ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರಬೇಕು:ಡಿಕೆಶಿ

2

ಶಿವಮೊಗ್ಗ: ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ. ಅದೇ ಉzಶದಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್‌ಅವರಿಗೆ ಮತ ನೀಡಿ ಹರಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರು ಗ್ಯಾರಂಟಿ ಯೋಜನೆ ಬಗ್ಗೆ ಜರಿದಿzರೆ. ಹಳ್ಳಿಯ ಹೆಣ್ಣು ಮಕ್ಕಳು ಗ್ಯಾರಂಟಿಗಳಿಂದ ಹಾದಿ ತಪ್ಪುತ್ತಿzರೆ ಎಂದು ದೂರಿzರೆ. ಇದು ಖಂಡನೀಯ. ರಾಜ್ಯದೆಡೆ ಈ ಬಗ್ಗೆ ಹೋರಾಟ ಮಾಡಬೇಕು ಎಂದರು.
ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಮಹಿಳೆಯರ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರಣಾಳಿಕೆಯಲ್ಲಿ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ, ಅಲ್ಪಸಂಖ್ಯಾತರ ವೈಯಕ್ತಿಕ ಕಾನೂನುಗಳ ಸುಧಾರಣೆ, ಹಿರಿಯ ನಾಗರಿಕರು, ಅಂಗವಿಕಲರ ಅಭ್ಯುದಯಕ್ಕೆ ಒತ್ತು ನೀಡಿದೆ ಎಂದರು.
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಕನುಸುಗಳಿಗೆ ಜೀವ ತುಂಬಲು ಗೀತಾ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಡಿಕೆ ಶಿವಕುಮಾರ್ ಶಿವಮೊಗ್ಗ ಕ್ಷೇತ್ರದ ಜನತೆಯನ್ನು ಕೋರಿದರು.