ಪಟ್ಟಣದಲ್ಲಿ ಆಕರ್ಷಣಿಯ ಕೇಂದ್ರವಾಗಲಿದೆ ಸಖಿ ಮತಗಟ್ಟೆ: ಕಾವ್ಯರಾಣಿ..

ಯಲಬುರ್ಗಾ: ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಯಲಬುರ್ಗಾ ಪಟ್ಟಣದ ಸರ್ಕಾರಿ ಶಾಲೆಗಳಲ್ಲಿನ ೧೧ ಮತಗಳಲ್ಲಿ ನೀರು, ಶೌಚಾಲಯ, ರ್‍ಯಾಂಪ್, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಚುನಾವಣಾಧಿಕಾರಿ ಕಾವ್ಯರಾಣಿ ಕೆ.ವಿ ಅವರು ಪರಿಶೀಲಿಸಿದರು.
ಪಟ್ಟಣದ ಶಾಸಕರ ಮಾದರಿ ಶಾಲೆ, ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.೨ ಶಾಲೆ ಹಾಗೂ ಪಟ್ಟಣ ಪಂಚಾಯತಿಯ ಮತಗಟ್ಟೆಗಳಿಗೆ ಭೇಟಿ ನೀಡಿದ ಅವರು, ಮತಗಟ್ಟೆಗಳಲ್ಲಿರುವ ಸಣ್ಣಪುಟ್ಟ ಕೆಲಸವನ್ನು ಬೇಗನೆ ಮುಗಿಸಬೇಕು. ಪಾರ್ಕಿಂಗ್ ವ್ಯವಸ್ಥೆಯನ್ನು ಸಿದ್ದಪಡಿಸಿಟ್ಟುಕೊಳ್ಳಬೇಕು. ಶೌಚಾಲಯದಲ್ಲಿ ನೀರಿನ ವ್ಯವಸ್ಥೆ, ಗಾಳಿ, ಬೆಳಕಿನ ವ್ಯವಸ್ಥೆ ಸರಿಯಾಗಿರಲಿ. ಸಖಿ ಮತಗಟ್ಟೆ ಯನ್ನು ಮಹಿಳೆಯರಿಗಾಗಿಯೇ ಮಾಡುವುದರಿಂದ ಅದನ್ನು ವಿಶೇಷವಾಗಿ ಆಕರ್ಷಣೀಯ ಕೇಂದ್ರವಾಗಿ ಕಾಣುವಂತೆ ಪೆಂಟಿಂಗ್ ಮಾಡಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪಪಂ ಮುಖ್ಯಾಧಿಕಾರಿಗಳಾದ ಪ್ರಕಾಶ ಮಠದ ಹಾಗೂ ಪಟ್ಟಣ ಪಂಚಾಯತಿ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು