ಯುವಕರಲ್ಲಿ ಸಂಚಲನ ಮೂಡಿಸಿದ ವಿಜಯೇಂದ್ರ ನೇಮಕ…

1NMT1b

ನ್ಯಾಮತಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರ ನೇಮಕ ಯುವಕರಲ್ಲಿ ಹೊಸ ಹುರುಪು ತಂದಿದೆ. ಮುಂದಿನ ದಿನಗಳಲ್ಲಿ ಅವರ ಶಕ್ತಿ ಹಾಗೂ ಯುವಶಕ್ತಿ ಬಳಸಿಕೊಂಡು ರಾಜ್ಯದಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಆಶೋಕ ಹೇಳಿದರು.
ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುವ ಮಾರ್ಗ ಮದ್ಯೆ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದ ವೃತ್ತದಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ನೂರಾರುಮ ಕಾರ್ಯಕರ್ತರು ಸ್ವಾಗತಿಸಿದಾಗ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
ನಾನು ಮತ್ತು ವಿಜಯೇಂದ್ರ ಜೋಡೆತ್ತು . ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ತುಂಟೆತ್ತುಗಳು. ಚುನಾವಣೆಯ ಸಂದರ್ಭದಲ್ಲಿ ತಮ್ಮನ್ನು ಜೋಡೆತ್ತು ಎಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಕರೆದುಕೊಂಡಿದ್ದರು. ಈಗ ಅಧಿಕಾರಕ್ಕಾಗಿ ಕಚ್ಚಾಟ ನಡೆಸುತ್ತಿzರೆ ಎಂದು ಹೇಳಿದರು.
ಬಿಜೆಪಿ ರಾಜಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ ವಾಗಿರುವುದಕ್ಕೆ ಹೊಟ್ಟೆ ಉರಿ ..? ಎಂದು ಅವರು, ವಿಜಯೇಂದ್ರ ಹೆಲಿಕ್ಯಾಪ್ಟರ್‌ನಲ್ಲಿ ಬಂದು ನೇರವಾಗಿ ಅಧ್ಯಕ್ಷರಾದವರಲ್ಲ. ಹತ್ತಾರು ವರ್ಷ ಕಾರ್ಯಕರ್ತರಾಗಿ ಕೆಲಸ ಮಾಡಿzರೆ. ಉಪಾಧ್ಯಕ್ಷ ರಾಗಿದ್ದ ಅವರಿಗೆ ಸಹಜವಾಯೇ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.