ರಾಗಿಗುಡ್ಡ ಗಲಭೆ: ಸತ್ಯಾಂಶ ಪತ್ತೆಹಚ್ಚಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಿ: ಕಾಂಗ್ರೆಸ್ ಮನವಿ
ಶಿವಮೊಗ್ಗ: ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ ಸತ್ಯಾಂಶಗಳನ್ನು ತಿಳಿಸಬೇಕು ಮತ್ತು ಶಾಂತಿ ಕಾಪಾಡಬೇಕು ಎಂದು ಒತ್ತಾಯಿಸಿ ಇಂದು ಜಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್. ರಮೇಶ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಜಿ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.
ರಾಗಿಗುಡ್ಡದಲ್ಲಿ ನಡೆದ ಅಹಿತಕರ ಘಟನೆ ದುರದೃಷ್ಟಕರವಾದುದು. ಶಾಂತಿಗೆ ಹೆಸರಾದ ಶಿವಮೊಗ್ಗದಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು. ಯಾರೇ ತಪ್ಪು ಮಾಡಲಿ ಅವರಿಗೆ ಶಿಕ್ಷೆ ಆಗಲೇಬೇಕು. ಆದರೆ ಘಟನೆಗೆ ಸಂಬಂಧಿಸಿದಂತೆ ಸತ್ಯಾಂಶಗಳು ಹೊರಬರಬೇಕು. ಶಾಂತಿ ಕಾಪಾಡುವ ನಿಟ್ಟಿನಲ್ಲಿ ಯಾವ ಅತಿರೇಕವೂ ಸರಿಯಲ್ಲ ಎಂದು ಮುಖಂಡರು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಆರ್. ಪ್ರಸನ್ನಕುಮಾರ್, ಕಲಗೋಡು ರತ್ನಾಕರ್, ಹೆಚ್.ಸಿ ಯೋಗೀಶ್, ಬಾಬು, ಪರ್ವಿಜ್, ಭಕ್ಷಿ, ಮೂರ್ತಿ, ಶಿವಕುಮಾರ್, ಶಿವಾನಂದ ಮೊದಲಾದವರಿದ್ದರು.