ಅನರ್ಹತೆ ವಿರುದ್ದ ಸಿಡಿದೆದ್ದ ಕಾಂಗ್ರೆಸ್ ಹಿಂದುಳಿದ ವರ್ಗದ ನಾಯಕರು…
ಶಿವಮೊಗ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸದ ಸ್ಥಾನ ಅನರ್ಹಗೊಳಿಸಿ ರುವುದನ್ನು ವಿರೋಧಿಸಿ ಇಂದು ಜಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ನೇತೃತ್ವದಲ್ಲಿ ಮಹಾತ್ಮ ಗಾಂಧಿ ಪಾರ್ಕ್ನಲ್ಲಿ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ವಜ ಮಾಡಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಕಸಿದುಕೊಂಡಂತಾಗಿದೆ.
ಇದು ಪ್ರಜಪ್ರಭುತ್ವದ ಕಗ್ಗೊ ಲೆಯಾಗಿದೆ. ಸಂಸತ್ ಪಾವಿತ್ರ್ಯತೆ ಯನ್ನೇ ಬಿಜೆಪಿ ಹಾಳು ಮಾಡಿದೆ ಎಂದು ಪ್ರತಿಭಟ ನಾಕಾರರು ದೂರಿದರು.ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿರು ವುದು ಅತ್ಯಂತ ಕರಾಳ ದಿನಗಳಲ್ಲಿ ಒಂದಾಗಿದೆ. ಕಾಂಗ್ರೆಸ್ ಇದನ್ನು ಒಕ್ಕೊರಲಿನಿಂದ ಖಂಡಿಸುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳು ವುದು ತರವಲ್ಲ. ಇದು ಪ್ರಧಾನಿ ಮೋದಿಯವರ ಸರ್ವಾಧಿಕಾರದ ಪ್ರತೀಕವಾಗಿದೆ. ಮತ್ತು ಚುನಾ ವಣೆಯ ಲಾಭ ಪಡೆದುಕೊಳ್ಳುವ ಉದ್ದೇಶವನ್ನು ಪಡೆದುಕೊಳ್ಳುತ್ತಿದೆ. ಬಿಜೆಪಿಯನ್ನು ದೇಶದಿಂದ ದೂರ ಮಾಡುವುದೇ ಕಾಂಗ್ರೆಸ್ ಗುರಿ ಯಾಗಿದೆ ಎಂದು ಪ್ರತಿಭಟನಕಾ ರರು ತಿಳಿಸಿದರು.
ಪ್ರತಿಭಟನೆಯಲ್ಲಿ ಹಿಂದುಳಿದ ವರ್ಗಗಳ ವಿಭಾಗದ ಜಿಧ್ಯಕ್ಷ ಇಕ್ಕೇರಿ ರಮೇಶ್, ಪ್ರಮುಖರಾದ ಹೆಚ್.ಪಿ. ಗಿರೀಶ್, ಎಸ್.ಪಿ,. ಶೇಷಾದ್ರಿ, ರಮೇಶ್ ಶಂಕರಘಟ್ಟ, ಜಿ.ಡಿ. ಮಂಜುನಾಥ್, ಕಲೀಂ ಪಾಶಾ, ಟಿ. ಕೃಷ್ಣಪ್ಪ, ಹೆಚ್.ಆರ್. ಮಹೇಂದ್ರ, ರಾಘವೇಂದ್ರ, ಸೌಗಂಧಿಕ, ಎನ್.ಡಿ. ಪ್ರವೀಣ್ ಕುಮಾರ್, ಸ್ಟೆ ಮಾರ್ಟಿನ್, ನಾಜೀಮಾ, ಪ್ರೇಮಾ, ತಬಸ್ಸುಮ್, ನವೀನ್, ಸಯ್ಯದ್, ಜಮೀರ್, ಅರ್ಚನಾ ಇದ್ದರು.