ಮತಾಂತರ ನಿಷೇಧ ಕಾನೂನು ಹಿಂಪಡೆಯುವ ಸರ್ಕಾರದ ತೀರ್ಮಾನಕ್ಕೆ ವಿಹಿಂಪ ಆಕ್ರೋಶ

ಶಿವಮೊಗ್ಗ: ಸಿಎಂ ಸಿದ್ದರಾ ಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತಾಂತರ ನಿಷೇಧ ಕಾ ನೂನನ್ನು ಹಿಂಪಡೆಯಲು ಸಚಿವ ಸಂಪುಟದಲ್ಲಿ ತೀರ್ಮಾ ನಿಸಿರುವು ದನ್ನು ವಿಶ್ವ ಹಿಂದೂ ಪರಿಷದ್ ಖಂಡಿಸುತ್ತದೆಯಲ್ಲದೆ, ತಕ್ಷಣವೇ ವಾಪಾಸು ತೆಗೆದುಕೊ ಳ್ಳಲು ಆಗ್ರಹಿಸುತ್ತದೆ ಎಂದು ಪರಿಷದ್‌ನ ಜಿಲ್ಲಾಧ್ಯಕ್ಷ ಜೆ.ಆರ್. ವಾಸುದೇವ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಭಾರತವು ಹಿಂದೂ ರಾಷ್ಟ್ರವಾ ಗಿದ್ದು ಇಲ್ಲಿ ಹಿಂದುಗಳೊಡನೆ ಅನ್ಯ ಧರ್ಮೀಯರೂ ಸಹ ಸಹಬಾಳ್ವೆಗೆ ಸಂವಿಧಾನ ಅವಕಾಶ ಮಾಡಿಕೊ ಟ್ಟಿದೆ. ಅದರಂತೆ ಕರ್ನಾಟಕದಲ್ಲೂ ಸಹ ಹಿಂದೂಗಳೊಡನೆ ಅನ್ಯ ಧರ್ಮೀಯರೂ ಸಹ ತಮ್ಮ ಧರ್ಮ-ಮತಾಚರಣೆ ಮಾಡಲು ಅವಕಾಶವಿದೆ. ಇದನ್ನು ನಾವು ಒಪ್ಪುತ್ತೇವೆ ಮತ್ತು ಪ್ರಶ್ನಿಸುವುದಿಲ್ಲ ಎಂದರು.
ಆದರೆ ಹಿಂದೂಗಳಿಗೆ ಆಮಿಷ ತೋರಿಸಿ ಅಥವಾ ಹೆದರಿಸಿ ಬಲ ವಂತವಾಗಿ ಮತಾಂತರಿಸುವುದನ್ನು ಅಥವಾ ಮರುಳು ಮಾಡಿ ಮತಾಂ ತರಿಸುವುದನ್ನು ನಾವು ಖಂಡಿಸು ತ್ತೇವೆ. ಭಾರತವು ಹಿಂದೂ ರಾಷ್ಟ್ರ ವಾಗಿ ಮತ್ತು ಕರ್ನಾಟಕವು ಭಾರತದ್ದೇ ಒಂದು ಭಾಗವಾಗಿದೆ. ಇಲ್ಲಿನ ಹಿಂದೂಗಳನ್ನು ಮತಾಂತ ರದಿಂದ ರಕ್ಷಿಸಿ ನಮ್ಮ ಧರ್ಮವನ್ನು ಕಾಪಾಡುವುದು ಪ್ರತಿಯೊಬ್ಬ ಹಿಂದುವಿನ ಕರ್ತವ್ಯವಾಗಿದೆ. ಆದರೆ ಗ್ಯಾರಂಟಿಯ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜ್ವಲಂತ ಸಮಸ್ಯೆಗಳ ಗಮನಹರಿಸುವುದು ಬಿಟ್ಟು ಇಂತಹ ಓಲೈಕೆಯ ನಿರ್ಧಾರಗ ಳನ್ನು ತೆಗೆದುಕೊಳ್ಳುತ್ತಿದೆ ಎಂದರು.
ಕಾಂಗ್ರೆಸ್ ಸರ್ಕಾರಕ್ಕೆ ಅನ್ಯ ಧರ್ಮೀಯರಲ್ಲದೆ ಅತಿ ಸಂಖ್ಯೆ ಯಲ್ಲಿ ಹಿಂದೂಗಳೂ ಸಹ ಮತ ಹಾಕಿದ್ದು ಅವರ ಮತದಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆಯೇ ಹೊರತು ಕೇವಲ ಅಲ್ಪಸಂಖ್ಯಾ ತರಿಂದಲ್ಲ. ಇದು ಕಾಂಗ್ರೆಸ್ ತನಗೆ ಮತ ನೀಡಿದ ಸಮಸ್ತ ಹಿಂದೂ ಸಮಾಜಕ್ಕೆ ದ್ರೋಹ ಬಗೆದಂತಾ ಗಿದೆ ಎಂದು ಆರೋಪಿಸಿದರು.
ಈ ಹಿಂದಿನ ಸರ್ಕಾರವು ಶಾಲಾ ಪಠ್ಯದಲ್ಲಿ ರಾಷ್ಟ್ರ ಪುರುಷರ ಪರಿಚಯವನ್ನು ಸೇರಿಸಿದ್ದನ್ನೂ ಸಹ ಸಂಕುಚಿತ ಭಾವನೆಯಿಂದ ಮತ್ತು ಅಲ್ಪ ಸಂಖ್ಯಾತರನ್ನು ತುಷ್ಟೀಕರಿ ಸುವ ಸಲುವಾಗಿ ಸಾವರ್ಕರ್‌ರವ ರಂತಹ ಅಪ್ರತಿಮ ದೇಶಭಕ್ತರ ಪರಿಚಯದ ಪಾಠಗಳನ್ನು ತೆಗೆಯಲು ನಿರ್ಧರಿಸಿರುವುದನ್ನೂ ಸಹ ನಾವು ಖಂಡಿಸುತ್ತೇವೆ. ಈ ರೀತಿ ಸಮಾಜದಲ್ಲಿ ಶಾಂತಿಯನ್ನು ಕದಡುವ ನಿರ್ಧಾರ ತೆಗೆದುಕೊಳ್ಳು ವುದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ರಾಜದ್ಯಂತ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ನಾರಾಯಣ ಜಿ. ವರ್ಣೆಕರ್, ಎಸ್.ಆರ್. ನಟರಾಜ್, ಸಚಿನ್‌ರಾಯ್ಕರ್, ಕುಮಾರಸ್ವಾಮಿ, ಸುರೇಶ್ ಬಾಬು, ಸತೀಶ್ ಉಪಸ್ಥಿತರಿದ್ದರು.