ಎಲೆಕ್ಷನ್: ಮೇ 10ಕ್ಕೆ ಓಟಿಂಗ್; ಮೇ 13ಕ್ಕೆ ರಿಸಲ್ಟ್…

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕದ ೨೨೪ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದೆ. ಮಾ.೨೯ರ ಇಂದು ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ ೧೦ರಂದು ಮತದಾನ ನಡೆಯಲಿದ್ದು, ಮೇ ೧೩ ರಂದು ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟವಾಗಲಿದ್ದು, ಇನ್ನು ಈ ಕ್ಷಣದಿಂ ದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಏ.೧೩ರಂದು ಅಧಿಸೂಚನೆ ಪ್ರಕಟ ವಾಗಲಿದ್ದು, ಏ.೨೦ ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿರುತ್ತದೆ, ಏ.೨೪ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಮೇ ೧೩ ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮೇ ೧೫ ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊ ಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.
ಈಶಾನ್ಯದ ಮೂರು ರಾಜ್ಯಗಳ ಚುನಾವಣೆ ಸಕ್ಸಸ್ ಆಗಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಗಾಗಿ ನಮ್ಮ ಪ್ರಯತ್ನ. ರಾಜ್ಯದಲ್ಲಿ ೫,೨೧,೭೩,೫೭೯ ಜನ ಮತದಾರರಿದ್ದಾರೆ. ೨,೬೨,೪೨,೫೬೧ ಜನ ಪುರುಷ ಮತದಾರರು ಹಾಗೂ ೨,೫೯,೨೬,೩೧೯ ಮಹಿಳಾ ಮತದಾರರಿ ದ್ದಾರೆ. ೮೦ ವರ್ಷ ಮೇಲ್ಪಟ್ಟವರು ೧೨,೧೫,೭೬೩ ಜನ ಇದ್ದಾರೆ. ೧೦೦ ವರ್ಷ ಮೇಲ್ಪಟ್ಟ ೧೬,೯೭೬ ಮತದಾರರಿದ್ದಾರೆ. ೯,೧೭,೨೪೧ ಮಂದಿ ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. ೪,೬೯೯ ತೃತೀಯ ಲಿಂಗಿ ಮತದಾರರಿದ್ದಾರೆ. ೧೭ ವರ್ಷ ಮೇಲ್ಪಟ್ಟವರು ೧,೨೫,೪೦೬ ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದು ಇತ್ತೀ ಚೆಗೆ ರಾಜ್ಯ ವಿಧಾನಸಭೆ ಚುನಾ ವಣೆಯ ಸಿದ್ಧತೆ ಪರಿಶೀಲನೆಗಾಗಿ ಬೆಂಗ ಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮಾಹಿತಿ ನೀಡಿದರು.
ಭಾರತದ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನದ ದಿನಾಂಕ ಗಳನ್ನು ಪ್ರಕಟಿಸಿದೆ. ಚುನಾವಣಾ ದಿನಾಂಕಗಳ ಘೋಷಣೆ ಯೊಂದಿಗೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ರಾಜಕೀಯ ನಾಯ ಕರು, ಪಕ್ಷಗಳು, ಅಧಿಕಾರಿಗಳು, ಚುನಾ ವಣಾ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲರೂ ಈ ನೀತಿಸಂಹಿತೆಗೆ ಬದ್ಧರಾಗಿರಬೇ ಕಾಗುತ್ತದೆ.
ನಗರ ಪ್ರದೇಶದಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಆಯೋಗ ಕ್ರಮ ಕೈಗೊಳ್ಳಲಿದೆ. ಬೆಂಗಳೂರಲ್ಲಿ ಕೆಲವು ಕ್ಷೇತ್ರ ಗಳಲ್ಲಿ ಕಡಿಮೆ ಮತದಾನವಾಗುತ್ತಿದೆ. ಇದ ನ್ನು ತಡೆಯಲು ಪರಿಹಾರ ಕಂಡು ಕೊಳ್ಳಲು ಎಲೆಕ್ಟ್‌ಥಾನ್ ಕೈಗೊಳ್ಳಲು ಮುಂದಾಗಿ ದ್ದೇವೆ. ಐಐಎಸ್‌ಸಿ ಇದರಲ್ಲಿ ಕೈಜೋಡಿ ಸಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಒಟ್ಟು ೫೮,೨೮೨ ಮತಗಟ್ಟೆಗಳು ಇರಲಿವೆ. ಒಂದು ಮತಗಟ್ಟೆಯಲ್ಲಿ ೮೮೩ ಜನ ಮತ ಹಾಕಬಹುದಾಗಿದೆ. ನಗರ ಪ್ರದೇಶಗಳಲ್ಲಿ ೨೪,೦೬೩ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ೩೪,೨೧೯ ಮತಗಟ್ಟೆಗಳು ಇರಲಿವೆ. ಹಾಗೇ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳು ಇರುವಂತೆ ನೋಡಿಕೊಳ್ಳಲಾಗುವುದು. ಅಂಗವಿಕಲ ರಿಗೆ ವ್ಹೀಲ್‌ಚೇರ್ ವ್ಯವಸ್ಥೆ ಇರಲಿದೆ. ಅಭ್ಯರ್ಥಿಗಳು ಸುವಿಧಾ ಮೂಲಕವೂ ನಾಮಪತ್ರ ಸಲ್ಲಿಸಬಹುದು.
ಅಫಿಡವಿಟ್ ಕೂಡ ಸಲ್ಲಿಕೆ ಮಾಡಬ ಹುದು. ಅಪರಾಧ ಪ್ರಕರಣಗಳು ಇದ್ದರೆ ಮೂರು ಬೇರೆ ಬೇರೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಿರಬೇಕು. ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪೇಪರ್ ಕಟ್ಟಿಂಗ್ ಕೂಡ ಅಪ್‌ಲೋಡ್ ಮಾಡಬೇಕು. ಸಭೆ, ಸಮಾರಂಭ ಮಾಡುವುದಕ್ಕೂ ಆನ್‌ಲೈನ್ ಮೂಲಕವೇ ಮನವಿ ಸಲ್ಲಿಸಬಹುದು ಎಂದು ಇತ್ತೀಚೆಗೆ ರಾಜೀವ್ ಕುಮಾರ್ ಹೇಳಿದ್ದಾರೆ.