ಭರ್ಜರಿ ಭೇಟೆ: ೩೬.೫೦ ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ…

06-Sp-press-meet-dar-hall-(

ಶಿವಮೊಗ್ಗ : ಭದ್ರಾವತಿ ನ್ಯೂಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ಇತ್ತೀಚೆಗೆ ನ.೧ರಂದು ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸುಮಾರು ೨೦ ಲಕ್ಷ ರೂ. ಮಲ್ಯದ ೨೭೬.೭೫ ಗ್ರಾಂ ತೂಕದ ಚಿನ್ನಾಭರಣಗಳಿದ್ದ ಚೀಲ ಕಳ್ಳತನ ವಾಗಿದ್ದು, ಆರೋಪಿತಳನ್ನು ಬಂಧಿಸಿ ಆಭರಣಗಳನ್ನು ವಶಪಡಿಸಿ ಕೊಳ್ಳಲಾಗಿದೆ ಎಂದು ಜಿ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಹೇಳಿzರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ಕಾಶಿಪುರ ನಿವಾಸಿ ಯಾದ ಪ್ರಭಾವತಿ(೪೩) ತಮ್ಮ ಮನೆಗೆ ಬಂಗಾರದ ಆಭರಣಗಳಿದ್ದ ಕಿಟ್‌ಬ್ಯಾಗ್ ಹಾಗೂ ಇತರ ವಸ್ತುಗಳಿದ್ದ ಬ್ಯಾಗ್‌ಗಳನ್ನು ತೆಗೆದು ಕೊಂಡು ಭದ್ರಾವತಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ದಿಂದ ಬಸ್‌ನಲ್ಲಿ ಶಿವಮೊಗ್ಗಕ್ಕೆ ಬಂದಿದ್ದರು.
ಶಿವಮೊಗ್ಗದಲ್ಲಿ ಬಸ್ ಇಳಿಯುವಾಗ ಬಂಗಾರದ ಆಭರಣಗಳಿದ್ದ ಕಿಟ್ ಬ್ಯಾಗ್ ನಾಪತ್ತೆಯಾಗಿತ್ತು. ಸದರಿ ಬ್ಯಾಗ್ ನಲ್ಲಿ ೨೦ ಲಕ್ಷ ರೂ. ಮಲ್ಯದ ಆಭರಣ ಹಾಗೂ ಎರಡು ರೇಷ್ಮೆ ಸೀರೆಗಳು ಕಳುವಾಗಿದ್ದು ಈ ಬಗ್ಗೆ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಭದ್ರಾವತಿ ಪೊಲೀಸ್ ವೃತ್ತ ನಿರೀಕ್ಷಕ ಶೈಲ ಕುಮಾರ್, ಪಿಎಸ್‌ಐ ಟಿ. ರಮೇಶ್, ಎಎಸ್‌ಐ ಮಂಜಪ್ಪ, ಸಿಬ್ಬಂದಿಗಳಾದ ನವೀನ್, ಹಾಲಪ್ಪ, ಮಧುಪ್ರಸಾದ್, ಮನೇಶ್, ಪ್ರಸನ್ನ, ದಿವ್ಯಶ್ರೀ ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ನ.೩ರಂದು ಈ ತಂಡ ಪ್ರಕರಣದ ಆರೋಪಿತಳಾದ ಸೀಗೆಬಾಗಿ ನಿವಾಸಿ ಅಟೆಂಡರ್ ಕೆಲಸ ಮಾಡುವ ಕಮಲಮ್ಮ(೪೮) ರನ್ನು ದಸ್ತಗಿರಿ ಮಾಡಿ ಕಳವು ಮಾಡಿದ್ದ ಆಭರಣ ಮತ್ತು ರೇಷ್ಮೆ ಸೀರೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ತನಿಖಾ ತಂಡಕ್ಕೆ ಜಿ ಪೊಲೀಸ್ ಇಲಾಖೆಯಿಂದ ಅಭಿನಂದಿಸಲಾಗಿದೆ ಎಂದರು.
ಮತ್ತೊಂದು ಪ್ರಕರಣದಲ್ಲಿ ಭದ್ರಾವತಿ ಹೊಸ ಮನೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಮನೆಗಳತನ ಪ್ರಕರಣದ ಆರೋಪಿಯನ್ನು ಬಂಧಿಸಿ, ಸುಮಾರು ೧೬.೫೦ ಲಕ್ಷ ರೂ. ಮಲ್ಯದ ೨೫೯ ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿzರೆ.


ಭದ್ರಾವತಿಯ ಹೊಸಮನೆ ನಿವಾಸಿ, ಜಿ.ಆರ್. ವಿನೋದ್ ಅವರು ಆ.೧೫ರಂದು ಊರಿಗೆ ಹೋಗಿದ್ದು, ಆ.೨೧ರಂದು ಮನೆಗೆ ಮರಳಿ ಬಂದು ನೋಡಿದಾಗ ಬೀರುವಿನಲ್ಲಿಟ್ಟಿದ್ದ ೨೦ ಲಕ್ಷ ರೂ. ಮಲ್ಯದ ೪೦೦ ಗ್ರಾಂ ಚಿನ್ನಾ ಭರಣಗಳು ಕಳುವಾಗಿರುವುದು ಗೊತ್ತಾಗಿತ್ತು. ಅವರು ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿಗಳ ಪತ್ತೆಗಾಗಿ ಭದ್ರಾವತಿ ಡಿವೈಎಸ್ಪಿ ನಾಗರಾಜ್, ಸಿಪಿಐ ಶ್ರೀಶೈಲ ಕುಮಾರ, ಪಿಎಸೈ ಕೃಷ್ಣಕುಮಾರ್ ಬಿ ಮಾನೆ, ಮತ್ತು ಸಿಬ್ಬಂದಿಗಳಾದ ಮಧುಕುಮಾರ್, ಆದರ್ಶ ಶೆಟ್ಟಿ, ತೇಜಕುಮಾರ್, ಅವರನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗಿದ್ದು, ಈ ತನಿಖಾ ತಂಡ, ನ.೩ರಂದು ಈ ಪ್ರಕರಣದ ಆರೋಪಿ ಐಟಿ ಉದ್ಯೋಗಿ ಎಸ್.ಎಸ್. ನಿತಿನ್( ೨೭) ಎಂಬಾತನನ್ನು ಬಂಧಿಸಿ, ಆರೋಪಿ ತನಿಂದ ೧೬ ಲಕ್ಷ ರೂ. ಮಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ. ಬಂಧಿತ ಆರೋಪಿ ಚಿನ್ನಾಭರಣಗಳನ್ನು ಕರಗಿಸಿ, ಚಿನ್ನದ ಗಟ್ಟಿಗಳನ್ನಾಗಿ ಮಾಡಿಕೊಂಡಿದ್ದ ಒಟ್ಟು, ೨೫೯ ಗ್ರಾಂ ತೂಕದ ೬ ಬಂಗಾರದ ಗಟ್ಟಿಗಳು ಮತ್ತು ಬಂಗಾರದ ಕೈ ಕಡಗವನ್ನು ವಶಕ್ಕೆ ಪಡೆಯಲಾಗಿದೆ.
ಈ ಸಂಬಂಧ ಸದರಿ ತನಿಖಾ ತಂಡಕ್ಕೆ ಜಿ ಪೊಲೀಸ್ ವತಿಯಿಂದ ಪ್ರಶಂಶಿಸಿ ಅಭಿನಂದಿಸಲಾಗಿದೆ ಎಂದು ಜಿ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ತಿಳಿಸಿದರು.
ಅಲ್ಲದೆ ಬ್ಯಾಂಕ್, ಎಟಿಎಂಗಳ ಭದ್ರತೆಗೆ ಸಂಬಂಧಿಸಿದಂತೆ, ಬ್ಯಾಂಕ್ ಅಧಿಕಾರಿಗಳ ವಿಶೇಷ ಸಭೆ ಕರೆಯಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ, ಹೆಚ್ಚುವರಿ ಪೋಲಿಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ, ಎ.ಜಿ. ಕಾರ್ಯಪ್ಪ ಸೇರಿದಂತೆ ಇನ್ನಿತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.