ಜಗತ್ತಿಗೆ ಸನ್ಮಾರ್ಗದ ಸಂದೇಶ ಸಾರಿದವರು ಮಹರ್ಷಿ ವಾಲ್ಮೀಕಿ: ಬಿವೈಆರ್
ಶಿವಮೊಗ್ಗ: ಮಹಾಕಾವ್ಯ ರಾಮಾಯಣದ ವೈಶಿಷ್ಟ್ಯತೆ ಮತ್ತು ಶತಶತಮಾನಗಳಿಂದ ಗಳಿಸಿರುವ ಜನಪ್ರಿಯತೆಯಿಂದಾಗಿ ಕೃತಿಕಾರ ಮಹರ್ಷಿ ವಾಲ್ಮೀಕಿಯವರು ಕವಿಕುಲ ಸಾರ್ವಭೌಮರಾಗಿ ಸಾಹಿತ್ಯ ಲೋಕ ದಲ್ಲಿ ಗುರುತಿಸಲ್ಪಡುತ್ತಾರೆ ಹಾಗೂ ಆರಾಧಿಸಲ್ಪಡುತ್ತಾರೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು.
ಅವರು ಇಂದು ಜಿಲ್ಲಾಡಳಿತ, ಜಿಪಂ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ಶಿವಮೊಗ್ಗ ಮಹಾನಗರ ಪಾಲಿಕೆ ಆಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಉದ್ಘಾಟಿಸಿ ಮಾತನಾಡುತ್ತಿದ್ದರು.
ತತ್ವದಿಂದ ದೈವತ್ವಕ್ಕೆ ಏರಿದ ತಮ್ಮ ಕೃತಿಗಳಲ್ಲಿ ಮಾನವೀಯ ಮಲ್ಯಗಳನ್ನು ಜಗತ್ತಿಗೆ ಸಾರಿದ ಮಹನೀಯ ವಾಲ್ಮೀಕಿ ಅವರು ಆರಂಭದಲ್ಲಿ ಬೇಡರಾಗಿ ನಂತರ ಸಂತರಾಗಿ, ಅಹಿಂಸೆಯ ಪ್ರತಿಪಾದಕ ರಾಗಿ ಜಗತ್ತಿಗೆ ಸನ್ಮಾರ್ಗದ ಸಂದೇಶ ಸಾರಿದವರು ಮಹರ್ಷಿ ವಾಲ್ಮೀಕಿ ಎಂದವರು ಬಣ್ಣಿಸಿದರು.
ಪ್ರಪಂಚದ ವಿವಿಧ ಭಾಷೆಗಳಿಗೆ ಅನುವಾದಗೊಂಡು ಜಗತ್ತಿನ ಪ್ರತಿಸ್ಥಿತ ವಿಶ್ವವಿದ್ಯಾಲಯಗಳಲ್ಲಿ ತತ್ವಜನಿ ವಾಲ್ಮೀಕಿ ಅವರ ಕೃತಿ ಯನ್ನು ಓದುವ ಮೂಲಕ ಅವರ ಆದರ್ಶಗಳನ್ನು ಹಾಗೂ ಅವರು ಹಾಕಿಕೊಟ್ಟ ಮೇಲ್ಪಂಕ್ತಿಯನ್ನು ಅನುಕರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಸಹ್ಯಾದ್ರಿ ಕಲಾ ಕಾಲೇಜಿನ ಉಪನ್ಯಾಸಕ ಡಾ. ಮೋಹನ್ ಚಂದ್ರಗುತ್ತಿ ಅವರು ಉಪನ್ಯಾಸ ನೀಡಿ, ಇಂದಿನ ಯುವ ಜನತೆಗೆ ವಾಲ್ಮಿಕಿ, ಮದಕರಿ ನಾಯಕರಂತವರು ಆದರ್ಶವಾಗಬೇಕು ಎಂದರು.
ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ್ ಸರ್ಜಿ ಮಾತನಾಡಿ
ಒಬ್ಬ ಸಾಮಾನ್ಯವ್ಯಕ್ತಿ ಮಹಾಕವಿ ಪ್ರಪಂಚಕ್ಕೆ ಅದ್ಬುತ ಗ್ರಂಥವನ್ನು ನೀಡಿದ ಶ್ರೇಷ್ಠವ್ಯಕ್ತಿ ಮಹರ್ಷಿ ವಾಲ್ಮೀಕಿಅವರು ನಮಗೆ ನಮ್ಮ ಮಕ್ಕಳಿಗೆ ಒಳ್ಳೆಯ ಸಂಸ್ಕಾರವನ್ನು ಜಯಂತಿಗಳ ಮೂಲಕ ತೆಗೆದುಕೊಳ್ಳಬೇಕಾಗಿದೆ ಎಂದರು.
ಶಾಸಕ ಎಸ್ ಎನ್ ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಭೋವಿ ನಿಗಮದ ಅಧ್ಯಕ್ಷ ಎಸ್. ರವಿ ಕುಮಾರ್, ಜಿಲ್ಲಾ ನಾಯಕ ವಾಲ್ಮೀಕಿ ಸಂಘದ ಅಧ್ಯಕ್ಷ ಹೆಚ್. ಟಿ. ಬಳಿಗಾರ್, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಸಿಇಓ ಎನ್ ಹೇಮಂತ್, ಜಿಲ್ಲಾ ರಕ್ಷಣಾಧಿಕಾರಿ ಜಿ. ಕೆ. ಮಿಥುನ್ ಕುಮಾರ್ ಇನ್ನಿತರರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ಡಿಸಿ ಕಚೇರಿಯಿಂದ ಕಲಾತಂಡಗಳೊಂದಿಗೆ ಹೊರಟ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆಯು ವಿಜೃಂಭಣೆಯಿಂದ ನೆರವೇರಿತು.