ಚುನಾವಣೆಗಾಗಿ ಶ್ರೀ ರಾಮನನ್ನು ಬೀದಿಗೆ ತಂದ ಬಿಜೆಪಿಯವರಿಗೆ ಶಾಪ ನಿಶ್ಚಿತ…
ಶಿವಮೊಗ್ಗ: ಶ್ರೀರಾಮನನ್ನು ಬೀದಿಗೆ ತಂದ ಬಿಜೆಪಿಯವರಿಗೆ ಶ್ರೀರಾಮನೇ ಶಾಪ ಕೊಡುತ್ತಾನೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶ್ರೀರಾಮ ಎಲ್ಲರಿಗೂ ದೇವರೇ. ನಮಗೂ ಶ್ರೀರಾಮ ದೇವರು. ಆದರೆ, ಈ ಬಿಜೆಪಿಯವರು ಶ್ರೀರಾಮನ ಹೆಸರು ಹೇಳಿಕೊಂಡು ಚುನಾವಣೆ ಮಾಡಲು ಹೊರಟಿzರೆ. ರಾಮನನ್ನು ಬೀದಿಗೆ ತಂದಿzರೆ. ರಾಮನ ಶಾಪ ಖಂಡಿತಾ ಬಿಜೆಪಿ ಯವರಿಗೆ ತಟ್ಟುತ್ತದೆ ಎಂದರು.
ಬಿಜೆಪಿಯವರಿಗೆ ಸಂವಿಧಾನವೇ ಗೊತ್ತಿಲ್ಲ. ಭಾವನಾತ್ಮಕ ಸಂಬಂಧಗಳು, ಸರ್ಜಿಕಲ್ ಸ್ಟ್ರೈಕ್, ಪಾಕಿಸ್ತಾನದ ವಿಷಯ, ರಾಮನ ಜಪ, ಮುಂತಾದ ವಿಷಯಗಳನ್ನು ಇಟ್ಟುಕೊಳ್ಳುತ್ತಾರೆ. ದೆಹಲಿಯಲ್ಲಿ ಮುಷ್ಕರನಿರತರಾಗಿದ್ದ ರೈತರ ಮೇಲೆ ಡ್ರೋಣ್ ಮೂಲಕ ವಿಷದ ಗಾಳಿ ಬಿಡುತ್ತಾರೆ ಎಂದರೆ ಇವರ ಮನಸ್ಥಿತಿ ಹೇಗಿರಬೇಡ ಎಂದು ಪ್ರಶ್ನಿಸಿದರು.
ಕರ್ನಾಟಕದಲ್ಲಿ ಬರಗಾಲ ಬಂದು ಕುಡಿಯುವ ನೀರಿಗೂ ಸಂಕಷ್ಟವಾದರೂ ಕೇಂದ್ರಕ್ಕೆ ಕರುಣೆ ಬರಲಿಲ್ಲ. ರಾಜ್ಯಕ್ಕೆ ಬರಬೇಕಾದ ಅನುದಾನ ಕೇಳಲು ಕೋರ್ಟ್ಗೆ ಹೋಗಬೇಕಾದ ಅನಿವಾರ್ಯತೆ ಸೃಷ್ಠಿಸಿzರೆ. ಸುಪ್ರೀಂ ಛೀಮಾರಿ ಹಾಕಿದರೂ ಇವರಿಗೆ ನಾಚಿಕೆ ಇಲ್ಲ. ಕೇಂದ್ರದ ಬಿಜೆಪಿ ಸರ್ಕಾರ ಒಂದು ರೀತಿಯಲ್ಲಿ ಹೇಸಿಗೆಯ ಸರ್ಕಾರವಾಗಿದೆ ಎಂದರು.
ಕರ್ನಾಟಕದ ಬಿಜೆಪಿ ಸಂಸದರು ರಾಜ್ಯದ ಪರಿಸ್ಥಿತಿ ಬಗ್ಗೆ ಒಂದೇ ಒಂದು ಮಾತನಾಡಲಿಲ್ಲ. ಒಬ್ಬ ತಾಯಿ ತನ್ನ ಮಗುವಿಗೆ ಹಾಲು ಕುಡಿಸಲು ಆಗದಿದ್ದ ಸಂದರ್ಭದಲ್ಲಿ ಕನಿಷ್ಟಪಕ್ಷ ಮೇಲು ಹಾಲನ್ನು ಕುಡಿಸಬೇಕು. ನಮ್ಮ ರಾಜ್ಯ ಸರ್ಕಾರ ಆ ಕೆಲಸ ಮಾಡುತ್ತಿದೆ. ಆದರೆ ಇಂತಹ ಸಂಕಷ್ಟದ ಸಂದರ್ಭದಲ್ಲೂ ಕೂಡ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ೧.೫೬ ಲಕ್ಷ ಕೋಟಿ ರೂ.ಗಳನ್ನು ನೀಡಿಲ್ಲ. ಇದಕ್ಕೆಲ್ಲ ಮತದಾರ ಚುನಾವಣೆಯಲ್ಲಿ ಉತ್ತರ ಕೊಡುತ್ತಾನೆ ಎಂದರು.