ತಮ್ಮ ಸಾಮರ್ಥ್ಯ ತೋರುತ್ತಿರುವ ಮಹಿಳೆ: ಡಾ| ಅರುಣ್ ಪ್ರಶಂಸೆ

ಶಿವಮೊಗ್ಗ: ಮಹಿಳೆಯರು ಎಲ್ಲ ಸಾಧನೆ ಮಾಡಲು ಶಕ್ತಿ ಸಾಮಾರ್ಥ್ಯ ಹೊಂದಿದ್ದು, ಶಿಕ್ಷಣ, ಆರೋಗ್ಯ, ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿ ಮುನ್ನಡೆಯುತ್ತಿzರೆ ಎಂದು ಭಾರತೀಯ ವೈದ್ಯಕೀಯ ಸಂಸ್ಥೆ ಶಿವಮೆಗ್ಗ ಜಿ ಘಟಕದ ಅಧ್ಯಕ್ಷ ಡಾ. ಅರುಣ್ ಹೇಳಿದರು.
ಶಿವಮೊಗ್ಗದ ಕೃಷಿನಗರದಲ್ಲಿ ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಿಳೆಯರನ್ನು ಗೌರವಿಸಿದರೆ ನಮ್ಮ ಸಂಸ್ಕತಿಯನ್ನು ಗೌರವಿಸಿದಂತೆ. ಮಹಿಳೆಯರು ಸಾಧನೆಯ ಹಾದಿಯಲ್ಲಿ ಸಾಗಲು ಎಲ್ಲರ ಸಹಕಾರ, ಪ್ರೀತಿ, ಪ್ರೋತ್ಸಾಹ ಹಾಗೂ ಬೆಂಬಲ ಅವಶ್ಯಕ ಎಂದು ತಿಳಿಸಿದರು.
ಡಾ. ಕೌಸ್ತುಭ ಅರುಣ್ ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳೆ ಯರನ್ನು ಗುರುತಿಸಿ ಗೌರವಿಸಿದಾಗ ಪ್ರೋತ್ಸಾಹದ ಜತೆಯಲ್ಲಿ ಇತರರಿಗೂ ಸ್ಫೂರ್ತಿ ಸಿಗುತ್ತದೆ. ಆತ್ಮವಿಶ್ವಾಸದಿಂದ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಲು ಸಾಧ್ಯ ವಾಗುತ್ತದೆ. ಮಹಿಳೆಯರು ಕನಸುಗಳ ಸಾಕಾರಗೊಳಿಸುವಲ್ಲಿ ನಿರಂತರ ಪರಿಶ್ರಮ ವಹಿಸಬೇಕು ಎಂದು ಹೇಳಿದರು.
ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಸಂಸ್ಥೆಯು ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವಾ ಚಟುವಟಿಕೆಗಳನ್ನು ಮುನ್ನಡೆಸಿಕೊಂಡು ಬರುತ್ತಿದೆ. ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷೆ ಮಧುರಾ ಮಹೇಶ್ ಮಾತನಾಡಿ, ವೈದ್ಯರ ಸೇವೆ ಅವೀಸ್ಮರಣೀಯ. ವೈದ್ಯರು ವತ್ತಿಯ ಜತೆಯಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವೈದ್ಯ ಡಾ. ದೀಪಕ್ ಹಾಗೂ ಗಣ್ಯರನ್ನು ಸನ್ಮಾನಿಸಲಾಯಿತು.
ಇನ್ನರ್‌ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯ್‌ಕುಮಾರ್, ಸಹ ಕಾರ್ಯದರ್ಶಿ ಆಶಾ ಶ್ರೀಕಾಂತ್, ನಿರ್ಮಲಾ ಮಹೇಂದ್ರ, ವೀಣಾ ಸುರೇಶ್, ರಾಜೇಶ್ವರಿ ಪ್ರತಾಪ್, ವೀಣಾ ಹರ್ಷ, ವಾಣಿ ಪ್ರವೀಣ್, ಜಯಂತಿ ವಾಲಿ, ವಿಜಯ ರಾಯ್ಕರ್, ನಮಿತಾ ಸೂರ್ಯನಾರಾಯಣ, ವಿಜಯ ಶಶಿಧರ್, ಸುಮಾ ರವಿ, ಜ್ಯೋತಿ ಸುಬ್ಬೇಗೌಡ, ವೇದಾ ನಾಗರಾಜ, ಶಿಲ್ಪಾ ಗೋಪಿನಾತ್, ಲತಾ ಶಂಕರ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.