ಮನೆ ಮನೆಗೆ ತೆರಳಿ ಕಾಂಗ್ರೆಸ್ ಪರ ಮತಯಾಚಿಸಿದ ನಟ-ನಿರ್ಮಾಪಕ ನಾರಾಯಣ್
ಭದ್ರಾವತಿ : ತಾಲೂಕಿನ ಅರಳೀಹಳ್ಳಿ ತಾಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ಚಿತ್ರನಟ ಹಾಗೂ ನಿರ್ಮಾಪಕ ಭದ್ರಾವತಿ ಮೂಲದ ಎಸ್. ನಾರಾಯಣ್ ಮತಯಾಚನೆ ಮಾಡಿದರು.
ಕಾಂಗ್ರೆಸ್ ಸರ್ಕಾರ ಹೇಳಿದಂತೆ ನಡೆದುಕೊಂಡಿದೆ. ರಾಜ್ಯದ ಗ್ಯಾರಂಟಿ ಯೋಜನೆಗಳು ಜನರ ಕೈ ಸೇರಿದಂತೆ ಕಾಂಗ್ರೆಸ್ ಪಕ್ಷ ಕೇಂದ್ರ ದಲ್ಲಿ ಅಧಿಕಾರಕ್ಕೆ ಬಂದ ನಂತರ ಇಲ್ಲಿನ ತರಹದ ಗ್ಯಾರಂಟಿಗಳು ಸುಲಭವಾಗಿ ನಿಮಗೆ ದೊರಕಲಿವೆ. ಹಾಗಾಗಿ ಈ ಬಾರಿ ನಡೆಯಲಿರುವ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್ ಅವರಿಗೆ ನಿಮ್ಮ ಅಮೂಲ್ಯವಾದ ಮತವನ್ನು ಕೊಟ್ಟು ದೇಶದ ಅಭಿವೃದ್ದಿಗೆ ಸಹಕರಿಸಿ ಎಂದು ಮನವಿ ಮಾಡಿ ಗ್ಯಾರಂಟಿ ಕಾರ್ಡ್ ವಿತರಿಸಿದರು.
ಜಿಪಂ ಮಾಜಿ ಸದಸ್ಯ ಮಣಿಶೇಖರ್, ಸೇರಿದಂತೆ ಹಲವರಿದ್ದರು.