ರ್ನಾಟಕ ರಾಜ್ಯ ರೈತ ಸಂಘ ಧರಣಿ -ಮನವಿ
ಶಿವಮೊಗ್ಗ:ರಾಜ್ಯದಲ್ಲಿ ಬರ ಗಾಲ ಕಾಲಿಟ್ಟಿದ್ದು, ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ನೆರವಿಗೆ ಬರಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಇಂದು ಜಿಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿ ಜಿಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿತು.
ಕರ್ನಾಟಕ ಸರ್ಕಾರ ಈಗಾ ಗಲೇ ೧೩೦ ತಾಲೂಕುಗಳನ್ನು ಬರ ಪ್ರದೇಶವೆಂದು ಘೋಷಿಸಲು ತೀರ್ಮಾನಿಸಿದೆ. ಇಂತಹ ಸಂz ರ್ಭದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿ ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಅನುದಾನ ನೀಡುವ ಮೂಲಕ ರೈತರನ್ನು ರಕ್ಷಿಸಬೇಕು. ಎನ್‌ಡಿಆರ್‌ಎಫ್ ನೀತಿಯನ್ನು ಬದಲಾಯಿಸಬೇಕು. ಉದ್ಯೋಗ ಖಾತ್ರಿ ಯೋಜನೆಗೆ ಒತ್ತು ಕೊಡ ಬೇಕು. ಅಂತರ್ ಜಲ ವೃದ್ಧಿಗೆ ನೆರವು ನೀಡಬೇಕು. ರೈತರ ಸಾಲ ಮನ್ನಾ ಮಾಡಬೇಕು ಎಂದು ಧರಣಿ ನಿರತರು ಆಗ್ರಹಿಸಿದರು.
ಕಾವೇರಿ ಜಲ ವಿವಾದಕ್ಕೆ ಸಂಬ ಂಧಿಸಿದಂತೆ ನ್ಯಾಯಾಲಯವಾ ಗಲಿ, ನ್ಯಾಯಮಂಡಳಿಯಾಗಲಿ ಸ್ಪಷ್ಟವಾದ ಮಾನದಂಡ ರೂಪಿಸಿಲ್ಲ. ಮಳೆ ಕೊರತೆಯ ಸಂದರ್ಭದಲ್ಲಿ ವಿವಾದ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಕೇಂದ್ರ ಸರ್ಕಾರ ಇಂತಹ ಸಂದರ್ಭದಲ್ಲಿ ಸೂಕ್ತ ಸಂಕಷ್ಟ ಸೂತ್ರವನ್ನು ರೂಪಿಸಬೇಕು ಎಂದು ಒತ್ತಾಯಿಸಿದರು.
ಕಬ್ಬು ಬೆಲೆ ನಿಗದಿಗೆ ಕೇಂದ್ರ ಸರ್ಕಾರ ಶೇ.೧೦.೨೫ ಇಳುವರಿಯನ್ನು ಆಧಾರವಾಗಿಟ್ಟು ಕೊಂಡಿದೆ. ಇದನ್ನು ಮಾರ್ಪಾಡು ಮಾಡಿ ಶೇ.೮.೫ಕ್ಕೆ ಇಳಿಸಬೇಕು. ತೆಂಗು ಬೆಳೆಗಾರರ ನೆರವಿಗೆ ಬರಬೇಕು. ಕೊಬ್ಬರಿಗೆ ಕ್ವಿಂಟಾಲಿಗೆ ಬೆಂಬಲ ಬೆಲೆಯನ್ನು ೨೦ ಸಾವಿರಕ್ಕೆ ಹೆಚ್ಚಿಸಬೇಕು. ಜಿಯ ಎ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಎನ್.ಡಿ. ವಸಂತ ಕುಮಾರ್, ಶಿವಾನಂದ ಕುಗ್ವೆ, ಕಣ್ಣಪ್ಪ, ರಮೇಶ್ ಐಗಿನಬೈಲು, ಪ್ರೇಮಾ ಎನ್., ಜಯಲಕ್ಷ್ಮಿ, ಲತಾ, ನಂದಿನಿ, ಜೋಸೆಫ್, ಎಂ.ಬಿ. ಮಂಜಪ್ಪ, ಇದ್ದರು.