ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಶಾಸಕರ ಸೂಚನೆ

ಚನ್ನಗಿರಿ: ತಾಲೂಕಿನ ನವಿಲೇ ಹಾಳು ಗ್ರಾಪಂ ಸಭಾಂಗಣದಲ್ಲಿ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ತಾಲೂಕು ಮಟ್ಟದ ಅಧಿಕಾರಿಗಳನ್ನು ಹಳ್ಳಿಗೆ ಕರೆದೊಯ್ಯುವ ಮೂಲಕ ಮೊದಲ ಬಾರಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಗ್ರಾಮದ ಜನರ ಸಮಸ್ಯೆಗಳನ್ನು ಅಧಿಕಾರಿಗಳಿಗೆ ತಿಳಿಸಿ ಪರಿಹರಿಸುವ ಕೆಲಸ ಮಾಡಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿ ಗಳಿಗೆ ಸಮರ್ಪಕವಾಗಿ ತಲುಪಿಸು ವುದು, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ತಲುಪಿ ಸುವುದು, ಅಕ್ರಮ-ಸಕ್ರಮದಡಿ ರೈತರಿಗೆ ಟಿಸಿ ವಿತರಣೆ, ಬರಗಾಲ ಹಿನ್ನೆಲೆಯಲ್ಲಿ ರೈತರಿಗೆ ಪರಿಹಾರ ವಿತರಣೆ ಸೇರಿದಂತೆ ಪ್ರಮುಖ ವಿಷಯಗಳು ಇಂದು ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಚರ್ಚೆಗೆ ಬಂದಿದ್ದವು.
ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಪಡಿತರ ಹಣ ಕೆಲವು ಅರ್ಹ ಫಲಾನುಭವಿಗಳ ಅವರ ಬ್ಯಾಂಕ್ ಖಾತೆಗೆ ಜಮಾವಾಗಿದ್ದರೆ, ಇನ್ನೂ ಕೆಲವು ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ ಎಂಬ ದೂರುಗಳು ಬರುತ್ತಿವೆ. ಕೂಡಲೇ ತಹಸೀಲ್ದಾರ್, ತಾಪಂ ಇಒ, ಬ್ಯಾಂಕ್ ಅಧಿಕಾರಿಗಳು, ಆಹಾರ ಇಲಾಖೆ ಅಧಿಕಾರಿಗಳು, ಸಂಬಂಧಪಟ್ಟ ನ್ಯಾಯ ಅಂಗಡಿಗಳ ಮಾಲೀಕರೊಂದಿಗೆ ಸಮನ್ವಯತೆ ಸಾಧಿಸಿ ಯಾವ ಫಲಾನುವಿಗಳು ಬ್ಯಾಂಕ್‌ಗೆ ಆಧಾರ್ ಲಿಂಕ್ ಆಗಿಲ್ಲವೋ ಅಥವಾ ಲಿಂಕ್ ಆಗಿದ್ದರೂ ಅವರ ಖಾತೆಗೆ ಹಣ ಜಮಾ ಆಗಿಲ್ಲವೋ ಅಂತಹವರನ್ನು ಗುರುತಿಸಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಿ ಅವರಿಗೆ ಗೃಹಲಕ್ಷ್ಮೀಯ ೨ ಸಾವಿರ ರೂ. ಅವರ ಖಾತೆಗೆ ಜಮಾ ಆಗುವಂತೆ ಮಾಡಬೇಕೆಂದು ಸೂಚನೆ ನೀಡಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ನೀಡಲು ಸಂಬಂಧ ಪಟ್ಟ ಅಧಿಕಾರಿಗಳು ಗಮನ ಹರಿಸಬೇಕು. ಬರಗಾಲ ಹಿನ್ನೆಲೆ ಯಲ್ಲಿ ಬೆಸ್ಕಾಂ ಅಧಿಕಾರಿಗಳು ರೈತರಿಗೆ ಸಮಪರ್ಕವಾಗಿ ವಿದ್ಯುತ್ ಪೂರೈಸಲು ಕ್ರಮ ವಹಿಸಬೇಕು. ಮಾತ್ರವಲ್ಲ, ಅಕ್ರಮ-ಸಕ್ರಮದಡಿ ಟಿಸಿಗೆ ಅರ್ಜಿ ಸಲ್ಲಿಸಿರುವ ರೈತ ಫಲಾನುಭವಿಗಳಿಗೆ ಕೂಡಲೇ ಟೆಂಡರ್ ಕರೆದು ನಿಯಮ ಅನುಸಾರ ರೈತರಿಗೆ ಟಿಸಿ ವಿತರಿಸ ಬೇಕು ಎಂದು ಸೂಚನೆ ನೀಡಿದರು.
ಈ ಬಾರಿ ಮಳೆ ಇಲ್ಲದೆ ಬರಗಾಲ ಸಂಭವಿಸಿ ರೈತರು ಕಂಗಾಲಾಗಿದ್ದು, ಕೇಂದ್ರ ಸರ್ಕಾರ ಕೂಡಲೇ ಬೆಳೆ ವಿಮೆ ಕಟ್ಟಿದ ಎ ರೈತರ ಖಾತೆಗೆ ನಿಯಮ ಅನುಸಾರ ಬೆಳೆ ವಿಮೆ ಜಮಾ ಮಾಡಬೇಕು. ಹಿಂದಿನ ವರ್ಷಗಳಲ್ಲಿ ಬೆಳೆ ವಿಮೆ ಕಟ್ಟಿದ ಕೆಲವೇ ರೈತರ ಖಾತೆಗೆ ಹಣ ಜಮಾ ಆಗಿದೆ ಎಂಬ ದೂರು ಇವೆ. ಇದು ಆಗಬಾರದು, ಕಟ್ಟಿದ ಎ ರೈತರ ಖಾತೆಗೆ ಜಮಾ ಆಗಬೇಕೆಂದರು. ಮುಂಗಾರು ಇಲ್ಲದೆ ಈಗಾಗಲೇ ರೈತರು ತತ್ತರಿಸಿ ಹೋಗಿ zರೆ. ಹಿಂಗಾರು ಆರಂಭದ ಪೂರ್ವದಲ್ಲಿಯೇ ರೈತರಿಗೆ ಸಮಪರ್ಕ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಮಾಡಿ ವಿತರಿಸಲು ಕ್ರಮ ವಹಿಸುವಂತೆ ಕೃಷಿ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಚನ್ನಗಿರಿ ತಹಸೀಲ್ದಾರ್, ಗ್ರಾಪಂ ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷರು, ಸದಸ್ಯರು, ಬೆಸ್ಕಾಂ, ಕೃಷಿ, ಆಹಾರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಸೌಲಭ್ಯಗಳ ಅರ್ಹ ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಿದರು.