ಮಲೇರಿಯಾ ಶೀಘ್ರ ಪತ್ತೆ, ಸಂಪೂರ್ಣ ಚಿಕಿತ್ಸೆಯಿಂದ ನಿರ್ಮೂಲನೆ ಸಾಧ್ಯ…

ಶಿವಮೊಗ್ಗ: ಮಲೇರಿಯಾ ನಿರ್ಮೂಲನೆ ಗುರಿ ತಲುಪಲು ಹೊಸ ಹೊಸ ವಿಧಾನಗಳನ್ನು ಅಳವಡಿಸಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ಜಿ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕಸಬಿ ಅಭಿಪ್ರಾಯಪಟ್ಟರು.
ಶಿವಮೊಗ್ಗದಲ್ಲಿ ಆರೋಗ್ಯ ಇಲಾಖೆ, ಬಾಪೂಜಿ ಆಯುರ್ವೇದ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ, ಬಾಪೂಜಿ ನರ್ಸಿಂಗ್ ಕಾಲೇಜ್, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಶಿವಮೊಗ್ಗ ಮತ್ತು ನಗರದ ಎ ರೋಟರಿ ಕ್ಲಬ್‌ಗಳ ಸಹಯೋಗದಲ್ಲಿ ಬಾಪೂಜಿ ನರ್ಸಿಂಗ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಲೇರಿಯಾ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವರದಿಗಳ ಪ್ರಕಾರ ವಿಶ್ವದಲ್ಲಿ ಪ್ರತಿ ವರ್ಷ ೨೪೧ ಮಿಲಿಯನ್ ಮಲೇರಿಯಾ ಪ್ರಕರಣಗಳು ವರದಿ ಆಗುತ್ತಿದ್ದು, ೬ ಲಕ್ಷ ಮರಣಗಳು ಸಂಭವಿಸುತ್ತಿವೆ. ಶಿವಮೊಗ್ಗ ಜಿಯಲ್ಲಿ ೧೦ ವರ್ಷಗಳ ಅಂಕಿ ಆಂಶ ಅವಲೋಕಿಸಿದಾಗ ಮಲೇರಿಯಾ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಶೇ. ೯೫ ರಷ್ಟು ಕಡಿಮೆ ಆಗಿದೆ. ೨೦೨೫ರ ವೇಳೆಗೆ ಜಿಯಿಂದ ಮಲೇರಿಯಾ ನಿರ್ಮೂಲನೆ ಮಾಡುವ ಗುರಿಯತ್ತ ಸಾಗುತ್ತಿರುವುದು ಆರೋಗ್ಯ ಇಲಾಖೆಯ ವೈದ್ಯರು ಮತ್ತು ಸಿಬ್ಬಂದಿಯವರ ಪರಿಶ್ರಮಕ್ಕೆ ದೊರೆತ ಪ್ರತಿಫಲವಾಗಿದೆ ಎಂದರು. ಸ್ವಯಂರಕ್ಷಣಾ ವಿಧಾನ ಮತ್ತು ಪರಿಸರ ಸ್ವಚ್ಛತೆ ಕಾಪಾಡಿ ಕೊಳ್ಳುವ ಮೂಲಕ ಪ್ರತಿಯೊಬ್ಬರೂ ರೋಗವಾಹಕ ಖಾಯಿಲೆಗಳ ನಿಯಂತ್ರಣದಲ್ಲಿ ಸಹಕರಿಸುವಂತೆ ಕೋರಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿ ಶಸ್ತ್ರ ಚಿಕಿತ್ಸಕ ಡಾ. ಸಿದ್ದನಗೌಡ ಪಾಟೀಲ್ ಮಾತನಾಡಿ, ನಮ್ಮಲ್ಲಿ ಮಲೇರಿಯಾ ಇಲ್ಲದಿದ್ದರೂ ಉತ್ತರ ಭಾರತದಿಂದ ಜಿಗೆ ಆಗಮಿಸುವ ವಲಸಿಗರ ಬಗ್ಗೆ ನಿಗಾವಹಿಸಿ ತಪ್ಪದೇ ರಕ್ತಲೇಪನ ಪರೀಕ್ಷೆಗೊಳಪಡಿಸು ವಂತೆ ಸೂಚಿಸಿದರು.
ರೋಟರಿ ವಲಯ ಸಹಾಯಕ ಗವರ್ನರ್ ಸುನಿತಾ ಶ್ರೀಧರ್ ಮಾತನಾಡಿ, ವಿಶ್ವದಲ್ಲಿ ಪೋಲಿಯೋ ನಿರ್ಮೂಲನೆಯಲ್ಲಿ ಸಹಕರಿಸಿದಂತೆ ಮಲೇರಿಯಾ ನಿರ್ಮೂಲನೆಗೂ ಸಹಕರಿಸಲು ರೋಟರಿ ಸದಾ ಸಿದ್ದವಿದೆ ಎಂದರು.
ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ, ರೋಟರಿ ಶಿವಮೊಗ್ಗ ಅಧ್ಯಕ್ಷ ಎನ್ ವಿ ಭಟ್, ರೋಟರಿ ಶಿವಮೊಗ್ಗ ಉತ್ತರದ ಅಧ್ಯಕ್ಷ ಜಗದೀಶ್ ಸಜ, ರೋಟರಿ ಶಿವಮೊಗ್ಗ ಮಿಡ್ ಟೌನ್ ಅಧ್ಯಕ್ಷೆ ವೀಣಾ ಸುರೇಶ್, ರೋಟರಿ ರಿವರ್ ಸೈಡ್ ಅಧ್ಯಕ್ಷ ದೇವೆಂದ್ರಪ್ಪ ಸಹಕಾರ ನೀಡಿದರು.
ಕಾಲೇಜಿನ ಪ್ರಾಚಾರ್ಯ ಡಾ. ಪಂಕಜ್ ಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿ ಆರ್‌ಸಿಹೆಚ್ ಅಧಿಕಾರಿ ಡಾ. ನಾಗರಾಜ್ ನಾಯ್ಕ್, ಜಿ ಸರ್ವೇಕ್ಷಣಾಧಿಕಾರಿ ಡಾ. ಮಲ್ಲಪ್ಪ, ಮೆಗ್ಗಾನ್ ಆಸ್ಪತ್ರೆಯ ಜಿ ಶಸ್ತ್ರ ಚಿಕಿತ್ಸಕ ಡಾ.ಸಿದ್ದನಗೌಡ ಪಾಟೀಲ್, ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರ್, ಜಿ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಶಮಾ ಬೇಗಂ ಫಕ್ರುದ್ಧೀನ್ ಮಾತನಾಡಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಚಂದ್ರಶೇಖರ್ ಜಿ.ಬಿ, ಕುಮಾರಸ್ವಾಮಿ, ಮುಸ್ತಾಖ್, ಚಂದ್ರಿಕಾ ಗಿರಿಮಾಜಿ, ಬಸವರಾಜಪ್ಪ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಮೇಲ್ವಿಚಾರಕ ನಾರಾಯಣ್, ಉಮೇಶ್, ಯಜುರ್ವೇದ, ತಿಪ್ಪೆಸ್ವಾಮಿ, ಧೀರೆಂದ್ರ, ಶಶಿಕುಮಾರ್, ಶೇರ್ ಆಲಿಖಾನ್, ಭರತ್, ತಾಲ್ಲೂಕು ಆರೋಗ್ಯಾಧಿಕಾರಿ ಚಂದ್ರಶೇಖರ್, ನರ್ಸಿಂಗ್ ಕಾಲೇಜ್ ಪ್ರಾಚಾರ್ಯೆ ಡಾ. ಕವಿತಾ ದೇವರಾಜ್ ಉಪಸ್ಥಿತರಿದ್ದರು.