ಜೂ.೧೨: ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕವನರಿಂದ ಭರತನಾಟ್ಯ…

ಶಿವಮೊಗ್ಗ : ನಗರದ ಶ್ರೀ ಸ್ವಾಮಿ ವಿವೇಕಾನಂದ ಬಡಾವಣೆ ಯಲ್ಲಿರುವ ಶ್ರೀ ನಾಗಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಜೂ.೧೨ರ ಸೋಮವಾರ ವಿದುಷಿ ಕವನ ಪಿ ಕುಮಾರ್ ರವರಿಂದ ಭರತನಾಟ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ವೇ.ಬ್ರ.ಶ್ರೀ ಸಂದೇಶ್ ಉಪಾಧ್ಯ ತಿಳಿಸಿzರೆ.
ಈ ಕುರಿತು ಮಾಹಿತಿ ನೀಡಿದ ಅವರು, ಭರತನಾಟ್ಯ ಕಾರ್ಯ ಕ್ರಮದ ನಂತರ, ಬಡಾವಣೆಯ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿವೇಕ ಶ್ರೀ ಪುರಸ್ಕಾರ ಮತ್ತು ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದು ಅವರು ತಿಳಿಸಿದರು.

ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನ ಸೇವಾ ಸಮಿತಿ, ಶ್ರೀ ಸ್ವಾಮಿ ವಿವೇಕಾನಂದ ಅಡ್ವೆಂಚರ್ ಮತ್ತು ಸ್ಪೋರ್ಟ್ಸ್ ಕ್ಲಬ್ ಹಾಗೂ ಅರ್ಚಕ ವೃಂದದ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಜಿ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಕಾರ್ಯದರ್ಶಿ ಜಿ ವಿಜಯ ಕುಮಾರ್, ಮುಖ್ಯ ಅತಿಥಿಗಳಾಗಿ ಕಪುರ ಸ.ಹಿ.ಪ್ರಾ. ಶಾಲೆ ಮುಖ್ಯೋಪಾಧ್ಯಾಯಿನಿ ಎಸ್ ಪದ್ಮಾವತಿ ಆಗಮಿಸಲಿzರೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ದೇವಸ್ಥಾನದ ಸಮಿತಿ ಅಧ್ಯಕ್ಷ ಜಿ ಹೆಚ್ ಮಂಜುನಾಥ್ ವಹಿಸಲಿದ್ದು, ಅಡ್ವೆಂಚರ್ ಮತ್ತು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಹೆಚ್ ರಾಮಲಿಂಗಪ್ಪ ಉಪಸ್ಥಿತರಿರಲಿzರೆ ಎಂದು ಸಂದೇಶ್ ಉಪಾಧ್ಯ ತಿಳಿಸಿzರೆ.
ಭಕ್ತಾದಿಗಳು ಈ ಕಾರ್ಯಕ್ರಮ ದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಅವರು ಕೋರಿzರೆ.