ಹೊನ್ನಾಳಿ ತಾಲೂಕಿನಾದ್ಯಂತ ಶಾಂತಿಯುತ ಮತದಾನ…

hln-(2)

ಹೊನ್ನಾಳಿ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಡೆದ ಮತದಾನದಲ್ಲಿ ಹೊನ್ನಾಳಿ ತಾಲೂಕಿನಾದ್ಯಂತ ಶಾಂತಿಯುತ ಮತದಾನ ನಡೆಯಿತು.
ಸುಡು ಬಿಸಿಲಿನಲ್ಲಿ ಮಹಿಳೆಯರು ಮತ್ತು ಪುರುಷರು ಸಾಲು ಸಾಲಾಗಿ ನಿಂತು ಮತ ಚಲಾಯಿಸಿzರೆ. ಕೆಲವು ಮತಗಟ್ಟೆಗಳಲ್ಲಿ ೮೦ ವರ್ಷ ಮೇಲ್ಪಟ್ಟ ವಯೋವೃದ್ಧರು ಮತಗಟ್ಟೆಗೆ ಆಗಮಿಸಿ ಸರದಿ ಸಾಲಿನಲ್ಲಿ ನಿಂತು ಮತಚಲಾಯಿ ಸಿದ್ದು ವಿಶೇಷವಾಗಿತ್ತು.
ಹೊನ್ನೂರು ವಡ್ಡರ ಹಟ್ಟಿ ಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತದಾನ ಬಹಿಷ್ಕರಿಸಲಾಗಿತ್ತು. ಎಸಿ ಅಬೀಷೇಕ್ ಮತ್ತು ತಾಲೂಕು ದಂಡಾಧಿಕಾರಿ ಪುರಂದರ ಹೆಗ್ಡೆ ಅವರು ಸ್ಥಳಕ್ಕೆ ಭೇಟಿ ನೀಡಿ ಮನವೊಲಿಸಿದ ಪರಿಣಾಮ ಮತದಾನ ಪ್ರಕ್ರಿಯೆ ಆರಂಭವಾಯಿತು.
ಸುಡು ಬಿಸಿಲಿನಲ್ಲಿ ಅಂಗವಿಕಲರು ಹಾಗೂ ಮಹಿಳೆಯರು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಮತಗಟ್ಟೆಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಚುನಾವಣಾ ಆಯೋಗ ಹಾಗೂ ರಕ್ಷಣಾ ಇಲಾಖೆ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದರು. ಹೊನ್ನಾಳಿ ವಿಧಾನ ಸಭಾ ಕ್ಷೇತ್ರದಲ್ಲಿ ಶೇ ೮೧.೯೦ ರಷ್ಟು ಮತದಾನವಾಗಿದೆ.