ಲಸಿಕೆ ಕಾರ್ಯಕ್ರಮಕ್ಕೆ ಶಾಸಕಿ ಶಾರದಾ ಪೂರ್‍ಯಾನಾಯ್ಕರಿಂದ ಚಾಲನೆ

ಶಿವಮೊಗ್ಗ : ೨೦೨೩-೨೪ನೇ ಸಾಲಿನಲ್ಲಿ ರಾಷ್ಟ್ರೀಯ ಜನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ೪ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯ ಪ್ರತಿ ವಾರ್ಡ್/ ಹಳ್ಳಿಗಳಲ್ಲಿ ಪಶುಪಾಲನಾ ಇಲಾಖಾ ವತಿಯಿಂದ ರೈತರ ಮನೆಮನೆಗೆ ತೆರಳಿ ಲಸಿಕೆಯನ್ನು ಸೆ. ೨೬ರಿಂದ ಅ.೨೫ರವರೆಗೆ ಹಮ್ಮಿಕೊಂಡಿದ್ದು, ಈ ನಿಮಿತ್ತ ಸೆ.೨೬ರಂದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಶಾಸಕಿ ಶ್ರೀಮತಿ ಶಾರದಾ ಪೂರ್‍ಯಾನಾಯ್ಕ ಅವರು ತಾಲ್ಲೂಕಿನ ಗೆಟ್ಟೇನಹಳ್ಳಿ ಗ್ರಾಮದಲ್ಲಿ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಕೋಟೆಗಂಗೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ವಿಜಯ್ ಕುಮಾರ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ| ಶಿವಯೋಗಿ ಬಿ ಯಲಿ, ಕೆ.ಎಂ.ಎಫ್. ವ್ಯವಸ್ಥಾಪಕ ನಿರ್ದೇಶಕ ಶೇಖರ್. ವ್ಯವಸ್ಥಾಪಕ ಡಾ| ಮುರಳೀಧರ್, ಮುಖ್ಯ ಪಶುವೈದ್ಯಾಧಿಕಾರಿ ಡಾ| ಬಸವರಾಜ್ ಕೆ.. ಮಹಾದೇವ ಶರ್ಮಾ ಬಿ.ಎಂ., ಮುಖ್ಯ ಪಶುವೈದ್ಯಾಧಿಕಾರಿಗಳು, ಡಾ| ಅರವಿಂದ ಕೆ., ಮುಖ್ಯ ಪಶುವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.