ ಅವರು, ನಾನು ನಿಮ್ಮ ಮನೆ ಮಗಳು, ತಂದೆಗೆ ನೀಡಿದಂತೆ ನನಗೂ ನೀವೆಲ್ಲಾ ಬೆಂಬಲಿಸಿ ಆಶೀರ್ವದಿಸಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಮಂಜುನಾಥ ಭಂಡಾರಿ, ಕಿಮ್ಮನೆ ರತ್ನಾಕರ್, ಶಾಸಕರಾದ ಬೇಳೂರು ಗೋಪಾಲ ಕೃಷ್ಣ, ಸಂಗಮೇಶ್ ಹಾಗೂ ಪ್ರಮುಖರಾದ ವಿನಯ್ ಕುಮಾರ್ ಸೊರಕೆ, ಹೆಚ್.ಎಸ್. ಸುಂದರೇಶ್, ಎಂ. ಶ್ರೀಕಾಂತ್, ಎನ್. ರಮೇಶ್, ಜಿ.ಡಿ. ಮಂಜುನಾಥ್, ಕಾಶಿ ವಿಶ್ವನಾಥ್, ಹೆಚ್.ಸಿ. ಯೋಗೀಶ್, ರೇಖಾ ರಂಗನಾಥ್, ಬಲ್ಕಿಶ್ ಬಾನು, ಕಲೀಂ ಪಾಷಾ, ಎಸ್.ಕೆ. ಮರಿಯಪ್ಪ, ಮೊದಲಾದವರಿದ್ದರು.