ಶಿವಮೊಗ್ಗ ಜಿಲ್ಲೆಯ ೭ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ: ಶೇಷಾದ್ರಿ…
ಶಿವಮೊಗ್ಗ: ಜಿಯಲ್ಲಿ ಈ ಬಾರಿ ಕಾಂಗ್ರೆಸ್ ಎ ಏಳು ಸ್ಥಾನಗಳಲ್ಲಿಯೂ ಗೆಲುವು ಸಾಧಿಸುವುದು ಖಚಿತ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಕುರುಬ ಸಮಾಜದ ಮುಖಂಡ ಎಸ್.ಪಿ.ಶೇಷಾದ್ರಿ ಹೇಳಿದರು.
ಅವರು ಇಂದು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಾ. ಶ್ರೀನಿವಾಸ ಕರಿಯಣ್ಣ ಹಾಗೂ ನಗರ ಅಭ್ಯರ್ಥಿ ಹೆಚ್.ಸಿ. ಯೋಗೀಶ್ ಅವರಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಶುಭ ಹಾರೈಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷ ಹಲವು ಗ್ಯಾರಂಟಿಗಳನ್ನು ನೀಡಿದೆ. ಹಾಗಾಗಿ ಗ್ಯಾರಂಟಿಯಾಗಿ ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತದೆ. ಪಕ್ಷದಲ್ಲಿ ಹೊಸ ಸಂಚಲನ ಉಂಟಾಗಿದ್ದು, ಶಿವಮೆಗ್ಗ ಜಿಯಲ್ಲು ಕೂಡ ಪಕ್ಷ ಜಯಭೇರಿ ಬಾರಿಸಲಿದೆ ಎಂದರು.
ಬಿಜೆಪಿಯ ಯಾವುದೇ ಸೂತ್ರಗಳು ಕರ್ನಾಟಕಕ್ಕೆ ಅನುಕೂಲವಾಗುವುದಿಲ್ಲ. ಆ ಪಕ್ಷೆದ ಕಾರ್ಯಕರ್ತರು ಭ್ರಮನಿರಸನಗೊಂಡಿzರೆ. ಭಾವನಾತ್ಮ ವಿಚಾರಗಳು ಅನುಕೂಲಕರವಾಗುವುದಿಲ್ಲ. ಕಳೆದ ಬಾರಿ ಕಾಂಗ್ರೆಸ್ ಸರ್ಕಾರ ಇzಗ ಭ್ರಷ್ಟಾಚಾರಕ್ಕೆ ಮಣೆ ಹಾಕಿರಲಿಲ್ಲ. ಆದರೆ ಬಿಜೆಪಿ ಸರ್ಕಾರ ಶೇ.೪೦ರಷ್ಟು ಕಮಿಷನ್ ಸೇರಿದಂತೆ ಅನೇಕ ವಿಷಯಗಳಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು.
ಎಐಸಿಸಿ ನಾಯಕರಾದ ರಾಹುಲ್ ಗಾಂಧಿಯವರು ೩೯೮೦ ಕಿ.ಮೀ. ಪಾದಯಾತ್ರೆ ಮಾಡಿ ದಾಖಲೆ ಮಾಡಿzರೆ. ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ೧೪೦ ಸೀಟುಗಳನ್ನು ಗೆದ್ದು ಸ್ವತಂತ್ರವಾಗಿ ಆಡಳಿತ ನಡೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.