ಮೂಲ ಸೌಕರ್ಯ ಕಲ್ಪಿಸಲು ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಶಿವಮೆಗ್ಗ: ಜೆಜೆ ಸೂರ್ಯ ನರ್ಸಿಂಗ್ ಕಾಲೇಜಿನಲ್ಲಿ ಮೂಲ ಸೌಕರ್ಯ ಕಲ್ಪಿಸಲು ಆಗ್ರಹಿಸಿ ವಿದ್ಯಾರ್ಥಿಗಳು ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಈ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯುತ್, ಶಿಕ್ಷಕರು ಇಲ್ಲ. ಕಾಲೇ ಜ್ ಶುಲ್ಕ ಹೆಚ್ಚಳ ಮಾಡಲಾಗಿದೆ. ವಿವಿ ಶುಲ್ಕಕ್ಕಿಂತ ಹೆಚ್ಚು ಶುಲ್ಕ ವಸೂಲಿ ಮಾಡಲಾಗುತ್ತಿದೆ. ವಿದ್ಯಾ ರ್ಥಿ ವೇತನ ನೀಡಲಾಗುತ್ತಿಲ್ಲ. ಲ್ಯಾಬ್ ಸರಿ ಇಲ್ಲ. ಕಾಲೇಜ್ ಅನ್ನು ಪದೇ ಪದೇ ಬೇರೆ ಕಟ್ಟಡಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ದೂರಿದರು.
ಆಡಳಿತ ಮಂಡಳಿಯವರು ವಿದ್ಯಾರ್ಥಿಗಳ ಪೋಷಕರಿಗೆ ಕಿರು ಕುಳ ಕೊಡುತ್ತಿದ್ದಾರೆ. ಪ್ರತಿಭಟನೆ ಮಾಡಿದರೆ ಅಂಕಗಳನ್ನು ಕಡಿಮೆ ಮಾಡುತ್ತೇವೆ ಎಂದು ಹೆದರಿಸು ತ್ತಾರೆ. ಆದ್ದರಿಂದ ಇಲ್ಲಿನ ಸಮ ಸ್ಯೆಗಳನ್ನು ಬಗೆಹರಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಹಾಲೇಶ್, ಬಸವನಗೌಡ, ಸೂರ್ಯ ಮೆದಲಾದವರಿದ್ದರು.