ಹಕ್ಕಿಪಿಕ್ಕಿ ಕ್ಯಾಂಪ್‌ನಲ್ಲಿ ಶಾಸಕರಿಂದ ಸೊಳ್ಳೆ ಪರದೆ ವಿತರಣೆ…
ಶಿವಮೊಗ್ಗ: ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವ ಜನಿಕರು ಸಹಕಾರ ನೀಡಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.
ಅವರು ಇಂದು ಗಾಡಿಕೊಪ್ಪದ ಹಕ್ಕಿಪಿಕ್ಕಿ ಕ್ಯಾಂಪಿನಲ್ಲಿ ಆಯೋಜಿ ಸಿದ್ದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸೊಳ್ಳೆಪರದೆ ವಿತರಿಸಿ ಮಾತನಾಡುತ್ತಿದ್ದರು.
ಮಲೇರಿಯಾಕ್ಕೆ ಪ್ರಮುಖ ವಾದ ಕಾರಣ ಸೊಳ್ಳೆ. ಸಾರ್ವಜನಿ ಕರು ತಮ್ಮ ಸುತ್ತಮುತ್ತಲಿನ ಪರಿಸ ರವನ್ನು ಸೊಳ್ಳೆಗಳು ಬಾರದಂತೆ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು. ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾ ಡಿಕೊಳ್ಳಬೇಕು. ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ನೋಡಿ ಕೊಳ್ಳಬೇಕು. ತೆಂಗಿನ ಚಿಪ್ಪು ಸೇರಿ ದಂತೆ ಪ್ಲಾಸ್ಟಿಕ್ ವಸ್ತುಗಳಲ್ಲಿ ನೀರಿ ಸಂಗ್ರಹವಾಗದಂತೆ ನೋಡಿಕೊಳ್ಳ ಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಗುಡುದಪ್ಪ ಕಸಬಿ ಮಾತ ನಾಡಿ, ಆರೋಗ್ಯ ಇಲಾಖೆ ಮಲೇ ರಿಯಾ ನಿಯಂತ್ರಣಕ್ಕೆ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆದರೆ ಇಲಾಖೆಯ ಜೊತೆಗೆ ಸಾರ್ವಜನಿಕರುಕೂಡ ಸಹಕರಿಸ ಬೇಕು. ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ರೋಟರಿ ಮಾಜಿ ಸಹಾಯಕ ಗೌರ್‍ನರ್ ಜಿ. ವಿಜಯಕುಮಾರ್, ಡಾ. ಚಂದ್ರ ಶೇಖರ್, ನಾರಾಯಣ, ಉಮೇ ಶ್‌ಧೀರೇಂದ್ರ, ಆಶಾ ಹಾಗೂ ಆರೋಗ್ಯ ಕಾರ್ಯಕರ್ತರು ಹಾಜರಿದ್ದರು.