ಎಂಎಸ್ಸಿ ಮನಃಶ್ರಾಸ್ತ್ರ ವಿಭಾಗದಲ್ಲಿ ಅಶೋಕ್ ಪೈ ಸ್ಮಾರಕ ಕಾಲೇಜಿಗೆ ರ್‍ಯಾಂಕ್…

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ೨೦೨೧-೨೨ನೇ ಸಾಲಿನ ಎಂಎಸ್ಸಿ ಸ್ನಾತಕೋತ್ತರ ಮನಃಶಾಸ್ತ್ರ ಪರೀಕ್ಷೆಯಲ್ಲಿ ನಗರದ ಮಾನಸ ಟ್ರಸ್ಟ್‌ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ವಿದ್ಯಾರ್ಥಿನಿಯರಾದ ಗಾಯಿತ್ರಿ ವಿ ಪ್ರಥಮ ರ್‍ಯಾಂಕ್ ಹಾಗೂ ದೇವಿಕಾ ಎಂ ದ್ವಿತೀಯ ರ್‍ಯಾಂಕ್ ಗಳಿಸಿದ್ದು. ಕಾಲೇಜಿಗೆ ಶೇ.೧೦೦ ಫಲಿತಾಂಶ ಲಭಿಸಿದೆ.
ಈ ಕುರಿತು ಮಾತನಾಡಿದ ಮಾನಸ ಟ್ರಸ್ಟ್ ನ ನಿರ್ದೇಶಕರಾದ ಡಾ.ರಜನಿ ಎ ಪೈ ಅವರು ಇದೊಂದು ಅತ್ಯುತ್ತಮ ಶೈಕ್ಷಣಿಕ ಸಾಧನೆಯಾಗಿದ್ದು ನಮ್ಮ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿನಿಯರ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ ಎಂದಿದ್ದಾರೆ.
ಮಾನಸ ಟ್ರಸ್ಟ್‌ನ ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಡಾ.ಪ್ರೀತಿ ವಿ ಶಾನ್ ಭಾಗ್, ಡಾ.ವಾಮನ್ ಶಾನ್ ಭಾಗ್, ಸ್ನಾತಕೋತ್ತರ ಮನಃಶಾಸ್ತ್ರ ವಿಭಾಗದ ಸಂಯೋಜಕರಾದ ಸಿಸ್ಟರ್ ಮೇರಿ ಇವ್ಲಿನ್, ಎಂಸಿಸಿಎಸ್ ನಿರ್ದೇಶಕ ಡಾ.ರಾಜೇಂದ್ರ ಚೆನ್ನಿ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ಡಾ.ಅರ್ಚನಾ ಕೆ ಭಟ್, ಕಾಲೇಜಿನ ಪ್ರಾಂಶುಪಾಲೆ ಡಾ. ಸಂಧ್ಯಾ ಕಾವೇರಿ, ಕಾಲೇಜಿನ ಎ ಬೋಧಕ ಹಾಗೂ ಬೋಧಕೇತರ ವರ್ಗದವರು ಮತ್ತು ಎ ವಿದ್ಯಾರ್ಥಿಗಳು ರ್‍ಯಾಂಕ್ ವಿಜೇತ ವಿದ್ಯಾರ್ಥಿನಿಯರನ್ನು ಅಭಿನಂದಿಸಿzರೆ.