ರಾಹುಲ್ ಸಂಸತ್ ಸದಸ್ಯತ್ವ ಅನರ್ಹತೆ ಖಂಡಿಸಿ ಎನ್‌ಎಸ್‌ಯುಐನಿಂದ ಬೃಹತ್ ಪ್ರತಿಭಟನೆ …

ಶಿವಮೊಗ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿದ್ದನ್ನು ವಿರೋಧಿಸಿ ಇಂದು ಎನ್‌ಎಸ್ ಯುಐ ವತಿಯಿಂದ ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ನಿರತ ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾ ಯಿತು.
ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ಹೊರಬಿzಡನೆ, ತೀರ್ಪಿ ನಲ್ಲಿ ಮೇಲ್ಮನವಿಗೆ ಅವಕಾಶವಿ ದ್ದರೂ ಆದೇಶದ ಪ್ರತಿ ಕೈಗೆ ಸಿಗುವ ಮೊದಲೇ ಕಾಂಗ್ರೆಸ್‌ನ ಹಿರಿಯ ನಾಯಕ ರಾಹುಲ್ ಗಾಂಧಿ ಅವ ರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿದರು.
ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಾ ದ್ವೇಷದ ರಾಜಕಾರಣ ಮಾಡುತ್ತಿದೆ. ಆ ಮೂಲಕ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಪ್ರಜಪ್ರಭುತ್ವ ವ್ಯವಸ್ಥೆಗೆ ಆತಂಕ ತಂದೊಡ್ಡುತ್ತಿದೆ.
ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮುಂದಿನ ಪ್ರಧಾನಿ ಅಭ್ಯರ್ಥಿ. ಅವರನ್ನು ರಾಜಕೀಯ ವಾಗಿ ಮುಗಿಸುವ ಸಂಚಿನಿಂದಾಗಿ ಬಿಜೆಪಿ ಅವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿzಗಲೂ ತರಾತುರಿಯಲ್ಲಿ ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದೆ. ಇದು ಖಂಡನೀಯ ಎಂದರು.
ಮೋದಿಗಳ ವಿರುದ್ಧ ರಾಹುಲ್ ಮಾತನಾಡಿದ್ದು ಒಬಿಸಿಗಳಿಗೆ ಅವಮಾನ ಎಂದು ಬಿಜೆಪಿಯವರು ಹೇಳುತ್ತಾರೆ. ನೀರವ್ ಮೋದಿ ಒಬಿಸಿಗೆ ಸೇರಿದವನೇ? ಲಲಿತ್ ಮೋದಿ, ಮೆಹುಲ್ ಚೋಕ್ಸಿ ಒಬಿಸಿಯೇ? ಅವರು ದೇಶದ ಜನರ ಹಣ ದೊಂದಿಗೆ ಪರಾರಿಯಾಗಿzರೆ. ಅಂತಹ ದೇಶಭ್ರಷ್ಟರನ್ನು ಟೀಕಿಸಿ ದರೆ ಬಿಜೆಪಿಗೆ ನೋವಾಗುತ್ತದೆ. ದೇಶ ಉಳಿಸಲು ಕೆಲಸ ಮಾಡಿದ ವರನ್ನು ಬಿಜೆಪಿ ಶಿಕ್ಷಿಸುತ್ತದೆ. ದೇಶದ ಹಣ ಲೂಟಿ ಮಾಡಿದವರನ್ನು ವಿದೇಶಕ್ಕೆ ಕಳಿಸುತ್ತಾರೆ. ಗಾಂಧಿ ಕುಟುಂಬದ ರಕ್ತ ಈ ದೇಶದಲ್ಲಿ ಪ್ರಜಪ್ರಭುತ್ವವನ್ನು ಪೋಷಿಸಿದೆ. ನಾವು ದೇಶದ ಪ್ರಜಪ್ರಭುತ್ವಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧ. ಈ ದೇಶದಲ್ಲಿ ಪ್ರಜ ಪ್ರಭುತ್ವಕ್ಕೆ ಬುನಾದಿ ಹಾಕಿದವರು ಕಾಂಗ್ರೆಸ್‌ನ ಮಹಾನ್ ನಾಯ ಕರು. ದೇಶದ ಏಕತೆಗಾಗಿ ಸಾವಿ ರಾರು ಕಿಲೋಮೀಟರ್ ನಡೆದ ಹಾಗೂ ಹುತಾತ್ಮ ಪ್ರಧಾನಿಯ ಮಗ ಯಾವತ್ತೂ ಈ ದೇಶಕ್ಕೆ ಅವಮಾನ ಮಾಡುವುದಿಲ್ಲ ಎಂದರು.
ಕೂಡಲೇ ಅನರ್ಹಗೊಳಿಸಿರು ವುದನ್ನು ವಾಪಾಸು ಪಡೆಯಬೇಕು. ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ರಾಹುಲ್ ಗಾಂಧಿ ಅವರ ಅನರ್ಹತೆ ತಡೆಹಿಡಿಯಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ಪ್ರಮುಖರಾದ ರವಿ ಕಾಟಿಕೆರೆ, ಚರಣ, ಹರ್ಷಿತ್, ವಿಜಯಕುಮಾರ್ ಎಸ್.ಎನ್., ರವಿಕುಮಾರ್, ಚಂದ್ರೋಜಿ ರಾವ್, ತೌಫಿಕ್, ಬಸವರಾಜ್ ಪ್ರಮೋದ್, ಸಮರ್ಥಗೌಡ, ಅಭಿಷೇಕ್, ವರುಣ್, ಕುಮಾರ್, ಉಸ್, ಪ್ರದೀಪ್, ಸಾಗರ್, ದೀಪು, ಅನಂತ, ಅಶೋಕ್, ಯೋಗೇಶ್, ಕಾರ್ತಿಕ್, ಮಧು ನಿಖಿಲ್ ಪಾಲ್ಗೊಂಡಿದ್ದರು.