ರಾಜ್ಯದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಪ್ರತಿಭಟನೆ..

ಶಿವಮೊಗ್ಗ: ರಾಜ್ಯದಲ್ಲಿ ಹಿಂದೂಗಳು ಹತ್ಯೆ ಖಂಡಿಸಿ, ಹಿಂದೂಗಳಿಗೆ ರಕ್ಷಣೆ ನೀಡಬೇಕು ಹಾಗೂ ದೇಶಾದ್ಯಂತ ವಕ್ಫ್ ಬೋರ್ಡ್ ಕಾಯ್ದೆ ರದ್ದುಪಡಿಸಬೇ ಕೆಂದು ಆಗ್ರಹಿಸಿ ಹಿಂದೂ ರಾಷ್ಟ್ರ ಜಗೃತಿ ಆಂದೋಲನದ ಕಾರ್ಯ ಕರ್ತರು ಇಂದು ಜಿಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಬಂದ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ವಿವಿಧ ರೀತಿಯ ಆಕ್ರಮಣಗಳು ಹೆಚ್ಚಾ ಗಿವೆ. ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸು ದಾಖಲಿಸಿ ಅವರನ್ನು ಥಳಿಸುವುದು ಮತ್ತು ಭಯ ನಿರ್ಮಾಣ ಮಾಡುವ ಪ್ರಕ್ರಿಯೆ ನಡೆಯುತ್ತಿವೆ ಎಂದು ಪ್ರತಿಭಟನಕಾರರು ದೂರಿದರು.
ಜೈನಮುನಿ ಆಚಾರ್ಯ ಕಾಮ ಕುಮಾರ ನಂದಿಮಹಾರಾಜರು ಮತ್ತು ಯುವ ಬ್ರಿಗೇಡ್‌ನ ವೇಣು ಗೋಪಾಲ್ ಹತ್ಯೆ ಸೇರಿದಂತೆ ಇನ್ನೂ ಹಲವಾರು ಘಟನೆಗಳು ಹಿಂದೂ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ. ಅಷ್ಟೇ ಅಲ್ಲದೆ ಮೊನ್ನೆ ಬೆಂಗಳೂರಿನಲ್ಲಿ ಪ್ರತಿ ಭಾನುವಾರ ನಡೆಯುತ್ತಿದ್ದ ನಾಗರಕಟ್ಟೆಯ ಪೂಜೆಗೆ ಪೊಲೀಸರು ನೋಟೀಸ್ ಜರಿ ಮಾಡಿzರೆ ಎಂದು ಆರೋ ಪಿಸಿದರು.
ಬಕ್ರೀದ್ ಸಮಯದಲ್ಲಿ ಬಾದಾಮಿ, ಶಿಕಾರಿಪುರ, ಶಿರ್ಶಿ ಸೇರಿದಂತೆ ಹಲವೆಡೆ ಅಕ್ರಮವಾಗಿ ಗೋಹತ್ಯೆ ನಡೆದಿದೆ. ಗೋವಿನ ಎಲುಬುಗಳನ್ನು ದೇವಸ್ಥಾನ, ಹಿಂದೂ ಮನೆಗಳ ಎದುರು ಎಸೆದು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.
ರಾಜ್ಯದ ವಿವಿಧ ಜಿಗಳಲ್ಲಿ ವಕ್ಫ್ ಬೋರ್ಡ್ ತನ್ನ ಕಾನೂನನ್ನು ದುರುಪಯೋಗಪಡಿಸಿಕೊಂಡು ಸರ್ಕಾರಿ ಮತ್ತು ಖಾಸಗಿ ಜಮೀನು ಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದು ಕೊಳ್ಳುತ್ತಿದೆ. ದೇಶಾದ್ಯಂತ ಸುಮಾ ರು ೮ಲಕ್ಷ ಎಕರೆ ಜಮೀನನ್ನು ಕಬಳಿಸಿದೆ ಇದೊಂದು ದೊಡ್ಡ ಲ್ಯಾಂಡ್ ಜಿಹಾದ್ ಆಗಿದೆ. ಹೀಗಾ ಗಿ ಈ ಕಾನೂನನ್ನು ರದ್ದುಗೊಳಿ ಸಬೇಕು ಎಂದು ಒತ್ತಾಯಿಸಿದರು
ಪ್ರತಿಭಟನೆಯಲ್ಲಿ ವಿಜಯ್ ರೇವಣಕರ್, ನಟರಾಜ್, ದಿನೇಶ್ ಚವ್ಹಾಣ್, ನವೀನ್, ಶಿವಶಂಕರ ನಾಯ್ಕ, ಪ್ರಕಾಶ್, ಜಗದೀಶ್, ಪ್ರಭಾ ಕಾಮತ್, ಸುಧಾ ಕಾಮತ್, ಮುಕುಂದ, ಸೌಮ್ಯ ಮೊಗೇರ ಇನ್ನಿತರರು ಭಾಗವಹಿಸಿದ್ದರು.