ಇಂಧನ ಬೆಲೆ ಏರಿಕೆ ವಿರುದ್ಧ ಬೀದಿಗಿಳಿದ ಬಿಜೆಪಿ…

bjp-4

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿಯಿಂದಾಗಿ ರಾಜ್ಯದ ಜನ ತತ್ತರಿಸಿ ಹೋಗಿzರೆ. ಒಂದು ಕೈಯಲ್ಲಿ ಗ್ಯಾರಂಟಿ ನೀಡಿ ಇನ್ನೊಂದು ಕೈಯಲ್ಲಿ ಬೆಲೆ ಏರಿಕೆಯ ಬಿಸಿ ಮುಟ್ಟಿಸಿರುವ ಸರ್ಕಾರ ಕೂಡಲೇ ತೊಲಗಬೇಕು ಎಂದು ಬಿಜೆಪಿ ನಾಯಕ ಎಂ.ಬಿ. ಭಾನುಪ್ರಕಾಶ್ ಹೇಳಿದರು.
ಪೆಟ್ರೋಲ್ ಹಾಗೂ ಡಿಸೆಲ್ ಮೇಲೆ ರಾಜ್ಯ ಸರ್ಕಾರ ತೆರಿಗೆ ಹೆಚ್ಚಳ ಮಾಡಿರುವುದರಿಂದ ಜನಸಾಮಾನ್ಯರಿಗೆ ಎ ವಸ್ತುಗಳ ಮೇಲೆ ಬೆಲೆ ಏರಿಕೆಯ ಪರಿಣಾಮ ವಾಗಲಿದ್ದು, ಇದರ ವಿರುದ್ಧ ಇಂದು ಬಿಜೆಪಿಯ ವಿವಿಧ ಮೋರ್ಚಾಗಳು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು.


ಈ ಸಂದರ್ಭದಲ್ಲಿ ಸೀನಪ್ಪ ಶೆಟ್ಟಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಪ್ರತಿಭಟನೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗ್ಯಾರಂಟಿ ಬಡವರಿಗಾಗಿ ನೀಡಿzರೆ ಎಂಬ ಸಂತೋಷ ಬಿಜೆಪಿಗೆ ಆಗಿತ್ತು. ನಾವು ಯಾವಾಗಲು ಬಡವರ ಪರ ಆದರೆ ಕಾಂಗ್ರೆಸ್ ಸ್ವಾತಂತ್ರ ಬಂದಾಗಿ ನಿಂದ ಗರೀಬಿ ಹಠಾವೋ ಎಂದು ಜಪಿಸುತ್ತ ಇನ್ನೂ ಬಡತನ ನಿರ್ಮೂಲನೆ ಅವರ ಕೈಯಲ್ಲಿ ಮಾಡಲಾಗಲಿಲ್ಲ. ಆದರೆ, ಮೋದಿ ಸರ್ಕಾರ ಯಾವುದೇ ಘೋಷಣೆ ಮಾಡದೆ ಬಡವರಿಗಾಗಿ ಅನೇಕ ಕಾರ್ಯಕ್ರಮಗಳನ್ನು ಜರಿಗೆ ತಂದು ದೇಶಕ್ಕೆ ಭದ್ರಾ ಬುನಾದಿ ಹಾಕಿ ವಿಶ್ವದ ೫ನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆದಿದೆ. ಆದರೆ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸುಳ್ಳಿನ ಸರಮಾಲೆ ಸೃಷ್ಠಿಸಿ ಒಂದು ಕಡೆಯಿಂದ ಗ್ಯಾರಂಟಿಯ ಹೆಸರಿನಲ್ಲಿ ಬಡಜನರಿಗೆ ಸಲ್ಲಬೇಕಾದ ನ್ಯಾಯಯುತ ಸೌಲತ್ತುಗಳನ್ನು ಕಸಿದಿದೆ. ಒಂದು ಇಲಾಖೆಯ ೧೪೫೯ ಕೋಟಿ ಹಣ ಕಾಣೆಯಾಗಿದ್ದು, ಸದನದಲ್ಲಿ ಡಿ.ಎಸ್. ಅರುಣ್ ಪ್ರಸ್ತಾಪಿಸಿದ ನಂತರ ಈಗ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿ ಗಳು ತನಿಖೆಗೆ ಹೊರಟಿzರೆ. ಅದು ಇತ್ತೀಚೆಗೆ ವಾಲ್ಮೀಕಿ ನಿಗಮದ ಅಧಿಕಾರಿಯ ಶವಯಾತ್ರೆಯಂತೆ ಆಗಲಿದೆ. ಇದಕ್ಕೆ ಪೂರಕವಾಗಿ ಬಿಜೆಪಿ ಇಂದು ದ್ವಿಚಕ್ರವಾಹನವನ್ನು ಶವದ ರೀತಿಯಲ್ಲಿ ಶಿವಪ್ಪ ನಾಯಕ ವತ್ತದಿಂದ ಮೆರವಣಿಗೆ ಮೂಲಕ ಜಗೃತಿ ಯಾತ್ರೆ ಮಾಡಿzರೆ. ಇದೊಂದು ಸರ್ಕಾರಕ್ಕೆ ಎಚ್ಚರಿಕೆ ಯಾಗಿದ್ದು, ಕೂಡಲೇ ಅಗತ್ಯ ವಸ್ತುಗಳು ಮತ್ತು ತೈಲಬೆಲೆ ಏರಿಕೆಯನ್ನು ರಾಜ್ಯ ಸರ್ಕಾರ ಇಳಿಸಬೇಕು ಎಂದರು.
ಶಾಸಕ ಹೆಚ್.ಎನ್. ಚನ್ನಬಸಪ್ಪ ಮಾತನಾಡಿ, ಸರ್ಕಾರಿ ಖಜನೆ ಖಾಲಿಯಾಗಿದೆ. ಟ್ರಾಫಿಕ್ ಪೊಲೀಸರನ್ನು ವಸೂಲಿ ಮಾಡಲು ಸರ್ಕಾರ ಬೀದಿಗಿಳಿಸಿದೆ. ಎ ಕಡೆಯಿಂದಲೂ ದುಡ್ಡು ಹೊಡೆಯಲು ಸರ್ಕಾರ ಆದೇಶ ನೀಡಿದೆ. ಬಡವರು ಸಂತೆಗೆ ಹೋಗಲು ಆಗುತ್ತಿಲ್ಲ. ರೈತರಿಗೆ ಹಾಲಿನ ಸಬ್ಸಿಡಿ ಇನ್ನೂ ನೀಡಿಲ್ಲ. ಎ ವಸ್ತುಗಳ ಬೆಲೆಯನ್ನು ಈ ಸರ್ಕಾರ ಏರಿಸಿದೆ. ಪಹಣಿಯಿಂದ ಹಿಡಿದು ಸರ್ಕಾರದ ಎ ಸೇವೆ ಗಳಿಗೂ ೧೦ ಪಟ್ಟು ದರ ಏರಿಸಿದ್ದು, ಭ್ರಷ್ಟಾತಿಭ್ರಷ್ಟ ಸರ್ಕಾರ ಇದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಬೆಲೆ ಏರಿಕೆ ಖಂಡಿಸಿ ಶಿವಪ್ಪ ನಾಯಕ ವೃತ್ತದಿಂದ ಕುದುರೆಯ ಮೇಲೆ ಬಂದು ವಿಭಿನ್ನರೀತಿ ಪ್ರತಿಭಟನೆ ವ್ಯಕ್ತಪಡಿಸಿದರು. ಯುವ ಮೋರ್ಚಾದವರು ಜೈಲು ವೃತ್ತದಿಂದ ಗೋಪಿ ಸರ್ಕಲ್‌ವರೆಗೆ ಕಾರನ್ನು ಎಳೆಯುವುದರ ಮೂಲಕ ಪ್ರತಿಭಟನೆ ವ್ಯಕ್ತಪಡಿಸಿದರೆ, ರೈತ ಮೋರ್ಚಾದವರು ಮಹಾವೀರ ವತ್ತದಿಂದ ಎತ್ತಿನಗಾಡಿಯ ಮೂಲಕ ಪ್ರತಿಭಟಿಸಿದರು. ಶಿವಪ್ಪನಾಯಕ ವೃತ್ತದಿಂದ ದ್ವಿಚಕ್ರ ವಾಹನದ ಅಣಕುಶವಯಾತ್ರೆ ನಡೆಯಿತು. ಎಸ್ಸಿ ಮೋರ್ಚಾ ದವರು ಬೈಕ್‌ನ್ನು ದಾರದ ಮೂಲಕ ಎಳೆದು ತಂದು ಪೆಟ್ರೋಲ್ ಬೆಲೆ ಏರಿಕೆಯನ್ನು ಖಂಡಿಸಿದರೆ, ಮಹಿಳಾ ಮೋರ್ಚಾದವರು ತರಕಾರಿ ಮತ್ತು ಇನ್ನಿತರ ಅಗತ್ಯ ವಸ್ತುಗಳನ್ನು ಪ್ರದರ್ಶಿಸಿ ಸಂತೆಯನ್ನು ನಿರ್ಮಿಸಿ ಸರ್ಕಾರಕ್ಕೆ ಅಣಕಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್, ಪ್ರಮುಖರಾದ ಎಸ್.ರುದ್ರೇಗೌಡ, ಭಾರತಿಶೆಟ್ಟಿ, ಎಂ.ಬಿ. ಹರಿಕಷ್ಣ, ಶಿವರಾಜ್, ಎಸ್.ದತ್ತಾತ್ರಿ. ಪ್ರಶಾಂತ್ ಕುಕ್ಕೆ, ಜಿ ಮಹಿಳಾ ಮೋರ್ಚಾ ಅಧ್ಯಕ್ಷೆ ಗಾಯತ್ರಿ ಮಲ್ಲಪ್ಪ, ರೈತಮೋರ್ಚಾ ಅಧ್ಯಕ್ಷ ಸಿದ್ದಲಿಂಗಪ್ಪ, ನಗರಾಧ್ಯಕ್ಷ ಮೋಹನ ರೆಡ್ಡಿ, ಸಂತೋಷ್ ಬಳ್ಳಕೆರೆ, ವಿನ್ಸಂಟ್ ರೋಡ್ರಿಗಸ್, ಮಾಲಂತೇಶ್, ಜಗದೀಶ್ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.