ಮಣಿಪುರ – ಉಡುಪಿ ಪ್ರಕರಣ: ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಭದ್ರಾವತಿ: ನಗರದ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಉಡುಪಿಯಲ್ಲಿ ನಡೆದ ಕಾಲೇಜು ವಿಧ್ಯಾರ್ಥಿನಿಯರ ಮಾನಹಾನಿ ಪ್ರಕರಣ ಹಾಗು ಮಣಿಪುರದಲ್ಲಿ ನಡೆದ ಮಹಿಳೆಯರ ಮೇಲೆ ನಡೆದ ದೌರ್ಜನ್ಯ, ಅತ್ಯಾಚಾರ ಹಾಗು ಬೆತ್ತಲೆ ಮೆರವಣಿಗೆ ಪ್ರಕರಣಗಳ್ನು ಖಂಡಿಸಿ ಅಪರಾಧಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ರಂಗಮ್ಮರವರಿಗೆ ಮನವಿ ಪತ್ರ ಅರ್ಪಿಸಿದರು.
ನಗರಸಭಾ ಮಾಜಿ ಅಧ್ಯಕ್ಷೆ ಹಾಗು ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷೆ ಎಂ.ಎಸ್. ಸುಧಾಮಣಿ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಲತಾ ಪ್ರಭಾಕರ್, ಕಾರ್ಯದರ್ಶಿ ಶೀಲಾ ರವಿ, ಪ್ರೇಮ ಮಂಜುನಾಥ್, ಗೀತ ಸೇರಿದಂತೆ ಇತರರು ಭಾಗವಹಿಸಿದ್ದರು.