ಕಿಮ್ಮನೆ ಜಯರಾಮ್‌ಗೆ ವಾಣಿಜ್ಯ ರತ್ನ ಪ್ರಶಸ್ತಿ

ಶಿವಮೊಗ್ಗ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹುಬ್ಬಳ್ಳಿ ವತಿಯಿಂದ ಆಯೋಜಿಸಿದ್ದ ೯೫ನೇ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಉದ್ಯಮಿ ಕಿಮ್ಮನೆ ಜಯರಾಮ್ ಅವರಿಗೆ ವಾಣಿಜ್ಯ ರತ್ನ ಪ್ರಶಸ್ತಿ ಪ್ರಧಾನ ಮಾಡಿ ಅಭಿನಂದಿಸಲಾಯಿತು.
ವಾಣಿಜ್ಯ ರತ್ನ ಪ್ರಶಸ್ತಿಯು ಹುಬ್ಬಳ್ಳಿ ವಾಣಿಜ್ಯೋದ್ಯಮ ಸಂಸ್ಥೆಯು ನೀಡುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ ಆಗಿದ್ದು, ಶಿವಮೊಗ್ಗದ ಉದ್ಯಮಿ ಕಿಮ್ಮನೆ ಜಯರಾಮ್ ಅವರಿಗೆ ಹುಬ್ಬಳ್ಳಿ ಯಲ್ಲಿ ಆಯೋಜಿಸಿದ್ದ ಕಾರ್ಯ ಕ್ರಮದಲ್ಲಿ ಪ್ರಶಸ್ತಿ ನೀಡಲಾಯಿತು.
ಉದ್ಯಮಿ ಕಿಮ್ಮನೆ ಜಯರಾಮ್ ಅವರು ವೃತ್ತಿಯಿಂದ ಕೃಷಿಕರಾಗಿದ್ದು, ಆರಂಭದಲ್ಲಿ ಅಡಕೆ ವ್ಯಾಪಾರ ನಡೆಸುತ್ತಿದ್ದ ಇವರು ಪ್ರಸ್ತುತ ೩೦೦ ಎಕರೆ ಕಾಫಿ ತೋಟ ಹೊಂದಿzರೆ. ಕೆಟಿಜಿ ಗ್ರೂಪ್ ಆಫ್ ಕಂಪನಿ ಸಂಸ್ಥಾಪಕರಾಗಿ zರೆ. ಕಿಮ್ಮನೆ ಗುಂಡಪ್ಪಗೌಡ ಮತ್ತು ಸನ್ಸ್ ಅರೇಕಾ ನಟ್ಸ್ ಪಾಲುದಾರರಾಗಿzರೆ. ಶಿವಮೊಗ್ಗದಲ್ಲಿ ಅತ್ಯಾಧುನಿಕ ಸೌಕರ್ಯ ಹೊಂದಿರುವ ಕಿಮ್ಮನೆ ಗಾಲ್ಫ್ ರೆಸಾರ್ಟ್ ಮುನ್ನಡೆಸುತ್ತಿzರೆ.
ವಾಣಿಜ್ಯ ರತ್ನ ಪ್ರಶಸ್ತಿ ಪುರಸ್ಕೃತ ಕಿಮ್ಮನೆ ಜಯರಾಮ್ ಅವರಿಗೆ ಶಿವಮೊಗ್ಗ ಜಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್, ಮಾಜಿ ಅಧ್ಯಕ್ಷ ಡಿ.ಎಂ. ಶಂಕರಪ್ಪ, ಸಹ ಕಾರ್ಯದರ್ಶಿ ಜಿ. ವಿಜಯ್ ಕುಮಾರ್, ನಿರ್ದೇಶಕರಾದ ಇ. ಪರಮೇಶ್ವರ್, ಸುಕುಮಾರ್, ಗಣೇಶ್ ಅಂಗಡಿ ಅಭಿನಂದಿಸಿzರೆ.