ದೇಶದ ಶ್ರೇಷ್ಠ ಸಂಸ್ಕೃತಿ ಪರಂಪರೆ ಪ್ರತಿನಿಧಿಸುವ ವೈವಿಧ್ಯ ವೇಷಭೂಷಣ

ಶಿವಮೊಗ್ಗ: ದೇಶದ ವಿವಿಧ ರಾಜ್ಯಗಳಲ್ಲಿ ಜನರು ತೊಡುವ ಉಡುಪುಗಳು ವೈವಿಧ್ಯಮಯ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತದೆ. ಶ್ರೇಷ್ಠ ಸಂಸ್ಕೃತಿ ಪರಂಪರೆ ಹೊಂದಿರುವ ದೇಶ ಭಾರತ ಎಂದು ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಪ್ರಾಚಾರ್ಯೆ ಪ್ರೊ. ಮಮತಾ ಪಿ.ಆರ್. ಹೇಳಿದರು.
ಶಿವಮೊಗ್ಗ ನಗರದ ಎಟಿಎನ್‌ಸಿಸಿ ಕಾಲೇಜಿನ ಚಂದನ ಸಭಾಂಗಣದಲ್ಲಿ ಆಯೋಜಿಸಿದ್ದ ನನ್ನ ಮಣ್ಣು ನನ್ನ ದೇಶ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ, ಮೇರಾ ಮಿಟ್ಟಿ ಮೇರಾ ದೇಶ್ ಅಭಿಯಾನವು ದೇಶಾದ್ಯಾಂತ ಯಶಸ್ವಿಯಾಗಿ ನಡೆಯುತ್ತಿದೆ ಎಂದು ತಿಳಿಸಿದರು.
ಭಾರತ ದೇಶವು ೭೫ನೇ ಸ್ವಾತಂತ್ರ್ಯ ವರ್ಷದ ಸಂಭ್ರಮ ಆಚರಣೆ ಪ್ರಯುಕ್ತ ಆಜದಿ ಕಾ ಅಮೃತ ಮಹೋತ್ಸವ ನಡೆಸು ತ್ತಿದ್ದು, ಇದರ ಭಾಗವಾಗಿ ನನ್ನ ಮಣ್ಣು ನನ್ನ ದೇಶ ( ಮೇರಾ ಮಿಟ್ಟಿ ಮೇರಾ ದೇಶ ) ಅಭಿಯಾನ ನಡೆಸ ಲಾಗುತ್ತಿದ್ದು, ದೇಶದ ಪ್ರತಿಯೊ ಬ್ಬರು ಅಭಿಯಾನದಲ್ಲಿ ಪಾಲ್ಗೊಳ್ಳ ಬೇಕು ಎಂದು ಹೇಳಿದರು.
ಆಗಸ್ಟ್ ತಿಂಗಳಲ್ಲಿ ದೇಶದ ವಿವಿಧ ಪ್ರದೇಶಗಳಿಂದ ಸಂಗ್ರಹಿಸ ಲಾದ ಮಣ್ಣನ್ನು ಬಳಸಿಕೊಂಡು ದೆಹಲಿಯಲ್ಲಿ ಕರ್ತವ್ಯ ಪಥದ ಉದ್ದಕ್ಕೂ ಅಮೃತ ವಾಟಿಕಾ ಎನ್ನುವ ಹೆಸರಿನಲ್ಲಿ ಉದ್ಯಾನವನ ಅಭಿವೃದ್ಧಿಪಡಿಸುವ ಗುರಿಯನ್ನು ಅಭಿಯಾನವು ಒಳಗೊಂಡಿದೆ ಎಂದು ತಿಳಿಸಿದರು.
ಪಂಚಾಯಿತಿ, ಗ್ರಾಮ, ಬ್ಲಾಕ್ , ಪಟ್ಟಣ, ನಗರ ಸ್ಥಳೀಯ ಸಂಸ್ಥೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರು ಮತ್ತು ರಕ್ಷಣಾ ಸಿಬ್ಬಂದಿ ಸೇರಿ ಅತ್ಯುನ್ನತ ತ್ಯಾಗ ಮಾಡಿದವರ ಹೆಸರನ್ನು ಹೊಂದಿರುವ ಸ್ಮಾರಕ ಫಲಕವನ್ನು ಸ್ಥಾಪಿಸುವುದು ಸಹ ಇರಲಿದೆ ಎಂದರು.
ಶಿವಮೊಗ್ಗ ಜಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್ ಕುಮಾರ್, ಎಟಿಎನ್‌ಸಿಸಿ ಕಾಲೇಜಿನ ಪ್ರೊ. ಎಸ್.ಜಗದೀಶ್, ಪ್ರೊ. ಕೆ.ಎಂ.ನಾಗರಾಜು, ಪ್ರೊ. ಮಂಜುನಾಥ್.ಎನ್. ಮತ್ತಿತರರು ಉಪಸ್ಥಿತರಿದ್ದರು.