ವೃತ್ತಿಯ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿತೊಡಗಿಸಿಕೊಳ್ಳಿ
ಶಿವಮೊಗ್ಗ; ಪ್ರತಿನಿತ್ಯ ನಮ್ಮ ವೃತ್ತಿಯ ಜತೆಯಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಲು ಮುಂದಾU ಬೇಕು. ಪ್ರತಿಯೊಬ್ಬರು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಪಂಜಬ್ ನ್ಯಾಷನಲ್ ಬ್ಯಾಂಕ್ ಮ್ಯಾನೇಜರ್ ಅರವಿಂದ ಶರ್ಮಾ ಹೇಳಿದರು.
ನಗರದ ಸವಾರ್ ಲೈನ್ ರಸ್ತೆಯ ಪಂಜಬ್ ನ್ಯಾಷನಲ್ ಬ್ಯಾಂಕಿನಲ್ಲಿ ಬ್ಯಾಂಕ್‌ನ ೧೨೯ನೇ ಸಂಸ್ಥಾಪಕರ ದಿನಾಚರಣೆ ಪ್ರಯುಕ್ತ ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್ ಸಹಕಾರದೊಂದಿಗೆ ಬ್ಯಾಂಕ್ ನೌಕರರು ಮತ್ತು ಗ್ರಾಹಕರು ರಕ್ತದಾನ ಮಾಡಿದರು.
ಬ್ಯಾಂಕ್ ವತಿಯಿಂದ ನಿರಂತರ ವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿ ಕೊಂಡು ಬಂದಿದ್ದು, ಸಂಸ್ಥಾಪಕರ ದಿನಾಚರಣೆ ಪ್ರಯುಕ್ತ ರಕ್ತದಾನದಂತಹ ಸೇವಾ ಕಾರ್ಯ ಆಯೋಜಿಸಲಾಗಿದೆ. ಬ್ಯಾಂಕ್ ಸಿಬ್ಬಂದಿ ಸೇರಿದಂತೆ ಅನೇಕರು ರಕ್ತದಾನ ಮಾಡುತ್ತಿzರೆ ಎಂದರು.
ಇದೇ ಸಂದರ್ಭದಲ್ಲಿ ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆ ಮಾಜಿ ಅಧ್ಯಕ್ಷ ಜಿ.ವಿಜಯ್ ಕುಮಾರ್ ಮಾತನಾಡಿ, ರಕ್ತದಾನ ಅತ್ಯಂತ ಶ್ರೇಷ್ಠದಾನ. ಆರೋಗ್ಯ ವಂತ ಯುವಜನರು ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ಅಮೂಲ್ಯ ಜೀವ ಉಳಿಸುವ ಮಹಾತ್ಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದರು.
೧೧೦ ಬಾರಿ ರಕ್ತದಾನ ಮಾಡಿರುವ ಧರಣೇಂದ್ರ ದಿನಕರ್ ಮಾತನಾಡಿದರು. ಡಾ. ದಿನಕರ್ ರಕ್ತದಾನದಿಂದ ಆಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.
ಅಜಯ್‌ಕುಮಾರ್ ಸಿಂಗ್, ಪಂಜಬ್ ನ್ಯಾಷನಲ್ ಬ್ಯಾಂಕ್ ಸಿಬ್ಬಂದಿ ಹಾಗೂ ಗ್ರಾಹಕರು ಉಪಸ್ಥಿತರಿದ್ದರು.