ನಿರುದ್ಯೋಗಿ ಪದವೀಧರರಿಗೆ ಕಾಂಗ್ರೆಸ್ ಆಶಾಕಿರಣ: ಮುಗಿಲುಮುಟ್ಟಿದ ಸಂಭ್ರಮ…

ಶಿವಮೆಗ್ಗ : ಕರ್ನಾಟಕ ರಾಜ್ಯ ವಿಧಾನ ಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯ ಕಾಂಗ್ರೆಸ್‌ನ ೪ನೇ ಗ್ಯಾರಂಟಿಯಾಗಿ ನಿರುದ್ಯೋಗಿ ಯುವಕರಿಗಾಗಿ ಯುವನಿಧಿ ಅಡಿಯಲ್ಲಿ ಯುವಕರಿಗಾಗಿ ರಾಹುಲ್ ಗಾಂಧಿಯವರು ನಿರುದ್ಯೋಗ ಭತ್ಯೆ ಘೋಷಿಸಿರುವುದಕ್ಕೆ ಎನ್.ಎಸ್.ಯು.ಐ. ಕಾರ್ಯಕರ್ತರು ಭಗವಾನ್ ಮಹಾವೀರ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಶಿವಮೊಗ್ಗ ಜಿ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆಯುತ್ತಿದೆ. ಬಿಜೆಪಿ ಸರ್ಕಾರ ಬಂದ ಮೇಲೆ ದೇಶ ಮತ್ತು ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ವಿದ್ಯಾವಂತ ಯುವಕರು ನಿರುದ್ಯೋಗದಿಂದ ಭ್ರಮನಿರಸನಕ್ಕೊಳಗಾಗಿzರೆ. ಅವರಲ್ಲಿ ಭರವಸೆ ಮೂಡಿಸುವ ನಿಟ್ಟಿನಲ್ಲಿ ರಾಹುಲ್ ಗಾಂಧಿಯವರು ಯುವನಿಧಿ ಅಡಿಯಲ್ಲಿ ಘೋಷಿಸಿದ್ದು, ನಿರುದ್ಯೋಗಿ ಪದವೀಧರರಿಗೆ ಮಾಸಿಕ ೩ ಸಾವಿರ, ನಿರುದ್ಯೋಗಿ ಡಿಪ್ಲೊಮಾ ಪದವೀಧರರಿಗೆ ಮಾಸಿಕ ೧೫೦೦ ರೂ.ಗಳ ನಿರುದ್ಯೋಗ ಭತ್ಯೆ ಆಶಾಕಿರಣವಾಗಿದೆ ಎಂದರು.
ವಿಧಾನ ಪರಿಷತ್ ಮಾಜಿ ಶಾಸಕ ಆರ್. ಪ್ರಸನ್ನಕುಮಾರ್ ಅವರು ಮಾತನಾಡಿ, ಕಾಂಗ್ರೆಸ್ ಜನಪರವಾಗಿರುವ ಪಕ್ಷ. ಕಾಂಗ್ರೆಸ್ ಆಡಳಿತ ನಡೆಸಿದಾಗ ಎಂದೂ ಜನವಿರೋಧಿಯಾಗಿ ನಡೆದುಕೊಂಡಿಲ್ಲ. ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಬಹುತೇಕ ಎ ಭರವಸೆಗಳನ್ನೂ ಈಡೇರಿಸಿತ್ತು. ಈಗ ನಿರುದ್ಯೋಗಿ ಯುವಕರಿಗೆ ಆಸರೆಯಾಗಲಿ ಯುವನಿಧಿ ಯೋಜನೆಯನ್ನು ಘೋಷಿಸಿzರೆ. ಯುವಕರು ಕಾಂಗ್ರೆಸ್ ಪರವಾಗಿ ಕೈಜೋಡಿಸುವ ಮೂಲಕ ದೇಶ- ರಾಜ್ಯದ ಅಭಿವೃದ್ಧಿಯಲ್ಲಿ ಪಾಲುದಾರರಾಗಬೇಕೆಂದು ಮನವಿ ಮಾಡಿದರು.

ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ ಈಗಾಗಲೇ ರಾಜ್ಯದ ಜನತೆಗೆ ಮೂರು ಗ್ಯಾರಂಟಿಗಳನ್ನು ನೀಡಿದೆ. ಮನೆಯೊಡತಿಗೆ ಮಾಸಿಕ ೨ ಸಾವಿರ ರೂ. ಭತ್ಯೆ, ಪ್ರತಿ ವ್ಯಕ್ತಿಗೆ ತಲಾ ೧೦ ಕೆ.ಜಿ. ಅಕ್ಕಿ, ಪ್ರತಿ ಮನೆಗೆ ೨೦೦ ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗ್ಯಾರಂಟಿಯನ್ನು ನೀಡಿದೆ. ಈಗ ನಾಲ್ಕನೇ ಗ್ಯಾರಂಟಿಯಾಗಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ ೧೫೦೦ ಮತ್ತು ೩೦೦೦ ರೂ.ಗಳ ನಿರುದ್ಯೋಗ ಭತ್ಯೆಯ ಗ್ಯಾರಂಟಿ ನೀಡುತ್ತಿದ್ದು, ಕಾಂಗ್ರೆಸ್ ಎಂದಿಗೂ ಜನಪರ, ಯುವಪರ ಪಕ್ಷವಾಗಿದೆ ಎಂದರು.
ಕಾಂಗ್ರೆಸ್ ಮುಖಂಡರಾದ ಎಸ್.ಪಿ. ದಿನೇಶ್, ಎನ್. ರಮೇಶ್ ಅವರು ಮಾತನಾಡಿ, ಬಿಜೆಪಿಯ ಭ್ರಷ್ಟ ಆಡಳಿತದಿಂದಾಗಿ ಇಂದು ದೇಶಾದ್ಯಂತ ಯುವಕರು ನಿರುದ್ಯೋಗಿಗಳಾಗಿzರೆ. ಬಿಜೆಪಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸುತ್ತಿದೆ. ಕಾಂಗ್ರೆಸ್ ಯುವಕರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತದೆ. ಯುವಜನತೆ ಬಿಜೆಪಿಯ ದುರಾಡಳಿತವನ್ನು ಖಂಡಿಸುವ ಮೂಲಕ ಕಾಂಗ್ರೆಸ್ ಬೆಂಬಲಿಸಲು ಕರೆ ನೀಡಿದರು.
ಜಿ ಎನ್.ಎಸ್.ಯು.ಐ. ಅಧ್ಯಕ್ಷ ವಿಜಯ್ ಕುಮಾರ್ ಸಂಭ್ರಮಾಚರಣೆಯ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಮುಖರಾದ ಕಲೀಂ ಪಾಶಾ, ವಿಜಯಕುಮಾರ್ (ದನಿ), ಜಿ. ಪಲ್ಲವಿ, ವಿಶ್ವನಾಥ್ ಕಾಶಿ, ದೀಪಕ್ ಸಿಂಗ್, ಕಲೀಮ್ ಪಾಷಾ, ವಿಜಯ್, ಹರ್ಷಿತ್, ಕಾಟಿಕೆರೆ ರವಿ, ಅಬ್ದುಲ್, ವರುಣ್ ವಿ ಪಂಡಿತ್, ಕುಮಾರ್, ಟೋಫಿಕ್, ಅಭಿ, ಚಂದ್ರ ಜಿ ರಾವ್, ಚರಣ್, ಏ.ಚೇತನ್, ಸಿ.ಜಿ. ಮಧುಸೂದನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.