ದೇಶದಾದ್ಯಂತ ಏಕಕಾಲಕ್ಕೆ ೫ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿರಿಂದ ಚಾಲನೆ
ಭೋಪಾಲ್: ಪ್ರಧಾನಿ ಮೋದಿ ಅವರು ಇಂದು ಏಕಕಾ ಲಕ್ಕೆ ದೇಶಾದ್ಯಂತ ೫ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದ್ದಾರೆ.
ಮಧ್ಯಪ್ರದೇಶದ ಭೋಪಾಲ್ ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣ ದಿಂದ ಬೆಳಗ್ಗೆ ೧೧ ಗಂಟೆಗೆ ಹೊಸ ೫ ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ ನೀಡಿದ್ದಾರೆ.
ರಾಣಿ ಕಮಲಾಪತಿ- ಜಬಲ್ ಪುರ್ ವಂದೇ ಭಾರತ್ ಎಕ್ಸ್ಪ್ರೆಸ್, ಖಜುರಾಹೊ-ಭೋಪಾಲ್- ಇಂದೋರ್ ವಂದೇ ಭಾರತ್ ಎಕ್ಸ್ಪ್ರೆಸ್, ಮಡಗಾಂವ್ (ಗೋವಾ) -ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್, ಧಾರವಾಡ -ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಹಾಗೂ ಹತಿಯಾ- ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್ ಎಂಬ ೫ ರೈಲುಗಳಿಗೆ ಚಾಲನೆ ನೀಡಿದ್ದಾರೆ.
ಈ ರೈಲುಗಳು ಮಧ್ಯ ಪ್ರದೇಶ, ಕರ್ನಾಟಕ, ಮಹಾ ರಾಷ್ಟ್ರ, ಗೋವಾ, ಬಿಹಾರ ಮತ್ತು ಜಾಖ ಂಡ್ನಲ್ಲಿ ಸಂಪರ್ಕವನ್ನು ಸುಧಾರಿಸುತ್ತದೆ ಎಂದು ಪ್ರಧಾನಿ ಮೋದಿ ನಿನ್ನೆ ಟ್ವೀಟ್ನಲ್ಲಿ ತಿಳಿಸಿದ್ದರು.
ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಮಧ್ಯಪ್ರದೇಶ ರಾಜ್ಯಪಾಲ ಮಂಗು ಭಾಯ್ ಪಟೇಲ್, ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಧಾನಿ ಮೋದಿ ಇಂದು ಚಾಲನೆ ನೀಡಿರುವ ೫ ರೈಲುಗಳು ಸೇರಿದಂತೆ ಒಟ್ಟು ೨೪ ವಂದೇ ಭಾರತ್ ರೈಲುಗಳು ದೇಶಾದ್ಯಂತ ಸಂಚರಿಸುತ್ತಿವೆ. ಬೆಂಗ ಳೂರು- ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್, ಕರ್ನಾಟಕಕ್ಕೆ ೨ನೇ ವಂದೇ ಭಾರತ್ ರೈಲಾಗಿದೆ.
ಧಾರವಾಡದ ರೈಲ್ವೆ ನಿಲ್ದಾಣದಲ್ಲಿ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಶಾಸಕ ಅರವಿಂದ್ ಬೆಲ್ಲದ, ಮೇಯರ್ ವೀಣಾ ಬರದ್ವಾಡ, ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಸಂಜೀವ ಕಿಶೋರ್ ಸೇರಿ ಹಲವರು ಭಾಗಿಯಾಗಿದ್ದರು.