ಹೈಕಮಾಂಡ್ ನಿಲುವಿಗೆ ನಾವೆಲ್ಲ ಬದ್ಧ: ಕಾಂಗ್ರೆಸ್ ಮುಖಂಡರು…

ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಂಯುಕ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮಾಜಿ ಶಾಸಕ ಕೆ.ಬಿ ಪ್ರಸನ್ನಕುಮಾರ್, ಪ್ರಚಾರ ಸಮಿತಿ ರಾಜ್ಯ ಸಂಯೋಜಿಕ ಎಸ್.ಪಿ. ದಿನೇಶ್, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ರಮೇಶ್ ಅವರು ಶಿವಮೊಗ್ಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಯಾರಿಗೇ ಟಿಕೆಟ್ ಕೊಟ್ಟರೂ ಕೂಡ ಸ್ವಾಗತಿಸುತ್ತೇವೆ ಎಂದು ಒಕ್ಕೊರಲಿನಿಂದ ಘೋಷಿಸಿದರು.
ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಜಿಲ್ಲಾ ಸಮಿತಿಯ ಜೊತೆ ಪಕ್ಷದ ರಾಜ್ಯ ನಾಯಕರು ಯಾವುದೇ ರೀತಿ ಚರ್ಚೆ ನಡೆಸಿಲ್ಲ. ಆದರೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಮುಖ್ಯ. ಆಯನೂರು ಮಂಜುನಾಥ್ ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬಂದರೂ ಸ್ವಾಗತಿಸುತ್ತೇವೆ. ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಹೈಕಮಾಂಡ್ ಪಕ್ಷದ ಒಳಿತಿಗಾಗಿ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧರಾಗಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇವೆ ಎಂದರು.
ಸುದ್ದಿಗೋಷ್ಟಿಯಲ್ಲಿ ಓಬಿಸಿ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಶಿವಿಶ್ವನಾಥ್, ಉತ್ತರಬ್ಲಾಕ್ ಅಧ್ಯಕ್ಷ ದೀಪಕ್ ಸಿಂಗ್, ಆಸೀಫ್ ಉಪಸ್ಥಿತರಿದ್ದರು.