ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಮೂಡಿಸಲು ಎನ್‌ಎಸ್‌ಎಸ್ ಸಹಕಾರಿ: ಬಂಗಾರಪ್ಪ

nss

ಶಿವಮೊಗ್ಗ : ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವವವನ್ನು ಮೂಡಿಸುವವಲ್ಲಿ ಎನ್‌ಎಸ್‌ಎಸ್ ಪಾತ್ರ ಮುಖ್ಯವಾದದ್ದು ಎಂದು ಕುವೆಂಪು ವಿವಿ ಹಣಕಾಸು ಅಧಿಕಾರಿ ಬಂಗಾರಪ್ಪ ಹೇಳಿದರು.
ಅವರು ಸಹ್ಯಾದ್ರಿ ಕಲಾ ಕಾಲೇಜಿನ ವತಿಯಿಂದ ಆಯನೂರು ಸಮೀಪದ ದೊಡ್ಡಮತ್ತಲಿ ಗ್ರಾಮದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಗ್ರಾಮ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಆಧುನಿಕ ಬದುಕಿನಲ್ಲಿ ಮನುಷ್ಯ ಸಂಬಂಧಗಳಿಗೆ ಬೆಲೆ ಇಲ್ಲವಾಗಿದೆ. ಸಹಕಾರ, ಸಹಬಾಳ್ವೆಯ ಮನೋಭಾವ ಕಡಿಮೆಯಾಗಿದೆ. ಇದರಿಂದ ಸಾಮಾಜಿಕ ಸಂಬಂಧಗಳು ಕಲುಷಿತವಾಗಿವೆ. ಇಂಥ ಸಂದರ್ಭದಲ್ಲಿ ಎನ್‌ಎಸ್‌ಎಸ್‌ನ ಪಾತ್ರ ಬಹಳ ಮುಖ್ಯವಾದದ್ದು ಎಂದು ಅಭಿಪ್ರಾಯಪಟ್ಟರು.
ಕುವೆಂಪು ವಿವಿ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಶುಭಾ ಮರವಂತೆ ಕಾರ್ಯಕ್ರಮ ಉದ್ಧಾಟಿಸಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳು ತಮ್ಮ ಅನುಭವದಿಂದ ಸಮಾಜಕ್ಕೆ ಕೊಡುಗೆಯಾಗುತ್ತಾರೆ, ಈ ಶಿಬಿರದ ವಿದ್ಯಾರ್ಥಿಗಳು ಊರಿನ ಕೆರೆಯ ಹೂಳೆತ್ತುವ ವಿಶೇಷ ಕಾರ್ಯ ಮಾಡಿzರೆ. ಜೊತೆಗೆ ಊರಿನ ಸ್ವಚ್ಛತಾ ಕಾರ್ಯ ಮಾಡಿರುವುದು ಶ್ಲಾಘನೀಯ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ. ಸೈಯದ್ ಸನಾವುಲ್ಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಳ್ಳಿಗಳ ಇಂಥ ಸುಂದರ ವಾತಾವರಣದಲ್ಲಿ ನಮ್ಮ ವಿದ್ಯಾರ್ಥಿಗಳು ಸಾಕಷ್ಟು ತಿಳುವಳಿಕೆಯನ್ನು ಪಡೆದಿzರೆ. ಇದಕ್ಕೆ ಗ್ರಾಮಸ್ಥರ ಸಹಕಾರ ಕೂಡ ಸಿಕ್ಕಿದೆ. ಕಾಲೇಜು ವಾತಾವರಣದಲ್ಲಿ ಕಲಿಯಲಾರದ್ದನ್ನು ಇಲ್ಲಿ ನಮ್ಮ ವಿದ್ಯಾರ್ಥಿಗಳು ಕಲಿತಿzರೆ ಎನ್ನುವುದೇ ಸಂತೋಷದ ಸಂಗತಿ ಎಂದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಕೆ.ಎನ್. ಮಂಜುನಾಥ್, ಶಿಬಿರದ ಸಹ ನಿರ್ದೇಶಕಿ ಡಾ. ಕಪಾಲಿನಿ, ಶಿಬಿರದ ಸಹ ಶಿಬಿರಾಧಿಕಾರಿಗಳಾದ ಡಾ. ಪ್ರೇಮ ಜಿ.ಕೆ., ಗೌರಿಶಂಕರ್ ಉಪಸ್ಥಿತರಿದ್ದರು. ಕಾರ್ಯಕ್ರಮ ಅಧಿಕಾರಿಗಳಾದ ಡಾ. ಮುದುಕಪ್ಪ ಸ್ವಾಗತಿಸಿದರು, ಡಾ. ಪ್ರಕಾಶ್ ಮರ್ಗನಳ್ಳಿ ವಂದಿಸಿದರು.