ಮೇ 7ರ ನಾಳೆ ಆಯನೂರಿಗೆ ಪ್ರಧಾನಿ ಮೋದಿ: ಶಾಸಕ ಅಶೋಕ್‌ನಾಯ್ಕ
ಶಿವಮೊಗ್ಗ: ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಆನವೇರಿ, ಹಸೂಡಿ ಹಾಗೂ ಶ್ರೀ ಚನ್ನಬಸವೇಶ್ವರ ಮಹಾಶಕ್ತಿ ಕೇಂದ್ರದ ವಿವಿಧ ಬೂತ್‌ಗಳಲ್ಲಿ ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕನಾಯ್ಕ್ ಪ್ರಚಾರ ನಡೆಸಿದರು. ಮನೆ ಮನೆಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿವಿಧ ಪಕ್ಷಗಳ ಮುಖಂಡರು ಶಾಸಕರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಯಡೇಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಚಾರ ಕಾರ್ಯದಲ್ಲಿ ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ್ ಮಾತನಾಡಿ, ಮೇ ೭ರ ನಾಳೆ (ಭಾನುವಾರ) ನನ್ನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಆಯನೂರು ಗ್ರಾಮಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿzರೆ. ಪ್ರತಿ ಬೂತ್‌ಗಳಿಂದಲೂ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಬೇಕು. ಮೂರು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಮತದಾರರು ಭಾಗವಹಿಸುವ ನೀರಿಕ್ಷೆಯಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಜನಬೆಂಬಲ ವ್ಯಕ್ತವಾಗುತ್ತಿದ್ದು, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ದಲ್ಲಿಯು ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ನೀರಿಕ್ಷೆ ಯಿದೆ. ಎಲ್ಲ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿzರೆ. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪ ನಾವೆಲ್ಲರೂ ಮಾಡಬೇಕು ಎಂದು ಹೇಳಿದರು.
ಗ್ರಾಮಾಂತರ ಕ್ಷೇತ್ರ ಪ್ರಭಾರಿ ಎಸ್. ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಗ್ರಾಮಾಂತರ ಚುನಾವಣಾ ಸಮಿತಿ ಸಂಚಾಲಕ ಸಿಂಗನಹಳ್ಳಿ ಸುರೇಶ್, ಸ್ವರೂಪ್ ಸೇರಿದಂತೆ ವಿವಿಧ ಸಮಿತಿ ಮುಖಂಡರು ಸಭೆ ನಡೆಸಿದರು.