ಪ್ರಧಾನಿ ರೋಡ್ ಶೋ ಸಂದರ್ಭದಲ್ಲಿ ಬಿಜೆಪಿ ನಾಯಕರ ಮಾದರಿ ನಡೆ: ಬೊಮ್ಮಾಯಿ ಸಮರ್ಥನೆ
ಬೆಂಗಳೂರು : ಚಂದ್ರಯಾನ ೩ ಯಶಸ್ಸಿನ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಸ್ರೊ ವಿeನಿಗಳನ್ನು ಸನ್ಮಾನಿಸಲು ಆಗಮಿಸಿದಾಗ ನಮ್ಮ ಬಿಜೆಪಿ ನಾಯಕರು ಸಾರ್ವಜನಿಕ ರೊಂದಿಗೆ ನಿಂತು ಮಾದರಿಯ ನಡೆ ಅನುಸರಿಸಿzರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿzರೆ.
ಶೋಭಾ ನಾಗಸಂದ್ರ ಅಪಾರ್ಟ್‌ಮೆಂಟ್ ವೆಲ್‌ಫೇರ್ ಅಸೋಸಿಯೇಷನ್ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚಂದ್ರಯಾನ ೩ ಯಶಸ್ವಿ ಉಡಾವಣೆಗೆ ಕಾರಣರಾದ ವಿeನಿಗಳಿಗೆ ಸನ್ಮಾನಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಯವರ ಶಿಷ್ಟಾಚಾರ ಪಾಲನೆಯಲ್ಲಿ ರಾಜ್ಯ ಬಿಜೆಪಿ ನಾಯಕರು ರಸ್ತೆಯ ಮಧ್ಯ ಜನರ ಜೊತೆ ನಿಂತ ಕೈ ಬೀಸಿರುವುದಕ್ಕೆ ಕಾಂಗ್ರೆಸ್ ಟೀಕೆ ಮಾಡಿರುವದಕ್ಕೆ ಪ್ರತಿಕ್ರಿಯಿಸಿ, ಪ್ರೋಟೋಕಾಲ್ ಪಾಲನೆಯಲ್ಲಿ ಯಾವುದೇ ಗೊಂದಲ ಇರಲಿಲ್ಲ. ನಾವೆಲ್ಲ ಸಾರ್ವಜನಿಕ ಜೀವನಕ್ಕೆ ಬಂದಿರುವುದು ಸೇವೆ ಮಾಡಲು. ಇಸ್ರೋದಂಥ ಸಂಸ್ಥೆ, ವಿeನಿಗಳು ಇಂಥ ದೊಡ್ಡ ಸಾಧನೆ ಮಾಡಿದಾಗ ನಾವು ಒಂದು ಹೆಜ್ಜೆ ಹಿಂದೆ ಸರಿಯಬೇಕು. ನಾವು ಹಿಂದೆ ಸರಿದು ಅವರಿಗೆ ಮಹತ್ವ ಕೊಡ ಬೇಕು. ಸೇವಾ ಮನೋಭಾವದಿಂದ ಸಾಮಾನ್ಯ ಜನರ ನಡುವೆ ನಮ ನಾಯಕರು ಇದ್ದು ಆ ಕೆಲಸ ಮಾಡಿ zರೆ. ಅದನ್ನು ತಿಳಿದುಕೊಳ್ಳುವ, ಹೊಗಳುವ ಮನಸುಗಳು ಬೇಕಷ್ಟೇ ಎಂದರು.
ಇಸ್ರೋ ಅಧ್ಯಕ್ಷರು ಮೂರು ನಿಮಿಷ ಮಾತನಾಡಿ ಸಾಧನೆಗೆ ಕಾರಣರಾದವರಿಗೆ ಮುಂದೆ ಬಿಟ್ಟರು. ಇದರರ್ಥ ಇಸ್ರೋ ಅಧ್ಯಕ್ಷರು ಹಿಂದೆ ಸರಿದರು ಅಂತಲ್ಲ. ನಮ್ಮ ನಾಯಕರು ಹಿಂದೆ ಸರಿದು ನಿಂತು ಜನರನ್ನು ಮುಂದೆ ಬಿಟ್ಟಿzರೆ ಎಂದು ಸಮರ್ಥಿಸಿಕೊಂಡರು.
ಇಸ್ರೋ ವಿeನಿಗಳಿಗೆ ಅಭಿನಂದಿಸಲು ಪ್ರಧಾನಿಯವರು ಬಂದಾಗ ಜನರ ಮಧ್ಯೆ ನಮ್ಮ ನಾಯಕರು ನಿಂತಿzರೆ. ನಮ್ಮ ನಾಯಕರು ಅತ್ಯಂತ ಮಾದರಿ ಯಾದ ಅನುಕರಣೀಯ ನಡವಳಿಕೆ ತೋರಿzರೆ. ಇವತ್ತಿನ ದಿನ ಎಲ್ಲರೂ ತಮ್ಮ ಸ್ಥಾನಮಾನಕ್ಕೆ ಪೈಪೋಟಿ ಮಾಡುತ್ತಾರೆ. ನಮ್ಮ ನಾಯಕರು ಅತ್ಯಂತ ಅನುಕರಣನೀಯ ಮಾದರಿ ಅನುಸರಿಸಿzರೆ. ಬಿಜೆಪಿ ನಾಯಕರು ಬೀದಿ ಪಾಲಾದರು, ಬ್ಯಾರಿಕೇಡ್ ಬಂಧಿ ಆದರು ಅಂತ ಕಾಂಗ್ರೆಸ್‌ನವರು ಹೇಳಿರುವುದು ಅವರ ಮನಸ್ಥಿತಿ ತೋರಿಸುತ್ತದೆ ಎಂದರು.
ಪ್ರಧಾನಿ ಮೋದಿ ಸ್ವಾಗತಕ್ಕೆ ಶಾಸಕ ಎಸ್.ಟಿ.ಸೋಮಶೇಖರ್ ಬಾರದೇ ಇರದಿರುವ ಕುರಿತು ಕೇಳಿದ ಪ್ರಶ್ನೆಗೆ ಅವರ ಜೊತೆ ಮಾತನಾಡಿದ್ದೇನೆ ಎಂದರು.
ಶೇ.೪೦ ನಿರ್ಧಿಷ್ಟ ಪ್ರಕರಣ ಇಲ್ಲ: ಹಿಂದಿನ ರಾಜ್ಯ ಸರ್ಕಾರದ ಅವಧಿಯಲ್ಲಿ ಶೇ.೪೦ ಕಮೀಷನ್, ಕೋವಿಡ್ ಅಕ್ರಮಗಳ ತನಿಖೆಗೆ ವಿಚಾರಣಾ ಆಯೋಗಗಳ ರಚನೆ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಚಾರಣೆ ಆಗಲಿ, ತನಿಖೆ ಆಗಲಿ ಇದರಲ್ಲಿ ಆಶ್ಚರ್ಯ ಏನಿಲ್ಲ. ಈಗಾಗಲೇ ಪಿಎಸ್‌ಐ ನೇಮಕಾತಿ ಕೇಸ್ ತನಿಖೆ ನಡೆದು ಚರ್ಜ್‌ಶೀಟ್ ಆಗಿದೆ. ಇವರು ಚಾರ್ಜ್‌ಶೀಟ್ ನಲ್ಲಿರುವ ವರ ರಕ್ಷಣೆ ಮಾಡುತ್ತಾರಾ ಅಥವಾ ಇನ್ನೊಂದು ಆಯಾಮದಲ್ಲಿ ತನಿಖೆ ಮಾಡುತ್ತಾರಾ? ಪಿಎಸ್‌ಐ ಕೇಸ್‌ನ ತನಿಖೆಯೂ ಪೊಲೀಸರೇ ಮಾಡಬೇಕು ಯಾವ ರೀತಿ ತನಿಖೆ ಮಾಡುತ್ತಾರೆ ಅಂತ ನೋಡೋಣ ಎಂದರು.
ಇನ್ನು ಶೇ.೪೦ ಆರೋಪದಲ್ಲಿ ನಿರ್ದಿಷ್ಟ ಪ್ರಕರಣ ಇಲ್ಲ, ದಾಖಲೆ ಇಲ್ಲ. ಎರಡು ವರ್ಷವಾದರೂ ಅವರು ದಾಖಲೆ ಕೊಟ್ಟಿಲ್ಲ ಲೋಕಾಯುಕ್ತ ಎದುರು ಹೆಚ್ಚು ಟೆಂಡರ್ ಕೊಟ್ಟ ಹಲವು ಪ್ರಕರಣ ಗಳು ಇವೆ. ಇವುಗಳನ್ನು ತನಿಖೆಗೆ ಕೊಡುತ್ತಾರಾ? ಹೊಸ ದೂರು ಕೊಟ್ಟರೆ ಇವರು ಸೇರಿಸಿಕೊಳ್ಳುರಾ? ಭ್ರಷ್ಟಾಚಾರ ಯಾವತ್ತಿದ್ದರೂ ಭ್ರಷ್ಟಾಚಾರವೇ, ಅವರ ಕಾಲದ ಆರೋಪಗಳನ್ನು ತನಿಖೆ ಮಾಡ್ತಾರಾ? ನಮ್ಮ ಕಾಲದ ಆರೋಪಗಳನ್ನು ತನಿಖೆ ಮಾಡಿ ಅಂತ ಮುಕ್ತವಾಗಿ ಹೇಳಿದ್ದೇವೆ.
ಆದರೆ, ಅವರ ಕಾಲದ ಆರೋಪಗಳ ಬಗ್ಗೆಯೂ ತನಿಖೆ ಮಾಡಲಿ ಅದಕ್ಯಾಕೆ ಹಿಂದೇಟು ಹಾಕ್ತಿದಾರೆ? ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ, ರಾಜಕೀಯವಾಗಿ ದುರುಪಯೋಗ ಪಡಿಸಿಕೊಳ್ಳುವ ಹುನ್ನಾರ ಇದರ ಹಿಂದೆ ಇದೆ ಎಂದರು.