ಕೊಮ್ಮನಾಳು ಸರ್ಕಾರಿ ಶಾಲೆಗೆ ಲೇಖನ ಸಾಮಾಗ್ರಿ ವಿತರಣೆ…

ಶಿವಮೊಗ್ಗ: ಸರ್ಕಾರಿ ಶಾಲೆ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣದ ಜತೆಗೆ ಅಗತ್ಯ ವಸ್ತುಗಳನ್ನು ಒದಗಿಸಿದಾಗ ಪರಿ ಪೂರ್ಣ ವಿದ್ಯಾರ್ಥಿಯಾಗಿಸಲು ಸಾಧ್ಯ ಹಾಗೂ ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಹೇಳಿದರು.
ಶಿವಮೊಗ್ಗದ ಕೊಮ್ಮನಾಳು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಆಯೋ ಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿ ಗೆ ಶಾಲಾ ಬ್ಯಾಗ್, ಲೇಖನ ಸಾಮಾ ಗ್ರಿಗಳನ್ನು ವಿತರಿಸಿ ಮಾತನಾಡಿ ದ ಅವರು,ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ನಿರಂತರವಾಗಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಶಾಲೆಗಳ ಮಕ್ಕಳಿಗೆ ಅನುಕೂಲ ವಾಗುವಂತೆ ವಿಶೇಷ ಕಾರ್ಯಕ್ರಮ ಗಳನ್ನು ರೂಪಿಸಿ ಅನುಷ್ಠಾನಗೊಳಿ ಸುತ್ತಿದೆ. ಉಚಿತ ಆರೋಗ್ಯ ಶಿಬಿರ ಗಳನ್ನು ಆಯೋಜಿಸಿದೆ ಎಂದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆ ಮಕ್ಕಳಲ್ಲಿ ಪ್ರತಿಭಾವಂತರಿದ್ದು, ಸೂಕ್ತ ವೇದಿಕೆಗಳನ್ನು ಕಲ್ಪಿಸುವ ಕೆಲಸ ಆಗಬೇಕು. ಸಂಘ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ಗುರುತಿಸಿ ನೆರವು ನೀಡಿದಾಗ ಶಾಲೆಗಳ ಅಭಿವೃದ್ಧಿ ಆಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ಹಾಗೂ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಕಾರ್ಯದರ್ಶಿ ಕುಮಾರಸ್ವಾಮಿ ಹಾಗೂ ಪದಾಧಿಕಾರಿಗಳು, ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.