ಶಿಕ್ಷಣದಿಂದ ಮಾತ್ರ ಬಡತನ ನಿವಾರಣೆ ಸಾಧ್ಯ…
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಒಂಟಿಹಾಳ್ ಗ್ರಾಮ ದಲ್ಲಿ ಶ್ರೀಆಂಜನೇಯಸ್ವಾಮಿ ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸರೋಹಣ, ಗೋಪುರ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ನಿಮ್ಮ ಮಕ್ಕಳಿಗೆ ಶಿಕ್ಷಣ ಕಲಿಸಲು ಆಗಲಿಲ್ಲ ಎಂದರೆ ವಾಲ್ಮೀಕಿ ಗುರುಪೀಠದಲ್ಲಿ ಶಾಲೆಗಳನ್ನು ತೆರೆಯಲಾಗಿದೆ. ನಿಮ್ಮ ಮಕ್ಕಳನ್ನು ಗುರುಗಳ ಮಡಲಿಗೆ ಹಾಕಿ ಶಿಕ್ಷಣ ಕೊಡಿಸುವ ಕಾರ್ಯ ಮಾಡಬೇಕೆಂದು ಸಲಹೆ ನೀಡಿದರು.
ಸಮಾಜದ ಕಳಕಳಿ ಹೊಂದಿರುವ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ, ಮೀಸಲಾತಿಯಿಂದ ವಂಚಿತರಾದ ಮಕ್ಕಳಿಗೆ ಮೀಸಲಾತಿ ಸಿಗಬೇಕೆಂದು ಬೆಂಗಳೂರಿಗೆ ಪಾದಯಾತ್ರೆ ಮಾಡಿ ಮಳೆ, ಚಳಿ, ಬಿಸಿಲು ಎನ್ನದೆ ಸುದೀರ್ಘ ೨೫೮ ದಿನಗಳ ಕಾಲ ಧರಣಿ ಸತ್ಯಾಗ್ರಹ ಮಾಡಿ ಸರ್ಕಾರವನ್ನೇ ಅವರ ಬಳಿ ಕರೆಸಿಕೊಂಡು ಮೀಸಲಾತಿ ಪಡೆಯುವಲ್ಲಿ ಯಶಸ್ವಿಯಾದ ಶ್ರೀಗಳಿಗೆ ಇದೇ ಸಂದರ್ಭದಲ್ಲಿ ಅಭಿನಂದಿಸಿದರು.
ಸಾನ್ನಿಧ್ಯ ವಹಿಸಿ ಮಾತನಾಡಿದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ, ಶ್ರೀರಾಮನ ಚರಿತ್ರೆ ಯನ್ನು ಇಡೀ ಜಗತ್ತಿಗೆ ಪರಿಚಯಿಸಿದವರು ಆದಿಕವಿ ಮಹರ್ಷಿ ವಾಲ್ಮೀಕಿಯವರು. ಅಂತಹ ವಾಲ್ಮೀಕಿ ಕುಲದಲ್ಲಿ ಹುಟ್ಟಿದ ನಾವು ಅವರಂತೆಯೇ ಆದರ್ಶ ಪುರುಷರಾಗಿ ಬಾಳಿ ಜಗತ್ತಿಗೆ ಬೆಳಕಾಗಬೇಕೆಂದರು.
ಮನುಷ್ಯನ ದುರಾಸೆಯಿಂದ ಪರಿಸರ ನಾಶವಾಗಿ ಭೂಮಿಯ ತಾಪಮಾನ ಹೆಚ್ಚಾಗುತ್ತಿದೆ. ಇದರ ಪರಿಣಾಮ ಅತಿವಷ್ಟಿ ಮತ್ತು ಅನಾವಷ್ಟಿ ಆಗಿ ಮಳೆ, ಬೆಳೆ ಇಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿzರೆ. ಹೀಗಾಗಿ ಭಗವಂತನ ನಾಮಸ್ಮರಣೆ ಮಾಡುವ ಮೂಲಕ ಸಕಾಲಕ್ಕೆ ಮಳೆ, ಬೆಳೆ ಕೊಡುವಂತೆ ಪ್ರಾರ್ಥನೆ ಸಲ್ಲಿಸಬೇಕಾಗಿದೆ ಎಂದರು.
ಪ್ರಮುಖರಾದ ಹನುಮಂತಪ್ಪ ಐಗೂರು, ರುದ್ರಸ್ವಾಮಿ, ಒಂಟಿಹಾಳ್ ಶಿವಣ್ಣ, ಮಹಾ ರುದ್ರಣ್ಣ, ಗೌರಮ್ಮ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.