ಬಿಜೆಪಿ ರಾಜ್ಯಾಧ್ಯಕ್ಷರ ಸ್ವಾಗತಕ್ಕೆ ಹೆಲ್ಮೆಟ್ ಧರಿಸದೇ ಬೈಕ್ ಏರಿದ ಕಾರ್ಯಕರ್ತರು- ಅಭಿಮಾನಿಗಳು…
ಹೆಲ್ಮೆಟ್ ಹಾಕದೇ ಬೈಕ್ ರ್‍ಯಾಲಿ: ನಗರದ ಬೆಕ್ಕಿನ ಕಲ್ಮಠದಿಂದ ಪೆಸಿಟ್ ಕಾಲೇಜ್‌ವರೆಗೆ ನಡೆದ ಬೈಕ್ ರ್‍ಯಾಲಿಯಲ್ಲಿ ಭಾಗವಹಿಸಿದ್ದ ಬಹುತೇಕರು ಹೆಲ್ಮೆಟ್ ಧರಿಸಿರಲಿಲ್ಲ. ಕೆಲವೇ ಕೆಲವರು ಹೆಲ್ಮೆಟ್ ಧರಿಸಿ ಸಂಚಾರಿ ನಿಯಮ ಪಾಲಿಸಿದ್ದರು. ಉಳಿದಂತೆ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದ ಹೆಚ್ಚಿನವರು ಹೆಲ್ಮೆಟ್ ಇಲ್ಲದೇ ಬೈಕ್ ಓಡಿಸಿದರು. ಇದನ್ನು ಕಂಡು ಕಾಣದಂತೆ ಪೊಲೀಸರಿದ್ದರು.
ಶಿವಮೊಗ್ಗ: ಬಿಜೆಪಿ ರಾಜಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ನಗರಕ್ಕ್ಕೆ ಆಗಮಿಸಿದ್ದ ಬಿಎಸ್‌ವೈ ಪುತ್ರ ಬಿ.ವೈ. ವಿಜಯೇಂದ್ರರನ್ನು ಪಕ್ಷದ ವತಿಯಿಂದ ಸಂಭ್ರಮ, ಸಡಗರದಿಂದ ಸ್ವಾಗತಿಸಲಾಯಿತು.
ವಿಜಯೇಂದ್ರ ಅವರು ಇಂದು ಬೆಳಗ್ಗೆ ೯ ಗಂಟೆಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಅಭಿನಂದನೆ ಸ್ವೀಕರಿಸಿ, ನಂತರ ಗುಂಡಪ್ಪಶೆಡ್ ನಲ್ಲಿರುವ ಕೆ.ಎಸ್. ಈಶ್ವರಪ್ಪ ನಿವಾಸ, ಮತ್ತೂರು ಗ್ರಾಮದಲ್ಲಿ ಆರ್‌ಎಸ್‌ಎಸ್ ದಕ್ಷಿಣಾ ಪ್ರಾಂತ ಕಾರ್ಯವಾಹ ಪಟ್ಟಾಭಿರಾಮ ಅವರ ನಿವಾಸಕ್ಕೆ ಹಾಗೂ ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಂ.ಬಿ. ಭಾನು ಪ್ರಕಾಶ್ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು.
ಬೈಕ್ ರ್‍ಯಾಲಿ: ಬೆಕ್ಕಿನ ಕಲ್ಮಠದಲ್ಲಿ ಶ್ರೀಗಳ ಆಶೀರ್ವಾದ ಪಡೆದ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ತೆರೆದ ವಾಹನದಲ್ಲಿ ಬೈಕ್, ಕಾರ್ ರ್‍ಯಾಲಿಯೊಂದಿಗೆ ಪೆಸಿಟ್ ಕಾಲೇ ಜಿಗೆ ಕರೆತರಲಾಯಿತು. ಬೆಕ್ಕಿನ ಕಲ್ಮಠದಲ್ಲಿ ಜೆಸಿಬಿ ಮೂಲಕ ಬೃಹತ್ ಸೇಬಿನ ಹಾರ ಹಾಕಲಾ ಯಿತು. ಪೆಸಿಟ್ ಕಾಲೇಜಿನ ಸಭಾಂ ಗಣಕ್ಕೆ ಬರುತ್ತಿದ್ದಂತೆ ಮಂಗಳ ವಾದ್ಯ ಮೊಳಗಿಸಲಾ ಯಿತು. ತೆರೆದ ವಾಹನದಲ್ಲಿ ವಿಜಯೇಂದ್ರ ಅವರೊಂದಿಗೆ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿದಂತೆ ಇನ್ನಿತರರಿದ್ದರು.
ಈ ಸಂದರ್ಭಗಳಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮೇಘರಾಜ್ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.