ಯೋಜನೆಯ ಹಣ ಖಾತೆಗೆ ಜಮೆ ಆಗದೆ ಇರುವುದನ್ನು ಖಂಡಿಸಿ ಮನವಿ

ಶಿವಮೊಗ್ಗ: ಗೃಹ ಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಖಾತೆಗೆ ಜಮೆ ಆಗದೆ ಇರುವುದನ್ನು ಖಂಡಿಸಿ ಡಿಸಿ ಮೂಲಕ ಸರ್ಕಾರಕ್ಕೆ ಸಂತ್ರಸ್ತರು ಮನವಿ ಸಲ್ಲಿಸಿದರು.
ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಿ ೩ ತಿಂಗಳಾದರೂ ಮನೆಯೊಡತಿಯ ಬ್ಯಾಂಕ್ ಖಾತೆಗೆ ಇನ್ನೂ ಹಣ ಜಮಾ ಆಗಿರುವುದಿಲ್ಲ. ಈಗಾಗಲೇ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಲಾ ಗಿದೆ. ಇತ್ತೀಚೆಗೆ ಜನತಾ ದರ್ಶನ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವರಿಗೆ ಈ ಬಗ್ಗೆ ದೂರು ನೀಡಿದಾಗ ಸಾರ್ವಜನಿಕರು ಎಲ್ಲಾ ದಾಖಲೆ ಗಳೊಂದಿಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಎಂದು ತಿಳಿಸಿದ್ದರು. ನಾವೆಲ್ಲರೂ ಎಲ್ಲಾ ದಾಖಲೆಗಳನ್ನು ನೀಡಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರೂ ಕೂಡ ಇದುವರೆಗೆ ನಮ್ಮ ಖಾತೆ ಹಣ ಬಂದಿಲ್ಲ. ಆದ್ದರಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂತ್ರಸ್ತರು ಮನವಿಯಲ್ಲಿ ಆಗ್ರಹಿಸಿದ್ದಾರೆ.
ವಿರೂಪಾಕ್ಷ, ರಾಮ ಮೂರ್ತಿ, ಯಾಸ್ಮಿನ್‌ಬಾನು, ಸೌಮ್ಯ, ಸುನೀತಾ, ಜಬೀನಾ ಬಾನು, ಪ್ರೇಮಾ, ಅನಿತಾ, ರತ್ನಮ್ಮ ಮೊದಲಾದವರಿದ್ದರು.