ಆರೋಗ್ಯವಂತ ಯುವಜನರು ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಪುಣ್ಯಕಾರ್ಯದಲ್ಲಿ ತೊಡಗಿಸಿಕೊಳ್ಳಿ: ಪೂರ್ಣಿಮಾ
ಶಿವಮೊಗ್ಗ: ಆರೋಗ್ಯವಂತ ಯುವಜನರು ಮೂರು ತಿಂಗಳಿ ಗೊಮ್ಮೆ ರಕ್ತದಾನ ಮಾಡಬಹು ದಾಗಿದೆ. ರಕ್ತದಾನವು ಜೀವ ಉಳಿಸುವ ಪುಣ್ಯದ ಕಾರ್ಯ ಆಗಿದ್ದು, ರಕ್ತದಾನದ ಬಗ್ಗೆ ಯಾವುದೇ ಭಯ ಬೇಡ ಎಂದು ಜೆಸಿಐ ಶಿವಮೊಗ್ಗ ಭಾವನಾ ಅಧ್ಯಕ್ಷೆ ಪೂರ್ಣಿಮಾ ಸುನೀಲ್ ಹೇಳಿದರು.
ಶಿವಮೊಗ್ಗ ನಗರದ ಮಥುರಾ ಪಾರಾಡೈಸ್ ಎದುರಿನಲ್ಲಿರುವ ಪ್ರವಾಸಿ ಟ್ಯಾಕ್ಸಿ ಚಾಲಕರ ಸಂಘದ ಆವರಣದಲ್ಲಿ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಶಂಕರ ಕಣ್ಣಿನ ಆಸ್ಪತ್ರೆ, ಪ್ರವಾಸಿ ಟ್ಯಾಕ್ಸಿ ಚಾಲಕರ ಸಂಘ, ಸಂಜೀವಿನಿ ಬ್ಲಡ್ ಬ್ಯಾಂಕ್ ಹಾಗೂ ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ, ನೇತ್ರದಾನ ಶಿಬಿರ ಹಾಗೂ ದೇಹದಾನ ಶಿಬಿರದಲ್ಲಿ ಮಾತನಾಡಿದರು.
ಸದೃಢ ಆರೋಗ್ಯ ಕಾಪಾಡಿ ಕೊಳ್ಳಲು ರಕ್ತದಾನವು ಮಹತ್ತರ ಪಾತ್ರ ವಹಿಸುತ್ತದೆ. ರಕ್ತದಾನ ಮಾಡಲು ಅರ್ಹ ಇರುವ ಎಲ್ಲರೂ ಕಾಲ ಕಾಲಕ್ಕೆ ರಕ್ತದಾನ ಮಾಡ ಬೇಕು. ತುರ್ತು ಸಂದರ್ಭಗಳಲ್ಲಿ ಜೀವ ಉಳಿಸುವ ಕಾಯಕಕ್ಕೆ ನೀವು ಮಾಡುವ ರಕ್ತದಾನ ಸಹಕಾರಿ ಯಾಗುತ್ತದೆ ಎಂದು ತಿಳಿಸಿದರು.
ರಕ್ತದಾನ, ನೇತ್ರದಾನ ಹಾಗೂ ದೇಹದಾನದ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳ ಬೇಕು. ಇದರಿಂದ ಆಗುವ ಪ್ರಯೋಜನಗಳ ಬಗ್ಗೆ ಜಗೃತಿ ಹೊಂದಬೇಕು. ಸೇವಾ ಚಟುವಟಿಕೆ ಗಳು ಯಶಸ್ವಿ ಆಗಲು ಎಲ್ಲರ ಸಹಕಾರ ಮುಖ್ಯ ಎಂದರು. ೨೦೦ಕ್ಕೂ ಅಧಿಕ ಜನರು ಭಾಗವಹಿಸಿ ರಕ್ತದಾನ ಮಾಡಿದರು. ಇಬ್ಬರು ದೇಹದಾನ ಹಾಗೂ ಅನೇಕರು ನೇತ್ರದಾನದ ಕಾರ್ಯದಲ್ಲಿ ಭಾಗಿಯಾದರು.
ಜೆಸಿಐ ವಲಯ ಅಧ್ಯಕ್ಷ ಅನುಷ್ ಗೌಡ, ಕಾರ್ಯಕ್ರಮ ಸಂಚಾಲಕ ಪ್ರದೀಪ್ ಶಂಕರ್, ಶಂಕರ ಕಣ್ಣಿನ ಆಸ್ಪತ್ರೆಯ ಡಾ. ವಿಶ್ವಾಸ್, ಸಂಜೀವಿನಿ ಬ್ಲಡ್ ಬ್ಯಾಂಕ್ನ ದಿನಕರ್, ಶಿವಮೊಗ್ಗ ವೈದ್ಯಕೀಯ ಮಹಾ ವಿದ್ಯಾಲಯದ ಡಾ. ರೇಖಾ, ಟ್ಯಾಕ್ಸಿ ಚಾಲಕರ ಸಂಘದ ಬಿ.ಡಿ.ಗಣೇಶ್, ರಾಘವೇಂದ್ರ, ಸುಽರ್ ಮಲ್ಯ, ಅರುಣ್ ಕುಮಾರ್, ಜೆಸಿಐ ಭಾವನಾ ಪದಾಽಕಾರಿಗಳು, ಪ್ರವಾಸಿ ಟ್ಯಾಕ್ಸಿ ಚಾಲಕರ ಸಂಘದ ಸದಸ್ಯರು, ಸಾರ್ವಜನಿಕರು ಮತ್ತಿತರರು ಉಪಸ್ಥಿತರಿದ್ದರು.