ವಾಲಿಬಾಲ್ : ಪ್ರಗತಿ ಶಾಲೆ ಮಕ್ಕಳು ರಾಷ್ಟ್ರಮಟ್ಟಕ್ಕೆ
ಸಾಗರ: ಪ್ರಗತಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರೌಢಶಾಲಾ ವಿಭಾಗದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ ಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿzರೆ.
ಮೈಸೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಗತಿ ಶಾಲೆಯ ತಂಡ ಪ್ರಥಮ ಸ್ಥಾನ ಪಡೆದಿದ್ದು, ತಂಡದ ಸದಸ್ಯರಾದ ನಿಖಿಲ್ ವಿ., ಜೀವನ್ ಶೇಟ್, ಮಹ್ಮದ್ ಅರ್ಮಾನ್ ಜಮ್ಮುಕಾಶ್ಮೀರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಲಿ ರುವ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿzರೆ. ಉತ್ತಮ ಸಾಧನೆ ತೋರಿರುವ ವಿದ್ಯಾರ್ಥಿ ಗಳಿಗೆ ಹಾಗೂ ದೈಹಿಕ ಶಿಕ್ಷಕ ದೇವರಾಜ್ ಎಸ್.ಎಂ. ಅವರಿಗೆ ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು, ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪದಾಧಿಕಾರಿಗಳು ಅಭಿನಂದಿಸಿzರೆ.