ಮಹಿಳೆಯರಿಗೆ ಸ್ವ ಉದ್ಯೋಗ ಪ್ರೇರಣಾ ಶಿಬಿರ

bdvt-training

ಭದ್ರಾವತಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಮಹಿಳಾ eನ ವಿಕಾಸ ಕೇಂದ್ರದ ಸಹಯೋಗದಲ್ಲಿ ಮಹಿಳೆಯರಿಗೆ ಸ್ವ ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮ ನಡೆಸಲಾಯಿತು.
ಒಕ್ಕೂಟದ ಅಧ್ಯಕ್ಷೆ ವಿನೋದ ಅಧ್ಯಕ್ಷತೆ ವಹಿಸಿದ್ದರು. ನಗರದ ಅನು ಗಾರ್ಮೆಂಟ್ಸ್ ಮಾಲೀಕರಾದ ಅನ್ನಪೂರ್ಣ ಸತೀಶ್ ಮುಖ್ಯ ಅಥಿತಿಗಳಾಗಿ ಆಗಮಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಯನ್ನು ಪಡೆದು ಉದ್ಯಮಿಯಾಗಿ ಕಾರ್ಯ ಪ್ರವೃತರಾದ ಬಗೆಯನ್ನು ವಿವರಿಸಿದರು.
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ಸಂಸ್ಥೆಯ ನಿರ್ದೇಶಕ ಕಾಂತೇಶ್ ಅಂಬಿಗರ್, ಸ್ವದ್ಯೋಗ ಮಾಡಲು ಸಿಗುವ ಅರ್ಥಿಕ ಸಹಾಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಉಪನ್ಯಾಸಕ ಸುರೇಶ್ ವೈ ಹಳ್ಳಿ ಮಾತನಾಡಿ, ಸಂಸ್ಥೆಯಲ್ಲಿ ತರಬೇತಿ ಅವಧಿ, ನಿಯಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ತಾಲ್ಲೂಕಿನ ಯೋಜನಾಧಿಕಾರಿ ಮಾಧವ ಗೌಡ, ವಲಯ ಮೇಲ್ವಿಚಾರಕ ಶ್ರೀನಿವಾಸ್, eನ ವಿಕಾಸ ಸಮನ್ವಯಾಧಿಕಾರಿ ಸೌಮ್ಯ, ಸೇರಿದಂತೆ ಸೇವಾ ಪ್ರತಿನಿಧಿಗಳು ಮೊದಲಾದವರು ಉಪಸ್ಥಿತರಿ ದ್ದರು.