ಮಣಿಪುರ ಹಿಂಸಾಚಾರ: ಕೇಂದ್ರ ಸರಕಾರ ಮಧ್ಯ ಪ್ರವೇಶಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದಿಂದ ಮನವಿ

ಉಡುಪಿ: ಈಶಾನ್ಯ ಭಾರತದ ಮಣೆಪುರ ರಾಜ್ಯದಲ್ಲಿ ನಡೆಯುತ್ತಿ ರುವ ಹಿಂಸಾಚಾರ ವಿಚಾರದಲ್ಲಿ ಕೇಂದ್ರ. ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಡುಪಿ ಧರ್ಮಪ್ರಾಂತ್ಯ ಹಾಗೂ ಕ್ರೈಸ್ತ ಸಮುದಾಯದ ಪರವಾಗಿ ಉಡುಪಿ ಜಿಧಿಕಾರಿಗಳ ಮೂಲಕ ಪ್ರಧಾನಿ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ರೆ|ಫಾ| ಡೆನಿಸ್ ಡೆಸಾ ಅವರು ಮಾತನಾಡಿ, ಈಶಾನ್ಯ ಭಾರತದ ರಾಜ್ಯವಾದ ಮಣಿಪುರದಲ್ಲಿ ಇತ್ತೀಚಿಗೆ ನಡೆಯುತ್ತಿರುವ ಹಿಂಸಾಚಾರ ಮತ್ತು ಜೀವ ಹಾನಿ, ಆಸ್ತಿಪಾಸ್ತಿಗಳ ನಷ್ಟದಿಂದ ಹಲವಾರು ಮಂದಿ ನಿರಾಶ್ರಿತರಾಗಿzರೆ. ಬಹುಸಂಖ್ಯಾತ ಮಣೆಪುರಿಗಳು (ಮೈಟೈಸ್) ಮತ್ತು ಅಲ್ಪಸಂಖ್ಯಾತ ಬುಡಕಟ್ಟು ಜನರು ನಡುವಿನ ಅಂತರ -ಸಮುದಾಯ ಸಂಘರ್ಷದ ನೆಪದಲ್ಲಿ ವಿಸ್ತೃತ ಇಂಫಾಲ್ ಕಣಿವೆಯಲ್ಲಿ ಬಹುತೇಕ ಎ ಚರ್ಚ್‌ಗಳನ್ನು ಸುಟ್ಟುಹಾಕಿ ಧ್ವಂಸ ಗೊಳಿಸಿ, ಅಪವಿತ್ರ ಗೊಳಿಸಲಾಗಿದೆ. ಕನಿಷ್ಠ ೩೧೭ ಚರ್ಚುಗಳು ಮತ್ತು ೭೦ ಚರ್ಚ್ ಆಡಳಿತ/ಶಾಲಾ ಕಟ್ಟಡಗಳನ್ನು ಸುಟ್ಟು ಹಾಕಲಾಗಿದೆ. ಸುಮಾರು ೭೫ ಕ್ರೈಸ್ತ ಸಮುದಾಯದವರು ಅಮಾನುಷವಾಗಿ ಕೊಲ್ಲಲ್ಪಟ್ಟಿzರೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಭಾರತ ಕಂಡ ಅತ್ಯಂತ ಕೆಟ್ಟ ಕೈಸ್ತ ವಿರೋಧಿ ಹಿಂಸಾಚಾರ ಇದಾಗಿದ್ದು ಸುಮಾರು ೩೦,೦೦೦ಕ್ಕೂ ಅಧಿಕ ಜನರು ಸ್ಥಳಾಂತರಗೊಂಡಿzರೆ. ವಿವಿಧ ಗುಂಪುಗಳಿಂದ ಪ್ರಚೋದಿಸಲ್ಪಟ್ಟ ವಿದ್ವಂಸಕ ಕೃತ್ಯವನ್ನು ಕ್ರೈಸ್ತ ಸಮುದಾಯ ಬಲವಾಗಿ ಖಂಡಿಸುತ್ತಿದ್ದು ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಎ ಮನೆಗಳು, ಚರ್ಚಗಳು ಮತ್ತು ಹಾನಿಗೊಳಗಾದ ಆಸ್ತಿಗಳನ್ನು ಪುನರ್ನಿರ್ಮಿಸಬೇಕು ಮತ್ತು ಮನೆಗಳನ್ನು ಪುನರ್ನಿರ್ಮಿಸಲು ಜತಿ ಮತ್ತು ಧರ್ಮವನ್ನು ಲೆಕ್ಕಿಸದೆ ಎ ಜನರಿಗೆ ಸೂಕ್ತ ಪರಿಹಾರ ವನ್ನು ನೀಡಬೇಕು. ಸರ್ಕಾರವು ಈ ಪ್ರದೇಶದಲ್ಲಿನ ಹಿಂಸಾಚಾರವನ್ನು ಕೊನೆಗೊಳಿಸ ಬೇಕು ಮತ್ತು ರಾಜ್ಯದಲ್ಲಿ ಶಾಂತಿ ಮತ್ತು ಸಹಜತೆ ಯನ್ನು ತ್ವರಿತವಾಗಿ ಮರುಸ್ಥಾಪಿಸ ಬೇಕು ಮತ್ತು ಸಂತ್ರಸ್ತ ಜನರಲ್ಲಿ ವಿಶ್ವಾಸ ಮೂಡಿಸಬೇಕು. ಶಾಂತಿಯನ್ನು ಪುನಃಸ್ಥಾಪಿಸಲು ಮತ್ತು ಅದರ ಎ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯನ್ನು. ಖಚಿತ ಪಡಿಸಿ ಕೊಳ್ಳಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಜಿಧಿಕಾರಿ ಕೂರ್ಮರಾವ್ ಎಂ ಅವರು ಸಂಬಂಧಪಟ್ಟವರಿಗೆ. ಮನವಿ ಯನ್ನು ತಲುಪಿಸಲಾಗುವುದು ಎಂದರು.
ನೀಯೋಗದಲ್ಲಿ ಧರ್ಮ ಪ್ರಾಂತ್ಯದ ಕುಲಪತಿ ರೆ|ಫಾ| ಡಾ|ರೋಷನ್ ಡಿಸೋಜ, ಕಥೊಲಿಕ್ ಸಭಾದ ನಿಯೋಜಿತ ಅಧ್ಯಕ್ಷ ರೊನಾಲ್ಡ್ ಡಿ ಆಲ್ಮೇಡಾ, ನಿಕಟಪೂರ್ವ ಅಧ್ಯಕ್ಷರಾದ ಮೇರಿ ಡಿಸೋಜ, ಮಾಜಿ ಅಧ್ಯಕ್ಷ ಆಲ್ಫೋನ್ಸ್ ಡಿಕೋಸ್ತಾ, ಭಾರ ತೀಯ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಜತ್ತನ್ನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.