ಜಾತಿ-ಮತ ಬಿಡಿ ಮಾನವತೆಗೆ ಜೀವ ಕೊಡಿ ಎಂದಿದ್ದರು ಸಂವಿಧಾನಶಿಲ್ಪಿ ಅಂಬೇಡ್ಕರ್…
ಶಿವಮೊಗ್ಗ : ಜತಿ, ಮತ ಬಿಡಿ ಮಾನವತೆಗೆ ಜೀವ ಕೊಡಿ ಎನ್ನುವ ಮೂಲಕ ಡಾ.ಬಿ.ಆರ್. ಅಂಬೇಡ್ಕರ್ ಅವರು ಜತಿ-ಮತ ಮೀರಲು ಅವಶ್ಯಕವಾದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಕುರಿತು ಸ್ಪಷ್ಟ ಚಿತ್ರಣ ನೀಡಿದ್ದರು ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ. ಮಹಾದೇವ ಸ್ವಾಮಿ ತಿಳಿಸಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಇಂದು ಏರ್ಪಡಿಸಲಾಗಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ರವರ ೧೩೨ ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
ಮೂಲ ನಿವಾಸಿ, ಅನ್ಯ ನಿವಾಸಿ ಗಳಿಬ್ಬರ ನಡುವಿನ ಸಾಮಾಜಿಕ ಅಂತರವೇ ಜತಿ. ಮತ ಎನ್ನು ವುದು ಮನುಷ್ಯನನ್ನು ಮನುಷ್ಯನ ನ್ನಾಗಿ ನೋಡುವುದೇ ವಿನಃ ಪ್ರಾಣಿಗಳಿಗಿಂತ ಕೀಳಾಗಿ ಕಾಣು ವುದಲ್ಲ. ಪರಸ್ಪರ ವ್ಯಕ್ತಿ ಗೌರವ ಹಾಗೂ ಆರ್ಥಿಕ, ಸಾಮಾಜಿಕ ಸಮಾನತೆ ನೀಡುವುದೇ ಉತ್ತಮ ಶಿಕ್ಷಣ.ಜತಿ, ಮತದಾಚೆ ಬದು ಕಲು ಕಲಿಸುವುದೇ ಸಂಘಟನೆ. ನೈತಿಕತೆ ಎಂಬುದು ನಾವು ರೂಢಿ ಸಿಕೊಳ್ಳುವ ವಿಧಾನ. ಆರ್ಥಿಕ, ಸಾಮಾಜಿಕ ಜನತಂತ್ರ ರೂಪು ಗೊಳ್ಳಲು ನೈತಿಕ ವಿಧಾನದಲ್ಲಿ ಸಮಾಜ ಕಟ್ಟುವ ಕೆಲಸವೇ ಹೋ ರಾಟ ಎಂದಿದ್ದರು ಅಂಬೇಡ್ಕರ್.
ಸಮಾಜದ ಹಿತದೃಷ್ಟಿಯಿಂದ ಇಂತಹ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮೂಲಕ ಹೇಗೆ ಹೆಜ್ಜೆ ಇಡಬೇಕೆಂದು ಅವರು ಸ್ಪಷ್ಟವಾಗಿ ತಿಳಿಸಿದ್ದರು. ಸಾಮಾಜಿಕ ಮತ್ತು ನೈತಿಕ ಬದ್ದತೆ ಇzಗ, ಪರಸ್ಪರ ನಂಬಿಕೆ ಬೆಳೆದಾಗ ಮಾತ್ರ ಸಮಾಜದ ಉನ್ನತಿ ಸಾಧ್ಯ ಎಂದಿ ದ್ದರು ಎಂದು ತಿಳಿಸಿದರು.
ಜಿಧಿಕಾರಿ ಡಾ.ಆರ್. ಸೆಲ್ವಮಣಿ ಮಾತನಾಡಿ, ಸ್ವಾತಂತ್ರ್ಯ ಬಂದು ೭೫ ವರ್ಷ ಕಳೆದರೂ ನಮ್ಮ ಜನತಂತ್ರ ವ್ಯವಸ್ಥೆ ಇಷ್ಟು ಗಟ್ಟಿ ಯಾಗಿರಲು ಕಾರಣ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ವರು. ಅವರು ಕೇವಲ ನಮಗೆ ಸಂವಿಧಾನ ಮಾತ್ರ ನೀಡಿಲ್ಲ ಸದೃಢ ಅರ್ಥ ವ್ಯವಸ್ಥೆ ಬಗ್ಗೆ ಮುಂದಾಲೋಚನೆ ಮಾಡಿ ಒಳನೋಟವನ್ನು ನೀಡಿ zರೆ.
ಸಂವಿಧಾನ ಜರಿಯಾದ ಮೊದಲ ದಿನವೇ ಎಲ್ಲರಿಗೂ ಸಮಾನವಾಗಿ ಮತದಾನದ ಹಕ್ಕನ್ನು ನೀಡಲಾಗಿದೆ. ಇದೊಂದು ದೊಡ್ಡ ಸಾಧನೆಯೇ ಸರಿ. ಏಕೆಂದರೆ ಎಷ್ಟೋ ಮುಂದುವರೆದ ರಾಷ್ಟ್ರ ಗಳು ಮಹಿಳೆಯರಿಗೆ ಮತದಾನದ ಹಕ್ಕನ್ನು ನೀಡಿರಲಿಲ್ಲ. ಆದರೆ ನಮ್ಮ ಸಂವಿಧಾನ ಜರಿಯಾದಗಿನಿಂದ ಎಲ್ಲರಿಗೂ ಸಮಾನವಾಗಿ ಮತದಾ ನದ ಹಕ್ಕನ್ನು ನೀಡಿದೆ. ನಾವೆಲ್ಲರೂ ಇದರ ಸದುಪಯೋಗ ಪಡೆಯ ಬೇಕು ಎಂದರು.
ಅಂಬೇಡ್ಕರ್ ಅವರು ಅರ್ಥಶಾ ಸ್ತ್ರದಲ್ಲಿ ಒಳ್ಳೆಯ ಪುಸ್ತಕ ಬರೆದಿ zರೆ. ಪ್ರಸ್ತುತ ಸನ್ನಿವೇಶದ ಬಗ್ಗೆ ಅಷ್ಟು ಹಿಂದೆಯೇ ಮುಂದಾ ಲೋಚನೆ ಮಾಡಿ ಬರೆದಿzರೆ. ಇವರು ಯುವಜನತೆಗೆ, ಸಾಧಕ ರಿಗೆ ಸ್ಪೂರ್ತಿಯಾಗಿದ್ದು, ನಾವೆ ಲ್ಲರೂ ಇವರ ಜೀವನ ಚರಿತ್ರೆ ಯನ್ನು ಓದಬೇಕು ಎಂದರು.
ಜಿ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಅಂಬೇಡ್ಕರ್ಅವರ ಬಗ್ಗೆ ಮಾತನಾಡುವುದೇ ಹೆಮ್ಮೆಯ ವಿಚಾರ. ಅವರು ಎಂದಿಗೂ ಸ್ಮರ ಣೀಯ. ಹಿಂದುಳಿದವರು, ಬಡ ವರು ಮತ್ತು ಮಹಿಳೆಯರಿಗೆ ಶಿಕ್ಷಣದ ಅಗತ್ಯತೆ ಬಗ್ಗೆ ಒತ್ತಿ ಹೇಳಿದ್ದರು.ಆಡು ಮುಟ್ಟದ ಸೊಪ್ಪಿಲ್ಲ ಎನ್ನುವ ರೀತಿ ಅವರು ತಿಳಿಯದ ಕ್ಷೇತ್ರಗಳಿಲ್ಲ ಎನ್ನಬ ಹುದು. ನೂರಾರು ಕ್ಷೇತ್ರಗಳ ಬಗ್ಗೆ ಅವರು ಅಧ್ಯಯನ ಮಾಡಿ ಬರೆದಿ zರೆ. ಅದನ್ನು ಓದಿ ಅರ್ಥ ಮಾಡಿ ಕೊಂಡರೆ ನಮ್ಮ ಜೀವನ ಸಾರ್ಥಕವಾಗುತ್ತದೆ. ಮಾದರಿ ವ್ಯಕ್ತಿತ್ವ ಅವರzಗಿದ್ದು ಅವರೊಬ್ಬ eನ ಭಂಡಾರ. ಅಂತಹ ಮಹಾನ್ ವ್ಯಕ್ತಿಯ ಮಲ್ಯಗಳನ್ನು ನಾವು ಅಳವಡಿಸಿ ಕೊಳ್ಳಬೇಕಿದೆ ಎಂದರು.
ನಮ್ಮ ಜೀವನದಲ್ಲಿ ನಾವು ಎಷ್ಟು ವ್ಯಕ್ತಿಗಳ ಜೀವನ ಕಟ್ಟಿದ್ದೇವೆ ಅನ್ನೋದು ನಮ್ಮ ಧ್ಯೇಯವಾಗ ಬೇಕು. ಹಾಗೂ ನಮ್ಮ ಸುತ್ತಮುತ್ತ ಶಿಕ್ಷಣದಿಂದ ವಂಚಿತರಾದವರನ್ನು ಗುರುತಿಸಿ ಅವರ ಮನವೊಲಿಸಿ ಶಿಕ್ಷಣದಲ್ಲಿ ತೊಡಗಿಸಬೇಕು. ಜೊತೆಗೆ ನಾವೆಲ್ಲರೂ ಸಂವಿಧಾನ ವನ್ನು ಓದಿಕೊಳ್ಳಬೇಕು. ಅದರಲ್ಲಿ ಮುಖ್ಯವಾಗಿ ಮೂಲಭೂತ ಹಕ್ಕುಗಳು, ಕರ್ತವ್ಯಗಳು ಹಾಗೂ ರಾಜ್ಯನೀತಿಯ ನಿರ್ದೇಶನ ತತ್ವಗಳನ್ನು ಪ್ರತಿಯೊಬ್ಬರೂ ಓದಿ ತಿಳಿದುಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಜಿ.ಪಂ ಸಿಇಓ ಸ್ನೇಹಲ್ ಎಸ್ ಲೋಖ ಂಡೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್, ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಜಿ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.