ಅಪಘಾತ: ಪತ್ರಕರ್ತೆ ಸೇರಿ ಮೂವರು ಮಹಿಳೆಯರ ಸಾವು…
ತುಮಕೂರು : ಚಲಿಸುತ್ತಿದ್ದ ಖಾಸಗಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ದೆಹಲಿ ಮೂಲದ ಪತ್ರಕರ್ತೆ ಸೇರಿ ಮೂವರು ಮಹಿಳೆಯರು ಸಾವನ್ನ ಪ್ಪಿದ್ದು, ಸುಮಾರು ೨೦ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶಿರಾ ತಾಲ್ಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆ ಸರಹದ್ದಿನ ರಾಷ್ಟ್ರೀಯ ಹೆzರಿ-೪೮ರಲ್ಲಿ ಇಂದು ಮುಂಜಾನೆ ನಡೆದಿದೆ.
ಮೃತಪಟ್ಟಿರುವವರನ್ನು ದೆಹಲಿ ಮೂಲದ ಪತ್ರಕರ್ತೆ ಊರ್ವಿ ನಯನ್ (೨೫), ಪ್ರಿಯಾಂಕ (೨೫) ಹಾಗೂ ಶುಬಾಳಿ ಸಿಂಗ್ (೨೮) ಎಂದು ಗುರುತಿಸಲಾಗಿದೆ. ಗೋವಾ ದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಮಾರ್ಗಮಧ್ಯೆ ಮುಂಜಾನೆ ೪.೧೫ರ ಸುಮಾರಿನಲ್ಲಿ ಶಿರಾ ತಾಲ್ಲೂಕು ಕಳ್ಳಂಬೆಳ್ಳ ಸಮೀಪದ ಚಿಕ್ಕನಹಳ್ಳಿ ಸೇತುವೆ ಬಳಿ ರಾಷ್ಟ್ರೀಯ ಹೆzರಿ-೪೮ರಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿ ಪಲ್ಟಿ ಹೊಡೆದಿದೆ. ಪರಿಣಾಮ ಬಸ್ನಲ್ಲಿದ್ದ ಸುಮಾರು ೨೯ ಪ್ರಯಾಣಿಕರ ಪೈಕಿ ಇಬ್ಬರು ಸ್ಥಳದ ಸಾವನ್ನಪ್ಪಿದರೆ ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅಸುನೀಗಿzರೆ. ಗಾಯಗೊಂಡಿರುವ ಗಾಯಾಳು ಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಸ್ಪತ್ರೆಗೆ, ಖಾಸಗಿ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಡಿವೈಡರ್ಗೆ ಗುದ್ದಿ ಉರುಳಿದ ರಭಸಕ್ಕೆ ಬಸ್ ಪಕ್ಕದ ತುಮಕೂರು ಕಡೆಗೆ ಹೋಗುವ ರಸ್ತೆಗೆ ಬಿದ್ದಿದೆ. ಈ ಅಪಘಾತಕ್ಕೆ ಅತಿ ವೇಗ ಹಾಗೂ ಚಾಲಕನ ಅಜಗರೂಕತೆಯೇ ಕಾರಣ ಎಂದು ಹೇಳಲಾಗಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆzರಿ-೪೮ರಲ್ಲಿ ವಾಹನಗಳ ಸಂಚಾರ ಕೆಲವು ಗಂಟೆಗಳ ಕಾಲ ಅಸ್ತವ್ಯಯಸ್ತಗೊಂಡಿತ್ತು.
ಈ ಸಂಬಂಧ ಕಳ್ಳಂಬೆಳ್ಳ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿzರೆ.