ಮಾತೆಯರು, ಸಾಧು ಸಂತರ ಆಶೀರ್ವಾದ ನನ್ನ ಮೇಲಿದೆ: ಈಶ್ವರಪ್ಪ

kse-(1)

ಶಿವಮೆಗ್ಗ: ಹಿಂದುತ್ವವಾದಿಯಾದ ನನಗೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಬಹುತೇಕ ಕಾರ್ಯಕರ್ತರೂ ಕೂಡ ಬೆಂಬಲ ನೀಡುತ್ತಾರೆ. ನನ್ನ ಸೈದ್ಧಾಂತಿಕ ಹೋರಾಟಕ್ಕೆ ಜಯ ಸಿಕ್ಕೇ ಸಿಗುತ್ತದೆ ಎಂದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಕೆ.ಎಸ್.ಈಶ್ವರಪ್ಪ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೊಬ್ಬ ಹಿಂದುತ್ವವಾದಿ, ಬಿಜೆಪಿ ಪಕ್ಷದ ಶುದ್ಧೀಕರಣಕ್ಕಾಗಿ, ಕುಟುಂಬ ರಾಜಕಾರಣ ವಿರೋಧಿಸಿ ಸ್ಪರ್ಧೆ ಮಾಡುತ್ತಿದ್ದೇನೆ. ಈಗಾಗಲೇ ಎ ಸಮಾಜದವರು ಮತ್ತು ಬಿಜೆಪಿ ಸೇರಿದಂತೆ ವಿವಿಧ ಪಕ್ಷದವರು ಜೊತೆಗೆ ರಾಷ್ಟ್ರ ಭಕ್ತ ಮುಸ್ಲಿಂರು ಕೂಡ ನನಗೆ ಅಭೂತಪೂರ್ವ ಬೆಂಬಲ ನೀಡುತ್ತಿzರೆ. ಇವರ ಪ್ರೀತಿ ವಿಶ್ವಾಸಕ್ಕೆ ನಾನು ಅತ್ಯಂತ ಋಣಿಯಾಗಿದ್ದೇನೆ. ನನಗೆ ಹೆಚ್ಚಿನ ಶಕ್ತಿ ಬಂದಿದೆ. ನಾಮಪತ್ರ ಸಲ್ಲಿಸಿದ ಮೇಲೆ ಮತ್ತಷ್ಟು ಶಕ್ತಿ ಬರುತ್ತದೆ. ಈ ಬಾರಿ ಲೋಕಸಭಾ ಕ್ಷೇತ್ರದಲ್ಲಿ ನನ್ನ ಗೆಲುವು ಖಚಿತ ಎಂದರು.
ನಾನು ಈಗಾಗಲೇ ಎಂಟು ವಿಧಾನಸಭಾ ಕ್ಷೇತ್ರವನ್ನೂ ಸುತ್ತಿ ಬಂದಿದ್ದೇನೆ. ಎಲ್ಲ ಕಡೆ ಕಾರ್ಯಕರ್ತರ ಸಂಘಟನೆಯ ಕೆಲಸವಾಗುತ್ತಿದೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಇದುವರೆಗೆ ಎಲ್ಲ ಕ್ಷೇತ್ರಗಳಿಗೆ ಭೇಟಿ ನೀಡಲೇ ಸಾಧ್ಯವಾಗಿಲ್ಲ ಎಂದರು.
ನನ್ನ ಬೆಂಬಲಕ್ಕೆ ಹಿಂದುಳಿದ ವರ್ಗದ ದೊಡ್ಡ ಸಂಖ್ಯೆಯ ಜನರೇ ನಿಂತಿzರೆ. ದಲಿತರು ಜೊತೆಯಾಗಿzರೆ. ಮುಂದುವರೆದ ಜತಿ ಎಂದು ಹೇಳುವ ಬ್ರಾಹ್ಮಣರು, ಲಿಂಗಾಯಿತರು ಮತ್ತು ಒಕ್ಕಲಿಗರು ಅವರದೇ ಆದ ಬೇರೆ ಬೇರೆ ಕಾರಣಕ್ಕೆ ನನಗೆ ಬೆಂಬಲ ಸೂಚಿಸಿzರೆ. ಇದು ನನಗೆ ದೊಡ್ಡ ಆತ್ಮವಿಶ್ವಾಸ ಮೂಡಿಸಿದೆ ಎಂದು ಹೇಳಿದರು.
ನಾನು ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎಂದು ಕೆಲವರು ಅಪಪ್ರಚಾರ ಮಾಡುತ್ತಿzರೆ. ರಾಘವೇಂದ್ರ ಅವರ ಸೋಲಿನ ಭಯವೇ ಇದಕ್ಕೆ ಕಾರಣ. ಆದರೆ ನನ್ನ ಉದ್ದೇಶದಿಂದ ನಾನು ಹಿಂದೆ ಸರಿಯುವುದಿಲ್ಲ. ನನ್ನ ಕಾರ್ಯಕರ್ತರು ಇಂತಹ ಯಾವುದೇ ಸುದ್ದಿಯನ್ನು ನಂಬಬಾರದು ಎಂದು ಮನವಿ ಮಾಡಿದರು.


ಬಿಜೆಪಿ ವರಿಷ್ಠರ ಜೊತೆ ನನ್ನ ಮಾತುಕತೆ ಮುಗಿದಿದೆ. ಇನ್ನು ಯಾರ ಜೊತೆಗೂ ಮಾತುಕತೆಗೆ ಕೂರುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು ನನ್ನನ್ನು ಇನ್ನೂ ಪಕ್ಷದಿಂದ ಯಾಕೆ ಉಚ್ಚಾಟಿಸಿ ಎಂದು ನನಗೆ ಗೊತ್ತಾಗುತ್ತಿಲ್ಲ. ಉಚ್ಚಾಟಿಸಿದರೆ ಇನ್ನಷ್ಟು ಕಟುವಾಗಿ ಮಾತನಾಡಲು ಸಾಧ್ಯ ಎಂದರು.
ಏ.೧೨ರ ನಾಳೆ ಶುಕ್ರವಾರ ನಾಮಪತ್ರ ಸಲ್ಲಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಮುನ್ನ ಬೆಳಗ್ಗೆ ೧೦ ಗಂಟೆಗೆ ರಾಮಣ್ಣ ಶ್ರೇಷ್ಟಿ ಪಾರ್ಕಿನಿಂದ ಸಾವಿರಾರು ಸಂಖ್ಯೆಯಲ್ಲಿ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಗಾಂಧಿ ಬಜರ್, ನೆಹರು ರಸ್ತೆಯ ಮೂಲಕ ಶೀನಪ್ಪ ಶೆಟ್ಟಿ ವೃತ್ತಕ್ಕೆ ಬರಲಾಗುವುದು. ಅಲ್ಲಿ ಸಭೆ ನಡೆಸಿ ಬಳಿಕ ಜಿಧಿಕಾರಿಗಳ ಕಚೇರಿಯಲ್ಲಿ ನಾಪಪತ್ರ ಸಲ್ಲಿಸಲಾಗುವುದು ಎಂದು ವಿವರಿಸಿದರು.
ನಾನು ನರೇಂದ್ರ ಮೋದಿ ಪೋಟೋ ಹಾಕಬಾರದು ಎಂದು ಹೇಳುವ ಇವರು ಯಡಿಯೂರಪ್ಪ, ರಾಘವೇಂದ್ರ ಮತ್ತು ವಿಜಯೇಂದ್ರರ ಫೋಟೋ ಇಟ್ಟುಕೊಂಡು ಹೋಗಿ ಚುನಾವಣೆಯಲ್ಲಿ ಗೆಲ್ಲಲಿ ನೋಡೋಣ ಎಂದು ಈಶ್ವರಪ್ಪ ಸವಾಲು ಹಾಕಿದರು.
ಮೋದಿ ವಿಶ್ವನಾಯಕ. ಅವರ ಫೋಟೋ ಹಾಕಬಾರದು ಎಂದು ಹೇಳಲು ಇವರು ಯಾರು? ಎಂದು ಪ್ರಶ್ನಿಸಿದ ಅವರು, ಚುನಾವಣಾ ಆಯೋಗ ಮತ್ತು ಕೋರ್ಟ್ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದರು.
ನಾಮಪತ್ರದ ಸಲ್ಲಿಸುವ ಠೇವಣಿ ಹಣವಾಗಿ ನಗರದ ಮಹಿಳೆಯರು ಮತ್ತು ಮುತ್ತೈದೆಯರು ಸೇರಿ ೨೪ ಸಾವಿರ ರೂ. ಮತ್ತು ತೀರ್ಥಹಳ್ಳಿಯ ಭೀಮನಕಟ್ಟೆ ಮಠದ ಶ್ರೀಗಳು ೧ ಸಾವಿರ ರೂ. ನೀಡಿದ್ದು, ನನ್ನ ಗೆಲುವಿಗೆ ಈ ನೆಲದ ಶ್ರೇಷ್ಠರಾದ ಸಾಧು ಸಂತರು ಮತ್ತು ತಾಯಂದಿರುವ ಹರಸಿ ಒಟ್ಟು ೨೫ ಸಾವಿರ ರು. ನೀಡಿzರೆ. ಇದು ನನ್ನ ಗೆಲುವಿನ ಸಂಕೇತ ಎಂದರು.
ಪ್ರಚಾರಕ್ಕೆಂದು ಬೇರೆ ಯಾವ ದೊಡ್ಡ ನಾಯಕರೂ ನನಗಿಲ್ಲ. ಇನ್ನು ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅಂತಹವರು ಹಲವರಿzರೆ. ನನಗೆ ಸಾಮಾನ್ಯ ಕಾರ್ಯಕರ್ತರೇ ಸ್ಟಾರ್ ಪ್ರಚಾರಕರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಪ್ರಮುಖರಾದ ಎನ್.ಜಿ. ವೀರಪ್ಪ, ಇ.ವಿಶ್ವಾಸ್, ಶಂಕರ್ ಗನ್ನಿ, ಮಹಾಲಿಂಗಶಾಸ್ತ್ರಿ, ಸತ್ಯನಾರಾಯಣ, ಸುವರ್ಣ ಶಂಕರ್, ಆರತಿ ಆ.ಮಾ. ಪ್ರಕಾಶ್, ಸೀತಾ ಲಕ್ಷ್ಮೀ, ವೆಂಕಟೇಶ್, ಮಹಾದೇವಪ್ಪ, ಬಾಲು, ಆಶಾ ಚನ್ನಬಸಪ್ಪ, ಅನಿತಾ ಸೇರಿದಂತೆ ಹಲವರಿದ್ದರು.