ಜು.9: ಜೆಎನ್‌ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಂವಾದ

ಶಿವಮೊಗ್ಗ: ನಗರದ ಪ್ರತಿಷ್ಠಿತ ಜೆಎನ್‌ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜು.೯ ರ ಭಾನುವಾರ ಬೆಳಗ್ಗೆ ೧೧ ಗಂಟೆಗೆ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಗುತ್ತಿದ್ದು, ಜೊತೆಯಲ್ಲಿ ವಿವಿಧ ಎಂಜಿನಿಯರಿಂಗ್ ವಿಭಾಗಗಳ ಪರಿಚಯ, ಉದ್ಯೋಗವಕಾಶ ಗಳು, ವಿವಿಧ ವಿದ್ಯಾರ್ಥಿ ವೇತನ ಗಳ ಕುರಿತಾಗಿ ತಜ್ಞರು ಮಾಹಿತಿ ನೀಡಲಿzರೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸ ಬಹುದಾಗಿದ್ದು, ಭಾಗವಹಿಸುವ ವರಿಗೆ ಬೆಳಿಗ್ಗೆ ೧೦:೩೦ಕ್ಕೆ ಮಹಾವೀರ ಸರ್ಕಲ್ ನಿಂದ ಕಾಲೇಜಿಗೆ ವಿಶೇಷ ಬಸ್ ಸೌಲಭ್ಯವಿದೆ.
ಹೆಚ್ಚಿನ ಮಾಹಿತಿಗಾಗಿ ಮೊ. : ೯೬೩೨೪೭೧೬೬೭ ಸಂಪರ್ಕಿಸಲು ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.