ಆ.9 ರಿಂದ 13: ಅಧಿಕ ಶ್ರಾವಣ ಮಹಾಪೂಜೆ: ಸಾಧಕರಿಗೆ ಸನ್ಮಾನ

ದಾವಣಗೆರೆ : ನಗರದ ಶ್ರೀಮದ್ ಅಭಿನವ ರೇಣುಕ ಮಂದಿರದ ಆವರಣದಲ್ಲಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳವರ ಅಧಿಕ ಶ್ರಾವಣ ಮಾಸದ ಇಷ್ಟಲಿಂಗ ಮಹಾಪೂಜ ಹಾಗೂ ಜನಜಗೃತಿ ಧರ್ಮ ಸಮಾರಂಭ ಆ.೯ರಿಂದ ೧೩ರ ವರೆಗೆ ಶ್ರೀಮದ್ವೀರಶೈವ ಸದ್ಬೋಧನಾ ಸಂಸ್ಥೆ ದಾವಣಗೆರೆ ಜಿ ಘಟಕದ ಆಶ್ರಯದಲ್ಲಿ ಜರುಗಲಿದೆ.
ಪ್ರತಿ ದಿನ ಸಂಜೆ ೬.೩೦ಕ್ಕೆ ಜನ ಜಗೃತಿ ಧರ್ಮ ಸಮಾವೇಶ ಶ್ರೀ ರಂಭಾಪುರಿ ಜಗದ್ಗುರುಗಳವರ ಸಾನ್ನಿಧ್ಯದಲ್ಲಿ ಜರುಗಲಿದ್ದು, ಆ. ೯ರಂದು ಅ.ಭಾ. ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ| ಶಾಮನೂರು ಶಿವಶಂಕರಪ್ಪನವರು ಉದ್ಘಾಟಿಸುವರು.
ಅ.ಭಾ. ವೀರಶೈವ ಶಿವಾಚಾರ್ಯ ಸಂಸ್ಥೆಯ ಗೌರವಾಧ್ಯಕ್ಷ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಲಿದ್ದು, ಕೊಟ್ಟೂರು ಹಿರೇಮಠದ ಯೋಗಿರಾಜೇಂದ್ರ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತ ನೀಡುವರು. ಮುಖ್ಯ ಅತಿಥಿಗಳಾಗಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬರ್ ಸೇರಿದಂತೆ ವಿವಿಧ ಗಣ್ಯರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದು, ದಾವಣಗೆರೆ ರಾಧ ಕೃಷ್ಣ ಗುಪ್ತ ಜ್ಯುವಲರ್‍ಸನ ರಾಜನಹಳ್ಳಿ ರಮೇಶ ಬಾಬು ಅವರಿಗೆ ಸಮಾಜ ಸೇವಾ ವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಆ.೧೦ರಂದು ಅ.ಭಾ. ವೀರಶೈವ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷ ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಲಿದ್ದು ಹಂಪಸಾಗರ ನವಲಿ ಹಿರೇಮಠದ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತ ನೀಡುವರು.
ಹರಪನಹಳ್ಳಿ ತೆಗ್ಗಿನಮಠದ ವರಸದ್ಯೋಜತ ಶಿವಾಚಾರ್ಯ ಸ್ವಾಮಿಗಳು ನುಡಿಪುಷ್ಪ ಸಲ್ಲಿಸು ವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಸ್.ಎ. ರವೀಂದ್ರನಾಥ ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳಿದ್ದಾರೆ.
ಶ್ರೀ ಜಗದ್ಗುರು ರಂಭಾಪುರಿ ಪೀಠದ ದಾಖಲೆ ಸಂಪುಟ-೩ನ್ನು ಸಂಸದ ಜಿ.ಎಂ.ಸಿದ್ದೇಶ್ವರ ಬಿಡುಗಡೆಗೊಳಿಸುವರು. ಡಿ.ಹೆಚ್.ಯು.ಸಿ.ಬಿ. ಬ್ಯಾಂಕ ಅಧ್ಯಕ್ಷ ಎನ್.ಎ.ಮುರುಗೇಶ ಆರಾಧ್ಯ ಇವರಿಗೆ ಸಹಕಾರಿ ಸೇವಾ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಆ.೧೧ರಂದು ನೇತೃತ್ವವನ್ನು ಮರಿಯಮ್ಮನಹಳ್ಳಿ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ವಹಿಸಲಿದ್ದು, ಅಮ್ಮಿನಭಾವಿಯ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತ ನೀಡುವರು. ಬಾಪೂಜಿ ವಿದ್ಯಾಸಂಸ್ಥೆಯ ನಿರ್ದೇಶಕರಾದ ಡಾ| ಪ್ರಭಾ ಮಲ್ಲಿಕಾರ್ಜುನ ಇವರಿಗೆ ಜನಸೇವಾ ಶಿರೋಮಣಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುಖ್ಯ ಅತಿಥಿಗಳಾಗಿ ಮಹಾನಗರಪಾಲಿಕೆ ಆಯುಕ್ತೆ ರೇಣುಕಾ ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಆ.೧೨ರಂದು ಸೂಡಿ ಜುಕ್ತಿ ಹಿರೇಮಠದ ಡಾ.ಕೊಟ್ಟೂರು ಬಸವೇಶ್ವರ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಲಿದ್ದು ಮಳಲಿ ಸಂಸ್ಥಾನಮಠದ ಡಾ. ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತ ನೀಡುವರು.
ಡಾ| ಮಲ್ಲಿಕಾರ್ಜುನ ವಿ.ಜೆ. ಇವರಿಗೆ ವೈದ್ಯ ರತ್ನಾಕರ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುಖ್ಯ ಅತಿಥಿಗಳಾಗಿ ಜಿಧಿಕಾರಿ ಡಾ| ವೆಂಕಟೇಶ, ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್, ಮೇಯರ್ ಬಿ.ಹೆಚ್.ವಿನಾಯಕ, ಜಿ ರಕ್ಷಣಾಧಿಕಾರಿ ಡಾ| ಅರುಣ ಕುಮಾರ ಇನಿತರರು ಪಾಲ್ಗೊಳ್ಳಲಿದ್ದಾರೆ.
ಆ.೧೩ರ ಭಾನುವಾರ ಜರುಗುವ ಸಮಾರೋಪದಲ್ಲಿ ಬಂಕಾಪುರ ಅರಳೆಲೆ ಹಿರೇಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಲಿದ್ದು ಕಣ್ವಕುಪ್ಪಿ ಗವಿಮಠದ ಡಾ.ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತ ನೀಡುವರು.
ಶ್ರೀಶೈಲ ಎಜ್ಯುಕೇಶನ್ ಟ್ರಸ್ಟ್ ನಿರ್ದೇಶಕ ಜಿ.ಎಸ್. ಅನಿತ್ ಕುಮಾರ್ ಇವರಿಗೆ ಶಿಕ್ಷಣ ಸೇವಾ ಧುರೀಣ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರತಿ ದಿನದ ಸಮಾರಂಭದಲ್ಲಿ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆ ನೀಡಿ ಅಶೀರ್ವದಿಸುವರು.
ಇಷ್ಟಲಿಂಗ ಮಹಾಪೂಜ: ಆ.೯ರಿಂದ ೧೩ರವರೆಗೆ ಬೆಳಿಗ್ಗೆ ಶ್ರೀ ಜಗದ್ಗುರು ವೀರಗಂಗಾಧರ ಮಂಗಲ ಭವನದಲ್ಲಿ ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜೆ ಜರುಗಲಿದೆ.
ಈ ಎಲ್ಲ ಕಾರ್ಯಕ್ರಮಗಳಲ್ಲಿ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀಮದ್ವೀರಶೈವ ಸದ್ಬೋಧನಾ ಸಂಸ್ಥೆ ದಾವಣಗೆರೆ ಜಿ ಘಟಕದ ಅಧ್ಯಕ್ಷ ದೇವರಮನೆ ಶಿವಕುಮಾರ್ ಹಾಗೂ ಶ್ರೀ ಜಗದ್ಗುರು ರೇಣುಕ ಸಾಂಸ್ಕೃತಿಕ ಸಂಘದ ಅಧ್ಯಕ್ಷ ದೇವರಮನೆ ಶಿವರಾಜ್ ವಿನಂತಿಸಿzರೆ.